ಕವಿ, ಸಾಹಿತಿ ಸಿದ್ದಲಿಂಗಯ್ಯ ಹೆಸರನ್ನು ಬಿಬಿಎಂಪಿ ವ್ಯಾಪ್ತಿಯ ವೃತ್ತ ಅಥವಾ ಮೇಲ್ಸೇತುವೆಗೆ ಇಡುವಂತೆ ಶ್ರೀರಾಮುಲು ಮನವಿ

ಬಿಬಿಎಂಪಿ ವ್ಯಾಪ್ತಿ ವೃತ್ತ ಅಥವಾ ರಸ್ತೆ ಅಥವಾ ಮೇಲ್ಸೇತುವೆ ಇದು ಯಾವುದಕ್ಕಾದರೂ ಸಿದ್ದಲಿಂಗಯ್ಯ ಅವರ ಹೆಸರಿಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶ್ರೀರಾಮುಲು ಪತ್ರ ಬರೆದು ತಿಳಿಸಿದ್ದಾರೆ.

ಕವಿ, ಸಾಹಿತಿ ಸಿದ್ದಲಿಂಗಯ್ಯ ಹೆಸರನ್ನು ಬಿಬಿಎಂಪಿ ವ್ಯಾಪ್ತಿಯ ವೃತ್ತ ಅಥವಾ ಮೇಲ್ಸೇತುವೆಗೆ ಇಡುವಂತೆ ಶ್ರೀರಾಮುಲು ಮನವಿ
ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ (ಚಿತ್ರ ಕೃಪೆ: ಎಎನ್​ಐ ಸುದ್ಧಿ ಸಂಸ್ಥೆ)
Follow us
TV9 Web
| Updated By: ganapathi bhat

Updated on: Jun 14, 2021 | 5:48 PM

ಬೆಂಗಳೂರು: ದಲಿತ ಕವಿ, ಸಾಹಿತಿ ದಿವಂಗತ ಡಾ. ಸಿದ್ದಲಿಂಗಯ್ಯ ಅವರ ಹೆಸರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವೃತ್ತ ಅಥವಾ ಮೇಲ್ಸೇತುವೆಗೆ ಇಡಬೇಕು ಎಂದು ಸೂಚಿಸಿ ಬಿಬಿಎಂಪಿ ಆಡಳಿತಾಧಿಕಾರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಪತ್ರ ಬರೆದಿದ್ದಾರೆ.

ಬಿಬಿಎಂಪಿ ವ್ಯಾಪ್ತಿ ವೃತ್ತ ಅಥವಾ ರಸ್ತೆ ಅಥವಾ ಮೇಲ್ಸೇತುವೆ ಇದು ಯಾವುದಕ್ಕಾದರೂ ಸಿದ್ದಲಿಂಗಯ್ಯ ಅವರ ಹೆಸರಿಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಶ್ರೀರಾಮುಲು ಪತ್ರ ಬರೆದು ತಿಳಿಸಿದ್ದಾರೆ.

ಖ್ಯಾತ ಕವಿ, ಸಾಹಿತಿ, ದಲಿತ ಹೋರಾಟಗಾರ ಡಾ. ಸಿದ್ದಲಿಂಗಯ್ಯ ಜೂನ್ 11ರಂದು ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ನಿಧನರಾಗಿದ್ದರು. ಕೆಲವು ದಿನಗಳ ಕಾಲ ಕೊವಿಡ್-19 ಸೋಂಕಿನ ವಿರುದ್ಧ ಹೋರಾಡಿದ ಅವರು ಮೊನ್ನೆಯಷ್ಟೇ ಕೊನೆಯುಸಿರೆಳೆದಿದ್ದರು. ವಿಧಾನಪರಿಷತ್‌ನ ಮಾಜಿ ಸದಸ್ಯರೂ ಆಗಿದ್ದ ಸಿದ್ದಲಿಂಗಯ್ಯ ನಿಧನಕ್ಕೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದರು.

ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿತ್ತು.

ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸಹಿತ ಹಲವು ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದರು. ಸರ್ಕಾರದ ಗೌರವಗಳೊಂದಿಗೆ ಅಂತಿಮ ವಿಧಿವಿಧಾನ ನಡೆಸಲಾಗಿತ್ತು. ಇದೀಗ, ಅವರ ಹೆಸರನ್ನು ಬೆಂಗಳೂರಿನ ರಸ್ತೆ, ವೃತ್ತ ಅಥವಾ ಮೇಲ್ಸೇತುವೆಗೆ ಇಡಲು ಶ್ರೀರಾಮುಲು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Siddalingaiah Funeral: ಸಕಲ ಸರ್ಕಾರಿ ಗೌರವದೊಂದಿಗೆ ನಡೆದ ಡಾ.ಸಿದ್ದಲಿಂಗಯ್ಯ ಅಂತ್ಯಸಂಸ್ಕಾರ; ಕೊನೆಯ ಫೋಟೊಗಳು ಇಲ್ಲಿವೆ

ಸಿದ್ದಲಿಂಗಯ್ಯ ನುಡಿನಮನ : ತಮ್ಮನ್ನು ತಾವೇ ಹಾಸ್ಯಕ್ಕೆ ಒಳಪಡಿಸಿಕೊಳ್ಳುತ್ತಿದ್ದುದರ ಹಿಂದೆ ತಾತ್ವಿಕತೆ ಇತ್ತು

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ