ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ, ಆರ್​ ಅಶೋಕ್​ ವಿರೋಧ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ ವಿರೋಧ ವ್ಯಕ್ತಪಡಿಸಿದ್ದಾರೆ.

ವಾರ್ತಾ ಇಲಾಖೆಯ ಜಾಹೀರಾತು ಪರಿಶೀಲನಾ ಸಮಿತಿಗೆ ರಮೇಶ್​ ಬಾಬು ಅಧ್ಯಕ್ಷ, ಆರ್​ ಅಶೋಕ್​ ವಿರೋಧ
ಆರ್​ ಅಶೋಕ್
Follow us
ವಿವೇಕ ಬಿರಾದಾರ
|

Updated on:Sep 11, 2024 | 1:06 PM

ಬೆಂಗಳೂರು, ಸೆಪ್ಟೆಂಬರ್​​ 11: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ (Department of Information and Public Relations) ನೂತನವಾಗಿ ರಚನೆಯಾದ ಜಾಹೀರಾತು ಪರಿಶೀಲನಾ ಸಮಿತಿಗೆ ಕೆಪಿಸಿಸಿ ವಕ್ತಾರ ರಮೇಶ್​ ಬಾಬು ಅವರನ್ನು ಅಧ್ಯಕ್ಷರಾಗಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ರಾಮಚಂದ್ರಪ್ಪ ಅವರನ್ನು ಸದಸ್ಯರಾಗಿ ನೇಮಕ ಮಾಡಿದಕ್ಕೆ ವಿಪಕ್ಷ ನಾಯಕ ಆರ್​ ಅಶೋಕ್​ (R Ashok) ವಿರೋಧ ವ್ಯಕ್ತಪಡಿಸಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರೇ, ಜಾಹೀರಾತುಗಳನ್ನ ಪರಿಶೀಲನೆ ಮಾಡಲು ತಮ್ಮ ಪಕ್ಷದ ಪದಾಧಿಕಾರಿಗಳನ್ನು ನೇಮಿಸಿದ್ದೀರಲ್ಲ, ಕೆಪಿಸಿಸಿ ವಕ್ತಾರರಿಗೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಿಗೆ ಜಾಹೀರಾತು ಪರಿಶೀಲನೆ ಮಾಡುವ ಯಾವ ಅರ್ಹತೆ ಇದೆ? ಯಾವ ಅನುಭವ ಇದೆ?” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ ಖಾತೆಯಲ್ಲಿ ಟ್ವೀಟ್​ ಮಾಡಿದ್ದಾರೆ.

ಟ್ವಿಟರ್​ ಪೋಸ್ಟ್​

“ಜಾಹೀರಾತು ಪರಿಶೀಲನೆ ಸಮಿತಿಗೆ ಅರ್ಹರನ್ನ ನೇಮಕ ಮಾಡಬೇಕಾದರೆ ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸಂಪಾದಕರನ್ನೋ ಅಥವಾ ವಾರ್ತಾ ಇಲಾಖೆಯ ಜಾಹಿರಾತು ವಿಭಾಗದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅನುಭವಿ ಅಧಿಕಾರಿಗಳನ್ನೋ ನೇಮಿಸಬಹುದಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್​ ಕಾರ್ಡ್​​ ರದ್ದುಪಡಿಸಲು ಹೊರಟ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

“ಅದು ಬಿಟ್ಟು ಜಾಹೀರಾತು ಪರಿಶೀಲನಾ ಸಮಿತಿಗೆ ಆಡಳಿತ ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿರುವುದು ಎಷ್ಟು ಸಮಂಜಸ? ಸರಣಿ ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿ ಸರ್ಕಾರ ಜನಮನ್ನಣೆ ಕಳೆದುಕೊಂಡಿರುವ ಈ ಸಂದರ್ಭದಲ್ಲಿ ಇಂತಹ ನಡೆ ಸಹಜವಾಗಿ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ” ಎಂದು ವಾಗ್ದಾಳಿ ಮಾಡಿದರು.

ಈ ನಡೆಯ ಹಿಂದೆ ಮಾಧ್ಯಮಗಳನ್ನ ಪರೋಕ್ಷವಾಗಿ ನಿಯಂತ್ರಣ ಮಾಡುವ ಹುನ್ನಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:33 pm, Wed, 11 September 24

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ