AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ನಿಯಮ ಉಲ್ಲಂಘಿಸಿ ಮಗನ ಮದುವೆ ಮಾಡಿದ ಗುಂಡ್ಲುಪೇಟೆಯ ಬಿಜೆಪಿ ಮುಖಂಡ

ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಸೇರಿದ್ದರು. ಈ ವೇಳೆ ಗುಂಡ್ಲುಪೇಟೆ ಪೊಲೀಸರು ಸಹ ಹಾಜರಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಕೊವಿಡ್ ನಿಯಮ ಉಲ್ಲಂಘಿಸಿ ಮಗನ ಮದುವೆ ಮಾಡಿದ ಗುಂಡ್ಲುಪೇಟೆಯ ಬಿಜೆಪಿ ಮುಖಂಡ
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿ ನಡೆದ ಮದುವೆ
TV9 Web
| Edited By: |

Updated on:Jun 04, 2021 | 4:49 PM

Share

ಚಾಮರಾಜನಗರ: ಬಿಜೆಪಿ ಕರ್ನಾಟಕ ಘಟಕದ ಎಸ್​ಸಿ ಮೋರ್ಚಾ ಉಪಾಧ್ಯಕ್ಷ ಮಲ್ಲೇಶ್ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಪಾರ್ವತಿ ಬೆಟ್ಟದ ದೇಗುಲದಲ್ಲಿ ಮಗ ಮಲ್ಲೇಶ್​ನ ಮದುವೆ ಮಾಡಿದ್ದಾರೆ. ಕೊವಿಡ್ ನಿಯಮ ಉಲ್ಲಂಘಿಸಿ ಮದುವೆ ನಡೆಸಲಾಗಿದೆ. ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಸೇರಿದ್ದರು. ಈ ವೇಳೆ ಗುಂಡ್ಲುಪೇಟೆ ಪೊಲೀಸರು ಸಹ ಹಾಜರಿದ್ದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ದೇಗುಲದ ಬೀಗ ಹಾಕಿ ಮದುವೆ ನಡೆಸಲಾಗಿದೆ. ಮಲ್ಲೇಶ್ ಪ್ರಸ್ತುತ ಗುಂಡ್ಲುಪೇಟೆ ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಜಿಲ್ಲೆಯಲ್ಲಿ ಗುರುವಾರ 348 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 331 ಮಂದಿ ಗುಣಮುಖರಾಗಿದ್ದಾರೆ. ಬುಧವಾರ ಸಂಜೆ 6ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ಎಂಟು ಮಂದಿ ಮೃತಪಟ್ಟಿದ್ದರು. ಈ ಪೈಕಿ ಐವರು ಕೋವಿಡ್‌ನಿಂದ ಹಾಗೂ ಮೂವರು ಕೋವಿಡ್​ಗೆ ಹೊರತಾದ ಕಾರಣಗಳಿಂದ ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 27,412 ಪ್ರಕರಣಗಳು ವರದಿಯಾಗಿದ್ದು, 24 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,840 ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 56 ಮಂದಿ ಐಸಿಯುನಲ್ಲಿದ್ದಾರೆ. 299 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. ಉಳಿದವರು ಕೋವಿಡ್‌ ಕೇರ್‌ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ 1,468 ಮಂದಿಯ ಗಂಟಲು ದ್ರವದ ಮಾದರಿಗಳ ಪರೀಕ್ಷಾ ವರದಿ ಬಂದಿವೆ. 1,138 ವರದಿಗಳು ನೆಗೆಟಿವ್‌ ಬಂದಿದ್ದರೆ 330 ಮಂದಿಗೆ ಸೋಂಕು ದೃಢವಾಗಿತ್ತು.

ವರದಿಯಾದ ಪ್ರಕರಣಗಳಲ್ಲಿ ಅತಿ ಹೆಚ್ಚು ಅಂದರೆ 146 ಪ್ರಕರಣಗಳು ಚಾಮರಾಜನಗರ ತಾಲ್ಲೂಕಿಗೆ ಸೇರಿವೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 65, ಕೊಳ್ಳೇಗಾಲದಲ್ಲಿ 49, ಹನೂರಿನಲ್ಲಿ 66, ಯಳಂದೂರು ತಾಲ್ಲೂಕಿನಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಿದೆ. ಗುಣಮುಖರಾದ 331 ಜನರಲ್ಲಿ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರು. ಕೊವಿಡ್‌ ಕೇರ್‌ ಸೆಂಟರ್‌ನಲ್ಲಿದ್ದ 80 ಹಾಗೂ ಮನೆಯಲ್ಲೇ ಆರೈಕೆಯಲ್ಲಿದ್ದ 248 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

(BJP Leader of Gundlupet Marries his son violating covid norms)

Published On - 4:48 pm, Fri, 4 June 21

Follow Us
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ