ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯ: ಸಿ ಟಿ ರವಿ ಅಭಿಪ್ರಾಯ

| Updated By: ganapathi bhat

Updated on: Jul 13, 2021 | 10:44 PM

ಜನಸಂಖ್ಯೆ ನಿಯಂತ್ರಣಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಈ ನೀತಿ ಜಾರಿ ಕುರಿತು ಅಭಿಪ್ರಾಯಗಳು ಕೇಳಿಬಂರುತ್ತಿದೆ.

ಜನಸಂಖ್ಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಇದು ಸೂಕ್ತ ಸಮಯ: ಸಿ ಟಿ ರವಿ ಅಭಿಪ್ರಾಯ
ಸಿಟಿ ರವಿ
Follow us on

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯವಾಗಿದೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಆ ಮೂಲಕ, ಜನಸಂಖ್ಯಾ ನಿಯಂತ್ರಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ಸಿ.ಟಿ. ರವಿ ಒಲವು ತೋರಿದ್ದಾರೆ.

ಜನಸಂಖ್ಯೆ ನಿಯಂತ್ರಣಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಈ ನೀತಿ ಜಾರಿ ಕುರಿತು ಅಭಿಪ್ರಾಯಗಳು ಕೇಳಿಬಂರುತ್ತಿದೆ. ಜನಸಂಖ್ಯೆ ನಿಯಂತ್ರಣ ನೀತಿ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಚರ್ಚೆ ಮಾಡಲಾಗುವುದು. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಜುಲೈ 12ರಂದು ತಿಳಿಸಿದ್ದಾರೆ.

ಜನಸಂಖ್ಯೆ ನಿಯಂತ್ರಣ ಗುರಿ ಹೊಂದಿರುವ ನೂತನ ಜನಸಂಖ್ಯಾ ನೀತಿಯನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಬಿಡುಗಡೆ ಮಾಡಿದ್ದರು. ವಿಶ್ವ ಜನಸಂಖ್ಯಾ ದಿನಾಚರಣೆಯಾದ ಜುಲೈ 11ರಂದು ಈ ನೀತಿ ಬಿಡುಗಡೆ ಆಗಿತ್ತು. ಜನಸಂಖ್ಯೆ ಏರಿಕೆ ಅಭಿವೃದ್ಧಿಯ ಹಾದಿಗೆ ಅಡ್ಡಿಯಾಗಬಹುದು. ಜನಸಂಖ್ಯಾ ನೀತಿ 2021-2030 ರಲ್ಲಿ ಪ್ರತಿ ಸಮುದಾಯದ ಬಗ್ಗೆ ಕಾಳಜಿ ವಹಿಸಲಾಗಿದೆ ಎಂದು ಆದಿತ್ಯನಾಥ್ ಹೇಳಿದ್ದರು. ಜನಸಂಖ್ಯೆ ನಿಯಂತ್ರಣವು ಜನಸಾಮಾನ್ಯರಲ್ಲಿ ಅರಿವು ಮತ್ತು ಬಡತನದೊಂದಿಗೆ ನೇರವಾಗಿ ಸಂಪರ್ಕ ಹೊಂದಿದೆ ಎಂದು ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.


ಇದೀಗ ಸಿ.ಟಿ. ರವಿ ಕೂಡ ಜನಸಂಖ್ಯಾ ನಿಯಂತ್ರಣದ ಪರವಾಗಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿ ಎಸ್ ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ಬಿಜೆಪಿ ಪಾರ್ಲಿಮೆಂಟರಿ ಬೋರ್ಡ್; ಯಾರೂ ಹಾದಿಬೀದಿಯಲ್ಲಿ ಮಾತಾಡಬಾರದು: ಸಿ ಟಿ ರವಿ

ಯಾರೋ ಸೆಲೆಬ್ರೆಟಿ ಬಂದು ಸ್ಟೇಟ್‌ಮೆಂಟ್ ಕೊಟ್ಟ ತಕ್ಷಣ ಸರ್ಕಾರ ಥೀಯೆಟರ್‌ ಬಂದ್ ರೂಲ್ಸ್ ವಿತ್ ಡ್ರಾ ಮಾಡಿಕೊಳ್ತು: ಸಿಟಿ ರವಿ