AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ದೂರು: ಸಿದ್ದರಾಮಯ್ಯ ಬೆನ್ನಲ್ಲೇ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ 394 ಪುಟಗಳ ದಾಖಲೆ ಸಮೇತ ಖರ್ಗೆ ಹಾಗೂ ಅವರ ಕುಟುಂಬದ ಮೇಲೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್​ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬಿಜೆಪಿ ಮುಖಂಡ ದೂರು: ಸಿದ್ದರಾಮಯ್ಯ ಬೆನ್ನಲ್ಲೇ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ
ಬಿಜೆಪಿ ಮುಖಂಡ ದೂರು: ಸಿದ್ದರಾಮಯ್ಯ ಬೆನ್ನಲ್ಲೇ ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ
Vinayak Hanamant Gurav
| Edited By: |

Updated on:Sep 27, 2024 | 3:09 PM

Share

ಬೆಂಗಳೂರು, ಸೆಪ್ಟೆಂಬರ್​ 27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮೇಲೆ ಸಂಕಷ್ಟ ಎದುರಾಗುತ್ತಿವೆ. ಸದ್ಯ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೆಲ್ಲಾ ಒಂದು ಕಡೆಯಾದರೆ ಇದೀಗ ಮುಡಾ ರೀತಿಯಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಅವರ ಕುಟುಂಬದ ಮೇಲೆ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್ ದೂರು ನೀಡಿದ್ದಾರೆ.​

7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ದೂರು

ಒಟ್ಟು 7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ಎನ್.ಆರ್.ರಮೇಶ್ ದೂರು ನೀಡಿದ್ದಾರೆ. ಇದರಲ್ಲಿ ಎಂ.ಬಿ.ಪಾಟೀಲ್ ಮತ್ತು ಐಎಎಸ್​ ಅಧಿಕಾರಿಗಳು ಭಾಗಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ 5 ಎಕರೆ ಜಾಗ ಮಂಜೂರು ಮಾಡಲಾಗಿದೆ.

ಇದನ್ನೂ ಓದಿ: ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್​ಗೆ 5 ಎಕರೆ ಜಮೀನು: ಇದು ಅಧಿಕಾರ ದುರುಪಯೋಗಲ್ಲವೇ ಲಹರ್‌ ಸಿಂಗ್ ಪ್ರಶ್ನೆ

ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಸಮೀಪದಲ್ಲಿ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪ ಕೇಳಿ ಬಂದಿದೆ. ಇದು ರಾಜಕೀಯ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪಕ್ಕೂ ಕಾರಣವಾಗಿತ್ತು.

ಸದ್ಯ ಮಲ್ಲಿಕಾರ್ಜುನ ಖರ್ಗೆ, ಪುತ್ರರಾದ ಪ್ರಿಯಾಂಕ್​ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಮತ್ತು ಕುಟುಂಬದ ಹೆಸರಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ಶೈಕ್ಷಣಿಕ ಉದ್ದೇಶಕ್ಕೆಂದು ಅಕ್ರಮವಾಗಿ ಎರಡೆರಡು ಬಾರಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಕೆಐಎಡಿಬಿ ಭೂಮಿ ಹಂಚಿಕೆ ಪ್ರಕರಣ: ಖರ್ಗೆ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

2014ರಲ್ಲಿ ಬಿಟಿಎಂ 4ನೇ ಸ್ಟೇಜ್​​ನ ಎರಡನೇ ಬ್ಲಾಕ್​​ನಲ್ಲಿ 2 ಎಕರೆ ಬಿಡಿಎ ವ್ಯಾಪ್ತಿಯ ಸಿಎ ನಿವೇಶನ, 2024ರಲ್ಲಿ ಬಾಗಲೂರು ಬಳಿ 5 ಎಕರೆಯಷ್ಟು ಕೆಐಎಡಿಬಿ ಭೂಮಿಯನ್ನು ಮತ್ತೆ ಇವರ ಒಡೆತನ ಟ್ರಸ್ಟ್​ಗೆ ಪರಭಾರೆ ಮಾಡಿಕೊಳ್ಳಲಾಗಿದೆ. ಈ ಎರಡೂ ನಿವೇಶನಗಳನ್ನು ಒಂದೇ ಸಂಸ್ಥೆಗೆ ಒಂದೇ ಉದ್ದೇಶಕ್ಕೆ ಈ ಟ್ರಸ್ಟ್ ಪಡೆದುಕೊಂಡಿದೆ. ಈ ಎರಡೂ ನಿವೇಶಗಳ ಪ್ರಸ್ತುತ ಒಟ್ಟು ಮೌಲ್ಯ ಬರೋಬ್ಬರಿ 240 ಕೋಟಿ ರೂ. ಅಧಿಕ ಮೊತ್ತ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Fri, 27 September 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!