Madal Virupakshappa: ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಮತ್ತೆ ನಾಪತ್ತೆ

ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತೆ ತಲೆಮರೆಸಿಕೊಂಡಿದ್ದಾರೆ.

Madal Virupakshappa: ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಮತ್ತೆ ನಾಪತ್ತೆ
ಮಾಡಾಳ್ ವಿರೂಪಾಕ್ಷಪ್ಪ
Follow us
Ganapathi Sharma
|

Updated on:Mar 27, 2023 | 4:55 PM

ದಾವಣಗೆರೆ: ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಲಂಚ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಮತ್ತೆ ತಲೆಮರೆಸಿಕೊಂಡಿದ್ದಾರೆ. ಸೋಮವಾರ ಚನ್ನಗಿರಿಯಲ್ಲಿ ಸರ್ಕಾರಿ ಕಾರ್ಯಕ್ರಮ‌ದಲ್ಲಿ ಭಾಗಿಯಾಗಿದ್ದ ಅವರು, ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು ಚನ್ನಗಿರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಿದ್ದಾರೆ. ಸ್ವ ಗ್ರಾಮ ಚನ್ನಗಿರಿ ತಾಲೂಕಿನ ಚನ್ನೇಶಪುರಕ್ಕೂ ಹೋಗದೇ ನಾಪತ್ತೆಯಾಗಿದ್ದಾರೆ. ಅವರು ಬೆಂಗಳೂರಿಗೆ ತೆರಳಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾಗ ಕೂಡ ಅವರು ನಾಪತ್ತೆಯಾಗಿದ್ದರು. ಆರು ದಿನಗಳ ಕಾಲ ತಲೆಮರೆಸಿಕೊಂಡಿದ್ದ ಅವರು, ಜಾಮೀನು ಸಿಗುತ್ತಿದ್ದಂತೆಯೇ ಚನ್ನಗಿರಿಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಮೆರವಣಿಗೆ ಮೂಲಕ ವಾಪಸಾಗಿದ್ದಕ್ಕೆ ಬಿಜೆಪಿಯಲ್ಲಿಯೂ ಭಾರೀ ವಿರೋಧ ವ್ಯಕ್ತವಾಗಿತ್ತು.

ಇದನ್ನೂ ಓದಿ: Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ; ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮಾಡಾಳ್​ಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹೈಕೋರ್ಟ್ ವಕೀಲರು ಬೇಸರ ವ್ಯಕ್ತಪಡಿಸಿದ್ದರು. ಸಿಜೆಐಗೂ ಪತ್ರ ಬರೆದಿದ್ದರು.

ನಾಪತ್ತೆಯಾಗುವುದಕ್ಕೂ ಮುನ್ನ ಅವರು 351 ಕೋಟಿ ವೆಚ್ಚದ ವಿವಿಧ ಕಾಮಗಾರಿ ಹಾಗೂ ಶಂಕುಸ್ಥಾಪನಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿದ್ದಾರೆ. ವಿವಿಧ ಕಾಮಗಾರಿಗಳ ಉದ್ಘಾಟನೆ ‌ಮಾಡಿದ್ದಾರೆ. ವಿವಿಧ ಫಲಾನುಭವಿಗಳಿಗೆ ಪರಿಕರಗಳ ವಿತರಣೆ ಮಾಡಿದ್ದಾರೆ. ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ನನ್ನನ್ನು ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದಿದ್ದಾರೆ. ಅಷ್ಟರಲ್ಲೇ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿರುವ ವರದಿ ತಿಳಿದುಬಂದಿದೆ. ನಂತರ ಅವರು ನಾಪತ್ತೆಯಾಗಿದ್ದಾರೆ.

ಏನಿದು ಮಾಡಾಳ್ ಪ್ರಕರಣ?

ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಜೆಐಗೂ ಪತ್ರ ಬರೆಯಲಾಗಿತ್ತು. ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Mon, 27 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ