AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿನಿ ವಿಧಾನಸೌಧಗಳಿಗೆ ‘ಅಂಬೇಡ್ಕರ್ ತಾಲೂಕು ಆಡಳಿತ ಕಚೇರಿ’ ಎಂದು ಹೆಸರಿಡಲು ಶಾಸಕ ಹರ್ಷವರ್ಧನ್ ಮನವಿ

Mini Vidhana Soudha: ಮಿನಿ ವಿಧಾನಸೌಧ ಎಂಬ ಹೆಸರಿನಲ್ಲಿ ‘ಮಿನಿ’ ಎಂಬ ಇಂಗ್ಲಿಷ್ ಪದಮ ಇದೆ. ಈ ಕಾರಣದಿಂದ ಹೆಸರಿಗೆ ಸಾಹಿತ್ಯ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಹೆಸರಿನ ಬದಲಾವಣೆ ಬಗ್ಗೆ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಗುರುವಾರ ತಿಳಿಸಿದ್ದರು.

ಮಿನಿ ವಿಧಾನಸೌಧಗಳಿಗೆ ‘ಅಂಬೇಡ್ಕರ್ ತಾಲೂಕು ಆಡಳಿತ ಕಚೇರಿ’ ಎಂದು ಹೆಸರಿಡಲು ಶಾಸಕ ಹರ್ಷವರ್ಧನ್ ಮನವಿ
ಹರ್ಷವರ್ಧನ್ ಹಾಗೂ ಆರ್ ಅಶೋಕ್
TV9 Web
| Edited By: |

Updated on: Sep 03, 2021 | 4:25 PM

Share

ಬೆಂಗಳೂರು: ಮಿನಿ ವಿಧಾನಸೌಧಗಳ ಹೆಸರು ಬದಲಾವಣೆ ಪ್ರಸ್ತಾವನೆ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್​​ಗೆ ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ಪತ್ರ ಬರೆದಿದ್ದಾರೆ. ಮಿನಿ ವಿಧಾನಸೌಧಗಳಿಗೆ ‘ಅಂಬೇಡ್ಕರ್ ತಾಲೂಕು ಆಡಳಿತ ಕಚೇರಿ’ ಎಂದು ಹೆಸರಿಡಲು ಮನವಿ ಮಾಡಿದ್ದಾರೆ. ಮಿನಿ ವಿಧಾನಸೌಧಗಳಿಗೆ ಮರು ನಾಮಕರಣ ಮಾಡಲು ಮನವಿ ಮಾಡಲಾಗಿದೆ.

ಮಿನಿ ವಿಧಾನಸೌಧ ಎಂಬ ಹೆಸರಿನಲ್ಲಿ ‘ಮಿನಿ’ ಎಂಬ ಇಂಗ್ಲಿಷ್ ಪದಮ ಇದೆ. ಈ ಕಾರಣದಿಂದ ಹೆಸರಿಗೆ ಸಾಹಿತ್ಯ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ. ಹೆಸರಿನ ಬದಲಾವಣೆ ಬಗ್ಗೆ ಸರ್ಕಾರ ಶೀಘ್ರ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಗುರುವಾರ ತಿಳಿಸಿದ್ದರು. ತಾಲೂಕು ಕಚೇರಿಯ ಕಟ್ಟಡಗಳಿಗೆ ಮಿನಿ ವಿಧಾನಸೌಧ ಎಂದು ನಾಮಕರಣ ಮಾಡಲಾಗಿದೆ. ಇದನ್ನು ತಾಲೂಕು ಆಡಳಿತ ಸೌಧ ಎಂದು ಹೆಸರಿಸುವುದು ಸರಿ ಎಂಬ ಅಭಿಪ್ರಾಯಗಳೂ ಕೇಳಿಬಂದಿದೆ. ಈ ಬಗ್ಗೆ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಶೋಕ್ ಹೇಳಿದ್ದರು. ಈ ವಿಚಾರಗಳ ಬೆನ್ನಲ್ಲೇ ಈಗ ಹೊಸ ಹೆಸರು ಸೂಚನೆ ಕೇಳಿಬಂದಿದೆ.

ಇನ್ನೂ 600 ಮಂದಿ ಸರ್ವೆಯರುಗಳ ನೇಮಕಕ್ಕೆ ಆದೇಶ ಕಂದಾಯ ಇಲಾಖೆಗೆ 820 ಜನ ಸರ್ವೆಯರುಗಳ ನೇಮಕಕ್ಕೆ ಆದೇಶ ಕೊಟ್ಟಿದ್ದೇವೆ. ಇದರ ಜೊತೆಗೆ ಇನ್ನೂ 600 ಮಂದಿ ಸರ್ವೆಯರುಗಳ (ಬಾಂದನವರ-ಭೂಮಾಪಕ surveyor) ನೇಮಕ ಮಾಡಿಕೊಳ್ಳುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಶುಕ್ರವಾರ (ಸಪ್ಟೆಂಬರ್ 3) ಹೇಳಿದ್ದಾರೆ.

ಪೆಂಡಿಂಗ್ ಇರುವ ಎಲ್ಲ ಸರ್ವೆ ಅರ್ಜಿಗಳನ್ನು ಎರಡೇ ತಿಂಗಳಲ್ಲಿ ವಿಲೇವಾರಿ ಮಾಡಲು ಸಾಧ್ಯ. ಕುರುಬ ಬಂಜಾರ ಹಾಡಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಆದೇಶ ಹೊರಡಿಸಿದ್ದೇವೆ. ಹಕ್ಕಿ ಪಿಕ್ಕಿ ಜನಾಂಗದವರಿಗೂ ಗ್ರಾಮಗಳ ಘೋಷಣೆ ಮಾಡಲು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದೇವೆ. ಸ್ಟಾಂಪ್ ಡ್ಯೂಟಿ ಗೈಡೆನ್ಸ್ ವ್ಯಾಲ್ಯೂ ಕಡಿಮೆ ಮಾಡುತ್ತಿದ್ದೇವೆ. ಬೆಂಗಳೂರಿನಲ್ಲಿ ಎಲ್ಲೆಲ್ಲಿ ಪಾಟ್ ಹೋಲ್ ಗಳಿವೆ, ಅವುಗಳನ್ನು ತುಂಬುವ ಕೆಲಸ ಮಾಡ್ತೇವೆ. ನಿರಂತರ ಮಳೆಯೂ ಜಾಸ್ತಿ ಆಗ್ತಿರೋದ್ರಿಂದ ಕೆಲವು ರಸ್ತೆಗಳು ಹಾನಿಯಾಗ್ತಿವೆ. ಮೂರ್ನಾಲ್ಕು ದಿನಗಳಲ್ಲಿ ಬಿಬಿಎಂಪಿ ಅಧಿಕಾರಿಗಳ ಸಭೆ ಕರೆದಿದ್ದೇವೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಇದನ್ನೂ ಓದಿ: ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್

ಇದನ್ನೂ ಓದಿ: ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಕಾರ್ಯಕ್ರಮಕ್ಕೆ ಸಚಿವ ಆರ್.ಅಶೋಕ್​ರಿಂದ ಚಾಲನೆ

ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ