ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ! -ಎಂ.ಪಿ. ರೇಣುಕಾಚಾರ್ಯ ಟ್ವೀಟ್

|

Updated on: Mar 26, 2021 | 9:53 PM

ಸಿಡಿಯಲ್ಲಿದ್ದ ಲೇಡಿ ಮಾತಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ‌ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ. ಇಡೀ ಪ್ರಕರಣದ ಬಗ್ಗೆ ತಮ್ಮದೇ ವಿಭಿನ್ನ ರೀತಿಯಲ್ಲಿ ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ! -ಎಂ.ಪಿ. ರೇಣುಕಾಚಾರ್ಯ ಟ್ವೀಟ್
ಎಂ.ಪಿ. ರೇಣುಕಾಚಾರ್ಯ
Follow us on

ಬೆಂಗಳೂರು: ಸಿಡಿಯಲ್ಲಿದ್ದ ಲೇಡಿ ಮಾತಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸಿಎಂ ರಾಜಕೀಯ ‌ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ. ಇಡೀ ಪ್ರಕರಣದ ಬಗ್ಗೆ ತಮ್ಮದೇ ವಿಭಿನ್ನ ರೀತಿಯಲ್ಲಿ ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ. ಲೇಡಿ + ಸಿಡಿ = ಮತ್ತೊಮ್ಮೆ ಬೇಡಿ..!! #ಮಹಾನಾಯಕ ಎಂದು ಟ್ವೀಟ್​ ಮಾಡುವ ಮೂಲಕ ರೇಣುಕಾಚಾರ್ಯ ಕಾಂಗ್ರೆಸ್​ ನಾಯಕರಿಗೆ ನಯವಾಗಿ ತಿರುಗೇಟು ಕೊಟ್ಟಿದ್ದಾರೆ.

ಸಿಡಿ ಲೇಡಿ ಆಡಿಯೋ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಭೆ
ಇತ್ತ, ಸಿಡಿ ಲೇಡಿ ಆಡಿಯೋ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಸಭೆ ನಡೆಯುತ್ತಿದೆ. ಸಿದ್ದರಾಮಯ್ಯ ಜೊತೆ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಮತ್ತು ಮಾಜಿ ಸಂಸದ ವಿ.ಎಸ್‌.ಉಗ್ರಪ್ಪ ಚರ್ಚೆ ನಡೆಸುತ್ತಿದ್ದಾರೆ.

‘ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು’
ಅತ್ತ, ಲಂಚ, ಮಂಚದ ಸರ್ಕಾರದಿಂದ ಈಗಾಗಲೇ ಕರ್ನಾಟಕದ ಮರ್ಯಾದೆ ದೇಶದೆದುರು ಹರಾಜಾಗಿದೆ. ದೂರು ದಾಖಲಾದರೂ, FIR ಹಾಕಿದ್ದರೂ ಅತ್ಯಾಚಾರ ಮಾಡಿದ ಪ್ರಭಾವಿ ವ್ಯಕ್ತಿಯನ್ನು ರಕ್ಷಿಸಲಾಗುತ್ತಿದೆ ಎಂಬ ಕಳಂಕ, ಕರ್ನಾಟಕಕ್ಕೆ ಬೇಡ. ಅದೇನಿದ್ದರೂ ಯುಪಿಯ ಯೋಗಿ ಆಡಳಿತಕ್ಕಿರಲಿ. ಸರ್ಕಾರ ಕೂಡಲೇ ಅತ್ಯಾಚಾರಿಯನ್ನು ಬಂಧಿಸಬೇಕು. #ArrestRapistRamesh ಎಂದು ಕಾಂಗ್ರೆಸ್​ ಟ್ವೀಟ್​ ಮಾಡಿದೆ.

ಇದನ್ನೂ ಓದಿ: ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

Published On - 9:48 pm, Fri, 26 March 21