AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನ್ನ ಭೇಟಿಯಾದ ಸ್ಪೀಕರ್: ಬಿಜೆಪಿ ಆಕ್ಷೇಪ

ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು ಮತ್ತು ಉಪಸಭಾಪತಿ ಹುದ್ದೆಗಳು ಯಾವುದೇ ರಾಜಕೀಯ ಪಕ್ಷದ ವ್ಯಾಪ್ತಿಗೆ ಸೀಮಿತವಾಗದ, ಅತ್ಯುನ್ನತ ಸಾಂವಿಧಾನಿಕ ಸ್ಥಾನಗಳಾಗಿವೆ. ಆದ್ರೆ. ಇತ್ತೀಚೆಗೆಷ್ಟೇ ಕಾಂಗ್ರೆಸ್ ಹೈಕಮಾಂಡ್ ತನ್ನ ಲೆಟರ್ ಹೆಡ್​​ನಲ್ಲಿ ಪ್ರಕಟಿಸಿದ ಸಚಿವರ ಪಟ್ಟಿಯಲ್ಲಿ ಸ್ಪೀಕರ್ ಹಾಗೂ ಸಭಾಪತಿ ಹೆಸರು ಉಲ್ಲೇಖಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಕರ್ನಾಟಕ ಕಾಂಗ್ರೆಸ ಉಸ್ತುವಾರಿ ಅವರನ್ನ ಭೇಟಿ ಮಾಡಿ ವಿವಾದಕ್ಕೀಡಾಗಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನ್ನ ಭೇಟಿಯಾದ ಸ್ಪೀಕರ್: ಬಿಜೆಪಿ ಆಕ್ಷೇಪ
ಸಲೀಂ ಅಹ್ಮದ್, ಜಿಎಸ್ ಪಾಟೀಲ್
ರಮೇಶ್ ಬಿ. ಜವಳಗೇರಾ
|

Updated on: Sep 02, 2026 | 8:07 PM

Share

ಬೆಂಗಳೂರು, (ಸೆಪ್ಟೆಂಬರ್ 02): ವಿಧಾನಸಭೆ ಸ್ಪೀಕರ್ ಜಿ.ಎಸ್.ಪಾಟೀಲ್ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…ವಿಧಾನಸಭೆ ಸ್ಪೀಕರ್ ಜಿಎಸ್ ಪಾಟೀಲ್ ಹಾಗೂ ವಿಧಾನಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ  ವಿಪಕ್ಷ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದವರು ಪಕ್ಷದ ಸದಸ್ಯತ್ವಕ್ಕೆ ಮೊದಲು ರಾಜೀನಾಮೆ ನೀಡಬೇಕು. ನಿಷ್ಪಕ್ಷಪಾತಿಯಾಗಿರಬೇಕು. ಆದರೆ ಸಭಾಧ್ಯಕ್ಷರೇ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭೇಟಿಯಾಗಿ ಕೃತಜ್ಞತೆಯ ” ಸಂದಾಯ” ಮಾಡಿರುವುದು ಅವರ ಕಾರ್ಯವೈಖರಿಯನ್ನು ಪ್ರಶ್ನಾರ್ಹವಾಗಿಸುತ್ತದೆ. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಲ್ಲೇ ಇನ್ನು ಮುಂದೆ ಸದನ ನಡೆಯಬಹುದು ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ಆಕ್ರೋಶ ವ್ಯಕ್ತಡಿಸಿದ್ದಾರೆ.

ಹೈಕಮಾಂಡ್ ನಿರ್ದೇಶನದಂತೆ ಸದನ ನಡೆಯಬಹುದು

ಟ್ವೀಟ್ ಮಾಡಿರುವ ಸುನಿಲ್ ಕುಮಾರ್, ಸಾಂವಿಧಾನಿಕ ಹುದ್ದೆಯ ಘನತೆಯನ್ನು ಲೆಟರ್ ಹೆಡ್ ಗೆ ಇಳಿಸಿದ ಕಾಂಗ್ರೆಸ್ ಹೈಕಮಾಂಡ್ ಈಗ ಸ್ಪೀಕರ್ ಹುದ್ದೆಯನ್ನು ಅಕ್ಷರಶಃ ರಾಜಕೀಯ ನೇಮಕಾತಿಯನ್ನಾಗಿಸಿದೆ. ಸಭಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದವರು ಪಕ್ಷದ ಸದಸ್ಯತ್ವಕ್ಕೆ ಮೊದಲು ರಾಜೀನಾಮೆ ನೀಡಬೇಕು. ನಿಷ್ಪಕ್ಷಪಾತಿಯಾಗಿರಬೇಕು. ಆದರೆ ಸಭಾಧ್ಯಕ್ಷರೇ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭೇಟಿಯಾಗಿ ಕೃತಜ್ಞತೆಯ ” ಸಂದಾಯ” ಮಾಡಿರುವುದು ಅವರ ಕಾರ್ಯವೈಖರಿಯನ್ನು ಪ್ರಶ್ನಾರ್ಹವಾಗಿಸುತ್ತದೆ. ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಲ್ಲೇ ಇನ್ನು ಮುಂದೆ ಸದನ ನಡೆಯಬಹುದೆಂಬ ಅಪಾಯವನ್ನು ಈ ಭೇಟಿ ಧ್ವನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೆಪಿಎಸ್​​ಸಿ ಹಗರಣ: ಪ್ರಿಯಾಂಕ್ ಖರ್ಗೆ RDPR ಮಂತ್ರಿಯಾಗಿದ್ದಾಗ ಏನೇನಾಯ್ತು ಅಂತ ಎಳೆ ಎಳೆಯಾಗಿ ಬಿಚ್ಚಿಟ್ಟ ಕುಮಾರಸ್ವಾಮಿ

ಕಾಂಗ್ರೆಸ್ ವೀಕ್ಷಕರಿಗೆ ಕೃತಜ್ಞತೆ ಸಮರ್ಪಣೆಯೇ?

ಇನ್ನು ಈ ಬಗ್ಗೆ ಮತ್ತೋರ್ವ ಬಿಜೆಪಿ ಶಾಸಕ ಸುರೇಶ್ ಕುಮಾರ ಸಹ ಆಕ್ಷೇಪಿಸಿದ್ದು, ಕರ್ನಾಟಕ ವಿಧಾನಸಭೆಯ ವಿಧಾನಸಭಾಧ್ಯಕ್ಷರಿಂದ ರಾಜ್ಯದ ಕಾಂಗ್ರೆಸ್ ವೀಕ್ಷಕರಿಗೆ ಕೃತಜ್ಞತೆ ಸಮರ್ಪಣೆಯೇ? ಅಂದು ಕಾಂಗ್ರೆಸ್ ಪಕ್ಷದ ಲೆಟರ್ ಹೆಡ್ ಮೂಲಕ ಸಭಾಧ್ಯಕ್ಷರ ಸ್ಥಾನಕ್ಕೆ ಸೂಚಿಸಲಾಗಿತ್ತು. ಇಂದು ಸಭಾಧ್ಯಕ್ಷರು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿರುವ ಈ ಚಿತ್ರ ಒಂದು ಅಪಸವ್ಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪಕ್ಷದ ಲೆಟರ್‌ಹೆಡ್‌ನಲ್ಲಿ ಪ್ರಕಟಿಸಿತ್ತು. ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸ್ಪೀಕರ್, ಡೆಪ್ಯುಟಿ ಸ್ಪೀಕರ್, ಸಭಾಪತಿ, ಉಪಸಭಾಪತಿ ಹುದ್ದೆಗಳಿಗೆ ಹೆಸರು ಆಯ್ಕೆ ಮಾಡಿ ಪ್ರಕಟಿಸಿರುವ ವಿಚಾರಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ಕಾಂಗ್ರೆಸ್‌ ಪಕ್ಷ ನಾಂದಿ ಹಾಡಿದೆ ಎಂದು ವಾಗ್ದಾಳಿ ನಡೆಸಿತ್ತು. ಇದೀಗ ಖುದ್ದು ಸ್ಪೀಕರ್ ಹಾಗೂ ಸಭಾಪತಿ, ಕಾಂಗ್ರೆಸ್ ಹೈಕಮಾಂಡ್ ನಾಯಕನನ್ನು ಭೇಟಿ ಮಾಡಿದ್ದು ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ