ಮುಖ್ಯಮಂತ್ರಿ ನಾಪತ್ತೆ ಎಂದ ಯತ್ನಾಳ್; ಈ ಮಾತು ಹಿಂಪಡೆಯಬೇಕೆಂದ ರೇಣುಕಾಚಾರ್ಯ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿಧಾನಸಭೆಯಲ್ಲಿ ಎತ್ತಿದ ಪಂಚಮಸಾಲಿ ಮೀಸಲಾತಿ ವಿಚಾರ ಬಿಸಿ ಚರ್ಚೆಗೆ ನಾಂದಿಯಾಯಿತು. ಈ ವೇಳೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಪರ ಬ್ಯಾಟ್ ಬೀಸಿದರು.

ಮುಖ್ಯಮಂತ್ರಿ ನಾಪತ್ತೆ ಎಂದ ಯತ್ನಾಳ್; ಈ ಮಾತು ಹಿಂಪಡೆಯಬೇಕೆಂದ ರೇಣುಕಾಚಾರ್ಯ
ಬಸನಗೌಡ ಪಾಟೀಲ್ ಯತ್ನಾಳ್ (ಸಂಗ್ರಹ ಚಿತ್ರ)
Follow us
Srinivas Mata
|

Updated on: Mar 10, 2021 | 1:29 PM

ಬೆಂಗಳೂರು: “ನಾನೇನೂ ಹಾದಿಬೀದಿಯಲ್ಲಿ ಹೋಗುವ ವ್ಯಕ್ತಿಯಲ್ಲ, ವಾಜಪೇಯಿ ಸರ್ಕಾರದಲ್ಲಿ ಸಚಿವನಾಗಿದ್ದವನು. ಮುಖ್ಯಮಂತ್ರಿ ಉತ್ತರ ನೀಡದಿದ್ದರೆ ಜಯಮೃತ್ಯುಂಜಯ ಶ್ರೀಗಳು ಅಮರಣಾಂತ ಉಪವಾಸ ಶುರು ಮಾಡುತ್ತಾರೆ. ಸಮುದಾಯ ವಿಚಾರದಲ್ಲಿ ಕೆಟ್ಟ ಸಂದೇಶ ಹೋಗುತ್ತದೆ. ಇನ್ನು ಸರ್ಕಾರದಿಂದ ಬಹಳ ಕೆಟ್ಟ ಸಂದೇಶ ಹೋಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಮ್ಮ ಸಮುದಾಯ ದೊಡ್ಡ ಮಟ್ಟದಲ್ಲಿ ಮತ ನೀಡಿದೆ. ನಮಗೆ ಬೇರೆ ಯಾವುದೇ ಸಚಿವರು ಉತ್ತರಿಸಬೇಕಾಗಿಲ್ಲ. ಸ್ವತಃ ಮುಖ್ಯಮಂತ್ರಿ ನೇರವಾಗಿ ಉತ್ತರ ಕೊಡಬೇಕು. ಇಲ್ಲದಿದ್ದರೆ ಸದನದ ಒಳಗೆ ನಾನು ಹೋರಾಟ ಮಾಡುತ್ತೇನೆ. ಹೊರಗೆ ಸಮುದಾಯದವರು ಹೋರಾಟ ಮಾಡುತ್ತಾರೆ,” ಎಂದು ಬುಧವಾರ ವಿಧಾನಸಭೆಯ ಅಧಿವೇಶನದ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಲವು ಸಮುದಾಯಗಳಿಗೆ ಮೀಸಲಾತಿ ಸಿಕ್ಕಿಲ್ಲ. ಸಾಮಾಜಿಕ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಬೇಕಾಗಿದೆ. ಸಣ್ಣ ಸಣ್ಣ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಅವರನ್ನು ಪ್ರತಿನಿಧಿಸುವವರು ಇಲ್ಲದೆ ಅನ್ಯಾಯವಾಗುತ್ತಿದೆ. ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು. ಇದಕ್ಕಾಗಿ 25 ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಎಸ್.ಎಂ.ಕೃಷ್ಣ ಕಾಲದಲ್ಲಿ ಈ ಬಗ್ಗೆ ಅಧ್ಯಯನಕ್ಕೆ ಸೂಚಿಸಿದ್ದರು ಎಂದು ಅವರು ಹೇಳಿದರು.

ಪಂಚಮಸಾಲಿ ಸಮುದಾಯ ಎಂದು ಎಲ್ಲಿಯೂ ನಾವು ಬರೆದಿಲ್ಲ. ನಾವು ಎಲ್ಲ ಕಡೆ ವೀರಶೈವ ಲಿಂಗಾಯತ ಎಂದೇ ಬರೆದುಕೊಂಡು ಬಂದಿದ್ದೇವೆ. ಇದರಿಂದ ಕೇಂದ್ರದ ಒಬಿಸಿ ಪಟ್ಟಿಗೂ ಸೇರಿಲ್ಲ. ಪಂಚಮಸಾಲಿ ಅಂದರೆ ಕೊನೆಯ ಸಾಲಿನಲ್ಲಿರುವವರು ನಾವು. ನಮ್ಮ ಸಮುದಾಯ ಬಹಳಷ್ಟು ಹಿಂದುಳಿದಿದೆ. ನಮ್ಮ ಸಮುದಾಯದ 10 ಲಕ್ಷ ಜನರಿಂದ ಹೋರಾಟ ನಡೆದು, ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದಲ್ಲಿ ಸಮಾವೇಶ ಮಾಡಿದ್ದೇವೆ ಎಂದರು. ನಮಗೆ ಮಾತನಾಡುವುದಕ್ಕೆ ಅವಕಾಶ ಕೊಡಬಾರದು ಎಂಬ ಒತ್ತಡ ಇದೆ ಎಂದು ಆರೋಪ ಮಾಡಿದರು.

ಇನ್ನು ಯತ್ನಾಳ್ ಮಾತನಾಡುವ ವೇಳೆ ಯಡಿಯೂರಪ್ಪ ಅವರು ಇರಲಿಲ್ಲ. ಆಗ ಯತ್ನಾಳ್, ಮುಖ್ಯಮಂತ್ರಿ ನಾಪತ್ತೆಯಾಗಿದ್ದಾರೆ ಎಂದು ಹೇಳಿದರು. ಆಗ ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ರೇಣುಕಾಚಾರ್ಯ, ಮುಖ್ಯಮಂತ್ರಿ ನಾಪತ್ತೆ ಎಂದು ಬಳಸಬೇಡಿ. ಬಿಎಸ್​ಯಡಿಯೂರಪ್ಪ ಅವರಿಗೆ ಲಿಂಗಾಯತ ಸಮುದಾಯ ಸೇರಿ ಎಲ್ಲರ ಬಗ್ಗೆಯೂ ಕಾಳಜಿ ಇದೆ ಎಂದು ಹೇಳಿದರು. ಇದರಿಂದ ಮತ್ತಷ್ಟು ಕೆರಳಿದ ಯತ್ನಾಳ್, ಮುಖ್ಯಮಂತ್ರಿಗಳನ್ನು ಕೇಳಿದರೆ ರೇಣುಕಾಚಾರ್ಯ ಏಕೆ ಮಾತನಾಡುತ್ತಾರೆ? ಇನ್ನೆರಡು ವರ್ಷದಲ್ಲಿ ರೇಣುಕಾಚಾರ್ಯ ಸಹ ಮತ ಕೇಳಿಕೊಂಡು ಜನರ ಮುಂದೆ ಹೋಗಬೇಕಾಗುತ್ತದೆ ಎಂದರು.

ಇದನ್ನೂ ಓದಿ: ಹೈಕಮಾಂಡ್ ವಿಚಾರಣೆಗೆ ಕರೆದಿಲ್ಲ, ಇದು ತಂದೆ-ಮಗನ ಅಪಪ್ರಚಾರ: ಬಸನಗೌಡ ಪಾಟೀಲ್ ಯತ್ನಾಳ್

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ