Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಸಹಕರಿಸಿ: ಕಾಂಗ್ರೆಸ್​ ವ್ಯಂಗ್ಯಭರಿತ ಸಲಹೆ!

ಬಿಜೆಪಿ ಶಾಸಕ ಮುನಿರತ್ನಂ ನಾಯ್ಡು ವಿರುದ್ಧ ಈಗಾಗಲೇ ಜಾತಿ ನಿಂದನೆ ಕೇಸ್, ಲಂಚ ಪ್ರಕರಣ ಸಂಚಲನ ಸೃಷ್ಟಿಸಿದೆ. ಅಲ್ಲದೇ ಇದೀಗ ಮೂರನೇ ಪ್ರಕರಣದ ಲೈಂಗಿಕ ದೌರ್ಜನ್ಯ ಕೇಸ್​​​ನಲ್ಲಿ ಪೊಲೀಸ್ ವಶದಲ್ಲಿದ್ದಾರೆ. ಇವೆಲ್ಲದರ ಮಧ್ಯ 'ಏಡ್ಸ್ ರಕ್ತ' ಬಳಸಿ ಎದುರಾಳಿಗಳ ಮೇಲೆ ದಾಳಿ ಮಾಡಿದ ಆರೋಪ ಮುನಿರತ್ನ ವಿರುದ್ಧ ಕೇಳಿಬಂದಿದೆ. ಅದರಲ್ಲೂ ಮುಖ್ಯವಾಗಿ ರಾಜಕೀಯವಾಗಿ ಅಣೆಯಲು ಆರ್. ಅಶೋಕ್ ಮೇಲೆ 'ಏಡ್ಸ್ ರಕ್ತ' ಪ್ರಯೋಗ ಮಾಡಲು ಸ್ಕೆಚ್ ಹಾಕಿದ್ದರು ಎನ್ನುವ ಅಂಶ ಬೆಳಕಿಗೆ ಬಂದಿದೆ. ಇನ್ನು ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವ್ಯಂಗ್ಯವಾಡಿದೆ.

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಸಹಕರಿಸಿ: ಕಾಂಗ್ರೆಸ್​ ವ್ಯಂಗ್ಯಭರಿತ ಸಲಹೆ!
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Sep 20, 2024 | 4:05 PM

ಬೆಂಗಳೂರು, (ಸೆಪ್ಟೆಂಬರ್ 20): ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸ್​ ವಶದಲ್ಲಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಹೂ ಗುಚ್ಛ ನೀಡುವ ನೆಪದಲ್ಲಿ ಇಂಜೆಕ್ಟ್‌ ಮಾಡಲು ಮುನಿರತ್ನ ಅವರು ಪ್ಲ್ಯಾನ್‌ ಹಾಕಿಕೊಂಡಿದ್ದರು ಎಂದು ಹೇಳಲಾಗಿದೆ. ಹೌದು.. ಮುನಿರತ್ನಂ ನಾಯ್ಡು ಟಾರ್ಗೆಟ್ ಮಾಡಿದ್ದ ನಾಯಕರನ್ನ ‘ಏಡ್ಸ್ ರಕ್ತ’ ಬಳಸಿ ಎಚ್‌ಐವಿ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ವ್ಯಂಗ್ಯವಾಡಿದೆ.

ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಅಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತ್ನನನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕಾಂಗ್ರೆಸ್​​ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಮುನಿರತ್ನ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ 

ಕೃಷ್ಣಬೈರೇಗೌಡ ಹೇಳಿದ್ದೇನು?

ಇನ್ನು ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾತನಾಡಿದ್ದು, ದುರುದ್ದೇಶ ಪೂರ್ವಕವಾಗಿ ಏಡ್ಸ್ ಪೀಡಿತ ಮಹಿಳೆಯರನ್ನು ಬಿಟ್ಟು ಧಂದೆ ಮಾಡಿದ್ದು ದುರಂತ. ಅಧಿಕಾರಿಗಳು ರಾಜಕಾರಣಿಗಳು ಅವರ ಅಧಿಕಾರ ದುರುಪಯೋಗ ಕಂಡು ಬಂದಿದೆ. ಮುನಿರತ್ನ ಭ್ರಷ್ಟಚಾರಿ ಅನ್ನೊದು ಗೊತ್ತಿತ್ತು. ಆದ್ರೆ ವಿಕೃತ ಮನಸ್ಸಿನ ಸೆಕ್ಸ್ ರಾಕೆಟ್​ ನಡೆಸ್ತಾನೆ ಎಂದು ಈಗ ಗೊತ್ತಾಯಿತು. ಪೊಲೀಸ್ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ದುರ್ಬಳಕೆ ಆಗಿದೆ. ಹನಿಟ್ರ್ಯಾಪ್ ಗೆ ಒಳಗಾದವರಿಗೆ ಬ್ಲಾಕ್ ಮೇಲ್ ಮಾಡಿ ಅವರ ಮೂಲಕ ಟ್ರ್ಯಾಪ್ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.

ಮುನಿರತ್ನಂ ನಾಯ್ಡು ವಿರುದ್ಧದ ಏಡ್ಸ್ ರಕ್ತದ ಆರೋಪ ಕೇಳಿಬಂದ ನಂತರ ಸಂಚಲನವೇ ಸೃಷ್ಟಿಸಿದೆ. ಅದರಲ್ಲೂ ಬಿಜೆಪಿ ನಾಯಕರಲ್ಲಿ ಆತಂಕ ಮನೆ ಮಾಡಿದೆ. ಆದ್ರೆ, ಮುನಿರತ್ನಂ ‘ಏಡ್ಸ್ ರಕ್ತ’ ಬಳಸಲು ಮುಂದಾಗಿದ್ದರು ಎನ್ನುವುದು ಎಷ್ಟು ಸರಿಯೋ ತಪ್ಪೋ ಗೊತ್ತಿಲ್ಲ. ಈ ಬಗ್ಗೆ ಸೂಕ್ತ ತನಿಖೆಯಿಂದ ತಿಳಿದುಬರಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?