ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್: ವಿನಯ ಕುಲಕರ್ಣಿ ಅರ್ಜಿ ವಜಾ
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ. ನ್ಯಾಯಾಲಯವು ನಾಲ್ಕು ವಾರಗಳಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಸೂಚಿಸಿದೆ. ಮುತ್ತಗಿಯ ತಪ್ಪೊಪ್ಪಿಗೆಯಿಂದ ವಿನಯ್ ಕುಲಕರ್ಣಿ ಮೇಲಿನ ಆರೋಪಗಳು ಬಲಗೊಂಡಿವೆ. ಯೋಗೇಶ್ ಗೌಡರ ಪತ್ನಿ ಮಲ್ಲವ್ವ ಅವರ ಅರ್ಜಿಯನ್ನೂ ವಜಾಗೊಳಿಸಲಾಗಿದೆ.

ಬೆಂಗಳೂರು, ಏಪ್ರಿಲ್ 04: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ (Dharwad BJP Leader Yogesh Gowda) ಕೊಲೆ ಪ್ರಕರಣಕ್ಕೆ ಸಂಬಂಧಿಸಂತೆ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ (Vinay Kulakarni) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಲಾಗಿದೆ. ಇದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ, ಅರ್ಜಿ ವಜಾಗೊಳಿಸಿದರು. ಯೋಗೇಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ ಅರ್ಜಿಯೂ ವಜಾಗೊಳಿಸಲಾಗಿದೆ.
ಯೋಗೀಶ್ ಗೌಡನನ್ನು ಕೊಲೆ ಮಾಡಿಸಿದ್ದೇ ಶಾಸಕ ವಿನಯ್ ಕುಲಕರ್ಣಿ ಎಂದು ಪ್ರಕರಣದ ಪ್ರಮುಖ ಆರೋಪಿ ಬಸವರಾಜ ಮುತ್ತಗಿ ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿದ್ದಾನೆ. ಮಾಫಿ ಸಾಕ್ಷಿಯಾದ ಬಸವರಾಜ ಮುತ್ತಗಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದನು. ಕೊಲೆ ಮಾಡಿಸಿದ್ದು ಯಾರು? ಕೊಲೆಗೆ ಪ್ಲಾನ್ ಮಾಡಿದ್ದು ಹೇಗೆ? ಕೊಲೆಗೆ ಸುಪಾರಿ ನೀಡಿದ್ದು ಯಾರು? ಅಂತ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದನು.
ಯೋಗೇಶ್ ಗೌಡರನ್ನು ಕೊಲೆ ಮಾಡಿಸಿದ್ದೇ ವಿನಯ ಕುಲಕರ್ಣಿ: ಮುತ್ತಗಿ
ಯೋಗೇಶ್ ಗೌಡ ಹತ್ಯೆಗೆ ಧಾರವಾಡದ ಯುವಕರು ಒಪ್ಪಿಗೆ ಸೂಚಿಸಲಿಲ್ಲ. ಹೀಗಾಗಿ, ಶಾಸಕ ವಿನಯ್ ಕುಲಕರ್ಣಿ ಸೂಚನೆ ಮೇರೆಗೆ ಬೆಂಗಳೂರಿನಿಂದ ಹುಡುಗರನ್ನು ಕರೆಸಿ ಸಂಚು ರೂಪಿಸಿ ಯೋಗೀಶ್ ಗೌಡನನ್ನು ಕೊಲೆ ಮಾಡಲಾಗಿದೆ ಎಂದು ಮುತ್ತಿಗೆ ಹೇಳಿಕೆ ನೀಡಿದ್ದನು. ಇನ್ನು, ಆರೋಪಿ ಬಸವರಾಜ ಮುತ್ತಗಿ ಶಾಸಕ ವಿನಯ ಕುಲಕರ್ಣಿಯ ಆಪ್ತನಾಗಿದ್ದಾನೆ. 2016ರ ಜೂನ್ 15ರಂದು ಧಾರವಾಡದಲ್ಲಿರುವ ಜಿಮ್ ಎದುರುಗಡೆ ಯೋಗೇಶ್ ಗೌಡನನ್ನು ಹತ್ಯೆ ಮಾಡಲಾಯಿತು ಎಂದು ಬಸವರಾಜ ಮುತ್ತಗಿ ನ್ಯಾಯಾಲಯದ ಮುಂದೆ ಹೇಳಿದ್ದನು.
ಇದನ್ನೂ ಓದಿ: ಅಂಬೇಡ್ಕರ್ ಜಯಂತಿ ಕೈಬಿಟ್ಟ ಸರ್ಕಾರ: ಆರೋಪ
ಬಸವರಾಜ ಮುತ್ತಗಿ ತಪ್ಪೊಪ್ಪಿಗೆ ಹೇಳಿಕೆಯಿಂದ ಶಾಸಕ ವಿನಯ್ ಕುಲಕರ್ಣಿ ಮೇಲಿನ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗಿದೆ. ಇನ್ನು, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ಸಿಬಿಐ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.