ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿ ನಿರ್ಧಾರದ ಮೇಲೆ ಯೋಗೇಶ್ವರ್ ಭವಿಷ್ಯ

ಬಿಜೆಪಿ ಜೆಡಿಎಸ್ ಮೈತ್ರಿಗೆ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ನೀಡುವುದು ಉಭಯ ಪಕ್ಷಗಳಿಗೆ ಕಗ್ಗಂಟಾಗುವ ಎಲ್ಲ ಸಾಧ್ಯತೆಗಳು ಕಾಣಿಸುತ್ತಿವೆ. ಬಿಜೆಪಿ ಚಿಹ್ನೆಯಿಂದಲೇ ಟಿಕೆಟ್​ಗಾಗಿ ಸಿಪಿ ಯೋಗೇಶ್ವರ್ ಪಟ್ಟುಹಿಡಿದಿದ್ದಾರೆ. ಆದರೆ, ಅಂತಿಮವಾಗಿ ಎಲ್ಲವೂ ಹೆಚ್​ಡಿ ಕುಮಾರಸ್ವಾಮಿ ನಿರ್ಧಾರದ ಮೇಲೆ ಅವಲಂಬಿತವಾಗಿದೆ ಎನ್ನಲಾಗಿದೆ.

ಚನ್ನಪಟ್ಟಣ ಉಪ ಚುನಾವಣೆ: ಕುಮಾರಸ್ವಾಮಿ ನಿರ್ಧಾರದ ಮೇಲೆ ಯೋಗೇಶ್ವರ್ ಭವಿಷ್ಯ
ಸಿಪಿ ಯೋಗೇಶ್ವರ್
Edited By:

Updated on: Aug 14, 2024 | 11:13 AM

ನವದೆಹಲಿ, ಆಗಸ್ಟ್ 14: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್​ಗಾಗಿ ಸಿಪಿ ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಅವರು ಇದೀಗ ಬೆಂಗಳೂರಿಗೆ ವಾಪಸಾಗಿದ್ದಾರೆ. ಈ ಮಧ್ಯೆ, ಕುಮಾರಸ್ವಾಮಿ ನಿರ್ಧಾರದ ಮೇಲೆ ಸಿಪಿ ಯೋಗೇಶ್ವರ್​ ಭವಿಷ್ಯ ನಿಂತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಒಪ್ಪಿದ್ರೆ ಮಾತ್ರ ಯೋಗೇಶ್ವರ್ ಎನ್​​​ಡಿಎಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ಹೇಳಿವೆ. ಈ ಮಧ್ಯೆ, ಬಿಜೆಪಿ ಚಿಹ್ನೆಯಿಂದಲೇ ಸ್ಪರ್ಧಿಸಲು ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಚಿಹ್ನೆಯಲ್ಲಿ ಸ್ಪರ್ಧೆಗೆ ಧೈರ್ಯ ಮಾಡದ ಯೋಗೇಶ್ವರ್, ಟಿಕೆಟ್​​ಗಾಗಿ ದೆಹಲಿಯಲ್ಲಿ ಕಸರತ್ತು ನಡೆಸಿದ್ದಾರೆ. ಪ್ರಲ್ಹಾದ್ ಜೋಶಿ ಮೂಲಕ ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನಪಟ್ಟಿದ್ದಾರೆ. ಅಷ್ಟೇ ಅಲ್ಲದೆ, ರಾಜ್ಯ ನಾಯಕರು ಟಿಕೆಟ್ ವಿಚಾರದಲ್ಲಿ ನನ್ನ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಲೂಟಿ ಮಾಡಿದ್ದು ಸಾಕು, ಹೆಚ್​ಎಂಟಿ ಪುನಶ್ಚೇತನಕ್ಕೆ ಸಹಕಾರ ಕೊಡಿ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಟಾಂಗ್

ಆಗಸ್ಟ್ 16ರ ಬಳಿಕ ದೆಹಲಿಗೆ ಬರುವುದಾಗಿ ಕೆಲ ನಾಯಕರು ಯೋಗೇಶ್ವರ್​​ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆಗಸ್ಟ್ 16ರ ಬಳಿಕ ದೆಹಲಿಗೆ ಬಂದು ಕುಮಾರಸ್ವಾಮಿ ಜತೆ ಚರ್ಚೆ ಮಾಡಲಿದ್ದೇವೆ. ಆಗಸ್ಟ್ 18ರ ಬಳಿಕ ದೆಹಲಿಯಲ್ಲೇ ಕುಮಾರಸ್ವಾಮಿ ಜತೆ ಸಭೆ ನಿಗದಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆಗಸ್ಟ್ 18ರ ಬಳಿಕ ದೆಹಲಿಗೆ ಬರುವಂತೆ ಯೋಗೇಶ್ವರ್​ಗೆ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರವಷ್ಟೇ ಸಿಪಿ ಯೋಗೇಶ್ವರ್ ಕೆಲವು ಮಂದಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಸದ್ಯ ಅವರು ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us