ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ: ದಾಖಲೆ ಬಿಚ್ಚಿಟ್ಟ ಆರ್​ ಅಶೋಕ್​

ಮೈಸೂರು ಅಭಿವೃದ್ಧಿ ನಿಗಮ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ಸಂಬಂಧ ಸಿಎಂ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್​ ನಾಯಕರು ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಮಧ್ಯೆ ಆರ್​ ಅಶೋಕ್​ ಸುದ್ದಿಗೋಷ್ಠಿ ನಡೆಸಿ ಮುಡಾ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದಾರೆ.

Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Aug 07, 2024 | 1:35 PM

ಮಂಡ್ಯ, ಆಗಸ್ಟ್​ 07: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್​. ಅಶೋಕ್​ (R Ashok) ದಾಖಲೆ ಸಮೇತ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾದಲ್ಲಿ 14 ಸೈಟ್ (3.16 ಎಕರೆ) ಜಮೀನು ತೆಗೊಂಡಿದ್ದಾರೆ. ಇದು ನಿಂಗ ಎಂಬುವರಿಗೆ ಸೇರಿದ ಜಮೀನಾಗಿದೆ. ನಿಂಗ ಎಂಬುವರು 1935ರಲ್ಲಿ 1 ರೂಪಾಯಿಗೆ ಕೊಂಡುಕೊಂಡಿದ್ದರು. ಇದಾದ ನಂತರ ನಿಂಗ ಮೃತಪಟ್ಟರು. ನಿಂಗ ಅವರ ಪತ್ನಿ ನಿಂಗಮ್ಮ ಅವರು 1990ರಲ್ಲಿ ನಿಧನರಾದರು. ನಿಂಗ ಕುಟುಂಬಸ್ಥರ ವಂಶ ವಂಶದಲ್ಲಿ 27 ಜನರು ಇದ್ದಾರೆ ಎಂದು ತಿಳಿಸಿದರು.

ನಂತರ 1968ರಲ್ಲಿ ಸರ್ವೆ ನಂಬರ್​ 464ರಲ್ಲಿನ ಇದೇ ಜಮೀನು ನಿಂಗಾ ಅವರ ಮತ್ತೋರ್ವ ಪುತ್ರ ಮಲ್ಲಯ್ಯ  ಅವರ ಹೆಸರಿಗೆ ರಿಜಿಸ್ಟರ್​ ಆಗುತ್ತದೆ. ನಂತರ 1990ರಲ್ಲಿ ಸರ್ವೆ ನಂಬರ್​ 464 ಜಮೀನು ಸೇರಿದಂತೆ 462 ಎಕರೆ ಜಮೀನನ್ನು ದೇವನೂರು ಬಡವಾಣೆ ನಿರ್ಮಾಣಕ್ಕೆ ಮುಡಾ ಪ್ರಾಥಮಿಕ ಅಧಿಸೂಚನೆ ಹೊರಡಿಸುತ್ತದೆ. ನಂತರ ದೇವರಾಜು ಅವರಿಗೆ ಮುಡಾ 3 ಲಕ್ಷ ರೂ. ಅವಾರ್ಡ್​ ನೀಡುತ್ತಾರೆ. ಈ ಅವಾರ್ಡ್​ ನೋಟಿಸ್​ಗೆ ಮಲ್ಲಯ್ಯ ಅವರು ಸಹಿ ಹಾಕುತ್ತಾರೆ. ನಂತರ 1998ರಲ್ಲಿ ಮುಡಾ ಸರ್ವೆ ನಂಬರ್​ 464 ಅನ್ನು ಭೂಸ್ವಾದಿನ ಕೈಬಿಡುತ್ತದೆ.

ನಂತರ ಈ ಜಮೀನು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಡಿನೋಟಿಫಿಕೇಷನ್ ಆಗುತ್ತದೆ. ಅವಾರ್ಡ್​ ಆದ ಮೇಲೆ ಡಿನೋಟಿಫಿಕೇಷನ್​ ಆಗಲು ಸಾಧ್ಯವೇ ಇಲ್ಲ. ಆದರೂ ಹೇಗೆ ಡಿನೋಟಿಫಿಕೇಷನ್​ ಆಗುತ್ತದೆ. ಈ ವೇಳೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದರು. ​ಸಿದ್ದರಾಮಯ್ಯ ಅವರು ನಿಂಗಾ ಅವರ ಮೂವರು ಪುತ್ರರಲ್ಲಿ ದೇವರಾಜು ಎಂಬ ಓರ್ವ ಪುತ್ರನಿಂದ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ, ಸುಪ್ರಿಂ ಕೋರ್ಟ್​ ಆದೇಶದ ಪ್ರಕಾರ ಇದು ನಿಯಮ ಬಾಹಿರವಾಗಿದೆ. ಒಬ್ಬರ ಕೈಯಿಂದ ಸಹಿ ಹಾಕಿಸಿಕೊಂಡು ರಿಜಿಸ್ಟರ್ ಮಾಡಿಕೊಳ್ಳಲು ಆಗಲ್ಲ ಎಂದು ತಿಳಿಸಿದರು.

ನಂತರ 2001ರಲ್ಲಿ ದೇವನೂರು ಬಡಾವಣೆ 3ನೇ ಹಂತ ಅಭಿವೃದ್ಧಿಗೆ 11.68 ಕೋಟಿ ಹಣ ಬಿಡುಗಡೆ ಆಯ್ತು. ನಂತರ ದೇವರಾಜು ಅವರ ಹೆಸರಿನಲ್ಲಿ ಡಿನೋಟಿಫಿಕೇಷನ್​​ ಮಾಡಲಾಗುತ್ತದೆ. 2004ರಲ್ಲಿ 3.16 ಎಕರೆ ದೇವರಾಜು ಅವರಿಂದ ಸಿದ್ದರಾಮಯ್ಯ ಅವರ ಬಾಮೈದ ಹೆಸರಿಗೆ ಕ್ರಯ ಮಾಡಿಕೊಳ್ಳಲಾಗುತ್ತದೆ. ಬಡಾವಣೆ ಕೆಲಸ ನಡೆಯುತ್ತಿರುವ ವೇಳೆ 2005 ರಿಂದ ವ್ಯವಸಾಯ ಭೂಮಿಯಿಂದ ನಿವೇಶನದ ಭೂಮಿಯಾಗಿ‌ ಪರಿವರ್ತನೆ ಆಗುತ್ತೆ. ಈ ವೇಳೆ ಜಿಲ್ಲಾಧಿಕಾರಿ, ತಹಶಿಲ್ದಾರ್ ಎಲ್ಲರೂ ಸ್ಥಳ ಪರಿಶೀಲನೆ ಮಾಡಿದ್ದಾರೆ. ಆದರೂ ಯಾವುದೆ ಕ್ರಮ ಕೈಗೊಂಡಿಲ್ಲ. 2005ರಲ್ಲಿ ಮೂಡಾ ಇಲ್ಲಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ ಎಂದು ಆದೇಶ ಮಾಡುತ್ತದೆ.

2010ರಲ್ಲಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಅವರ ಅಣ್ಣ ಅರಿಶಿಣ ಕುಂಕುಮ ರೂಪದಲ್ಲಿ 3.16 ಎಕರೆ ಜಮೀನು ನೀಡುತ್ತಾರೆ. 2014ರಲ್ಲಿ ಪಾರ್ವತಿ ಅವರು ಮೂಡಾಗೆ “ನನಗೆ ಬಂದ ಜಮೀನಿನಲ್ಲಿ ನೀವು ಬಡಾವಣೆ ಮಾಡಿದ್ದೀರಿ, ಬದಲಿ ಜಾಗವನ್ನು ನನಗೆ ನೀಡಿ ಎಂದು ಪತ್ರ ಬರೆಯುತ್ತಾರೆ. 2014 ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು, ಆಗ 50:50 ಅನುಮಾತದಲ್ಲಿ ಹಂಚಿಕೆ ಮಾಡಲಾಗುತ್ತದೆ ಎಂದು ನಿಯಮ ಜಾರಿಗೆ ತಂದರು. 2017ರಲ್ಲಿ ಮುಡಾದಲ್ಲಿ ಪಾರ್ವತಿ ಅವರ ಜಾಮೀನಿನ ವಿಚಾರ ಚರ್ಚೆಗೆ ಬರುತ್ತದೆ. ಆಗ 50:50 ಅನುಪಾತದಲ್ಲಿ ಬದಲಿ ನಿವೇಶನ ಕೊಡಲು ನಿರ್ಧಾರ ಮಾಡಲಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

Published On - 1:02 pm, Wed, 7 August 24

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ