AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾಗೆ ಸೈಟ್ ವಾಪಸ್: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದ ಅಶೋಕ್

ಮುಡಾ ನಿವೇಶನ ಹಗರಣ ಹಲವಾರು ರಾಜಕೀಯ ಆರೋಪ, ಪ್ರತ್ಯಾರೋಪ ಮತ್ತು ಕಾನೂನು ಹೋರಾಟಗಳಿಗೆ ಕಾರಣವಾಗಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ, ತಮಗೆ ಮಂಜೂರಾಗಿರುವ 14 ಸೈಟ್‌ಗಳನ್ನು ವಾಪಸ್ ನೀಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಖುದ್ದು ಅವರೇ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದರೊಂದಿಗೆ ಈ ಮುಡಾ ಪ್ರಕರಣಕ್ಕೆ ನಾಟಕೀಯ ತಿರುವು ದೊರಕಿದೆ. ಇನ್ನು ಈ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

ಮುಡಾಗೆ ಸೈಟ್ ವಾಪಸ್: ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರಲ್ಲ ಎಂದ ಅಶೋಕ್
ಸಿದ್ದರಾಮಯ್ಯ-ಅಶೋಕ್
ರಮೇಶ್ ಬಿ. ಜವಳಗೇರಾ
|

Updated on: Sep 30, 2024 | 11:14 PM

Share

ಬೆಂಗಳೂರು, (ಸೆಪ್ಟೆಂಬರ್, 30): 14 ನಿವೇಶಗಳನ್ನು ವಾಪಡ್ ನೀಡುವುದಾಗಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ನಿರ್ಧರಿಸಿದ್ದಾರೆ. ಈ ಬಗ್ಗೆ ಖುದ್ದು ಪಾರ್ವತಿ ಅವರೇ ಮುಡಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯನವರ ರಾಜಕೀಯ ಜೀವನದ ಮೇಲಾಗುತ್ತಿರುವ ಅವಮಾನ, ಕಳಂಕವನ್ನು ನೋಡಲಾಗದೇ ಪಾರ್ವತಿ ಅವರು ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್ ಪ್ರತಿಕ್ರಿಯಿಸಿದ್ದು, ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬರುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಶೋಕ್, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ. ಆದರೆ ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 14 ಸೈಟ್​ ಹಿಂದಿರುಗಿಸಲು ನಿರ್ಧಾರ: ಮುಡಾಗೆ ಸಿಎಂ ಪತ್ನಿ ಬರೆದ ಪತ್ರದಲ್ಲೇನಿದೆ?

‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶರಣಾಗತಿಯೋ ಅಥವಾ ಡ್ಯಾಮೇಜ್ ಕಂಟ್ರೋಲಾ?

ಇನ್ನು ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಸಹ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿದ್ದು, ಇದು ಶರಣಾಗತಿಯೋ ಅಥವಾ ಡ್ಯಾಮೇಜ್ ಕಂಟ್ರೋಲಾ? ಪರಿಹಾರ ರೂಪದಲ್ಲಿ ಬಂದ 14 ಸೈಟ್ ಹಿಂತಿರುಗಿಸುತ್ತಿದ್ದಾರೆ. ಯಾಕೆ ಈ ನಿರ್ಧಾರ ತೆಗೆದುಕೊಂಡಿದ್ದೀರಿ. ಯಾಕೆ ಸೈಟ್ ಹಿಂತಿರುಗಿಸುತ್ತಿದ್ದೀರಿ. ವಾಮಮಾರ್ಗದಲ್ಲಿ ಸೈಟ್ ಪಡೆದಿದ್ದೀರೆಂದು ನಿಮಗೆ ಗೊತ್ತು. ಇದು ಅಧಿಕಾರದ ದುರುಪಯೋಗ. ಸ್ವಜನಪಕ್ಷಪಾದಿಂದ ಮಾಡಿರೋ ಕೆಲಸ ಇದು. ಮುಡಾ ಓಪನಲೀ ಶಟ್ ಆ್ಯಂಡ್ ಕೇಸ್ ಎಂದು ಬರೆದುಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.