AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSDL ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ, ಸಂಕಷ್ಟ ತಂದಿಟ್ಟ ಪುತ್ರನ ದುಡ್ಡಿನ ಗಂಟು

ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಸಿಎಂ ಸೂಚನೆ ಮೇರೆಗೆ ಕರ್ನಾಟಕ ಸಾಬೂನು & ಮಾರ್ಜಕ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಮೇಶ್ ಬಿ. ಜವಳಗೇರಾ
|

Updated on:Mar 03, 2023 | 12:38 PM

Share

ಬೆಂಗಳೂರು: ದಾವಣಗೆರೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಪುತ್ರನ ದುಡ್ಡಿನ ಗಂಟು ಸಂಕಷ್ಟ ತಂದಿಟ್ಟಿದೆ. ಮಾಡಾಳ್ ವಿರುಪಾಕ್ಷಪ್ಪ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್​ಡಿಎಲ್)​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪುತ್ರ ಮಾಡಾಳ್ ಪ್ರಶಾಂತ್​ ಬಂಧನ ನಂತರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದರು. ಅದರಂತೆ ವಿರೂಪಾಕ್ಷಪ್ಪ ತಮ್ಮ ಆಪ್ತರ ಮೂಲಕ ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಪುತ್ರನ ಮನೆ-ಕಚೇರಿಯಲ್ಲಿ ಕಂತೆ ಕಂತೆ ಹಣ ಪತ್ತೆ, ಇದೇನು ಮನೆಯೋ ಇಲ್ಲ ರಿಸರ್ವ್​ ಬ್ಯಾಂಕೋ? ಫೋಟೋಗಳಲ್ಲಿ ನೋಡಿ

ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಮತ್ತು ನನ್ನ ಕುಟುಂಬದ ಮೇಲೆ ಷಡ್ಯಂತ್ರ ನಡೆಸಲಾಗಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದ;ಲ್ಲಿ ಉಲ್ಲೇಖಿಸಿದ್ದಾರೆ. ರಾಜೀನಾಮೆ ಪತ್ರವನ್ನು ತಮ್ಮ ಆಪ್ತರೊಂದಿಗೆ ಸಿಎಂ ಕಚೇರಿ ರವಾನಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರ ಆಪ್ತರಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್​ಡಿಎಲ್)​ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಆದ್ರೆ, ಇದೀಗ ಅವರ ಪುತ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಈ ಮುಜುಗರರಿಂದ ತಪ್ಪಿಸಿಕೊಳ್ಳಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಿಡುವಂತೆ ಸಿಎಂ ಸೂಚನೆ ರವಾನಿಸಿದ್ದರು,

ಗೌಪ್ಯ ಸ್ಥಳದಲ್ಲಿ ಮಾಡಾಳ್ ವಿರೂಪಾಕ್ಷಪ್ಪ

ಇನ್ನು ಬೆಂಗಳೂರಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮತ್ತೊಂದೆಡೆ ಪುತ್ರನ ಬಂಧನವಾಗಿದ್ದರಿಂದ ಆತಂಕಗೊಂಡಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಗೌಪ್ಯ ಸ್ಥಳದಲ್ಲಿ ಇದ್ದುಕೊಂಡೇ ಮುಂದಿನ ಕಾನೂನು ಹೋರಾಟ ಬಗ್ಗೆ ವಕೀಲರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಮಾಡಾಳ್ ಬಂಧನ ಸಾಧ್ಯತೆ

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಸಾಧ್ಯತೆ ಇದೆ. ತಂದೆ ಮಾಡಾಳ್ ಪರವಾಗಿ ಪ್ರಶಾಂತ್ ಹಣ ಸ್ವೀಕರಿಸುತ್ತಿದ್ದಾರೆ ಎಂದು ದೂರುದಾರ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರಿಂದ ಶಾಸಕ ಮಾಡಾಳ್ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.

 ಬಂಧನ ಮಾಡಲು ಕಾರಣ ಏನು

1 ಪ್ರಶಾಂತ್ ಹಾಗೂ ವಿರುಪಾಕ್ಷಪ್ಪ ತಂದೆ ಮಗ 2 ಟೆಂಡರ್ ಕರೆದಿದ್ದು ಕೆ ಎಸ್ ಡಿ ಎಲ್ ಕಚ್ಚಾ ವಸ್ತು ಸರಬರಾಜು ಸಂಬಂಧ 3 ಆದರೆ ಪ್ರಶಾಂತ್ BWSSB ಅಧಿಕಾರಿ 4 ಆದರೆ BWSSB ಹಾಗೂKSDL ಗೂ ಯಾವುದೇ ಸಂಬಂಧ ಇಲ್ಲ 5 ಹೀಗಾಗಿ ತಂದೆಯ ಪರವಾಗಿಯೇ ಹಣ ಸ್ವೀಕರಿಸುತ್ತಿರುವುದು ಪ್ರಾಥಮಿಕವಾಗಿ ಧೃಡ 6 ಹೀಗಾಗಿ ಯಾವುದೇ ಕ್ಷಣದಲ್ಲಾದರೂ ಮಾಡಾಳ್ ವಿರೂಪಾಕ್ಷಪ್ಪ ಬಂಧನ

Published On - 12:04 pm, Fri, 3 March 23

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು