AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವ ಜಯಂತಿ ಪ್ರಯುಕ್ತ ಕೊರೊನಾ ಸೋಂಕಿತರಿಗೆ ಹೋಳಿಗೆ ಊಟ ಹಾಕಿಸಿದ ಎಂ.ಪಿ.ರೇಣುಕಾಚಾರ್ಯ

ಮಾದನಬಾವಿ ಸಿಸಿಸಿಯಲ್ಲಿ 120ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಅವರಿಗೆ ರೇಣುಕಾಚಾರ್ಯ ವತಿಯಿಂದ ಹೋಳಿಗೆ ಊಟ ವ್ಯವಸ್ಥೆ ಮಾಡಲಾಗಿತ್ತು.

ಬಸವ ಜಯಂತಿ ಪ್ರಯುಕ್ತ ಕೊರೊನಾ ಸೋಂಕಿತರಿಗೆ ಹೋಳಿಗೆ ಊಟ ಹಾಕಿಸಿದ ಎಂ.ಪಿ.ರೇಣುಕಾಚಾರ್ಯ
ರೇಣುಕಾಚಾರ್ಯ ವತಿಯಿಂದ ಕೊರೊನಾ ಸೋಂಕಿತರಿಗೆ ಹೋಳಿಗೆ ಊಟ
TV9 Web
| Updated By: ganapathi bhat|

Updated on:Aug 23, 2021 | 12:33 PM

Share

ದಾವಣಗೆರೆ: ಬಸವ ಜಯಂತಿ ಪ್ರಯುಕ್ತ ಕೊರೊನಾ ಸೋಂಕಿತರಿಗೆ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೋಳಿಗೆ ಊಟ ಹಾಕಿಸಿದ್ದಾರೆ. ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ರೇಣುಕಾಚಾರ್ಯ ಕೊವಿಡ್​ ಕೇರ್​ ಸೆಂಟರ್​ನಲ್ಲಿ ಸೋಂಕಿತರಿಗೆ ಹೋಳಿಗೆ ಊಟ ನೀಡಿದ್ದಾರೆ. ಇದೇ ಸ್ಥಳದಲ್ಲಿ ಶಾಸಕ ರೇಣುಕಾಚಾರ್ಯ ಸಹ ಊಟ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಮಾದನಬಾವಿ ಗ್ರಾಮದ ಕೊವಿಡ್ ಕೇರ್​ ಸೆಂಟರ್​​ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಾದನಬಾವಿ ಸಿಸಿಸಿಯಲ್ಲಿ 120ಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಅವರಿಗೆ ರೇಣುಕಾಚಾರ್ಯ ವತಿಯಿಂದ ಹೋಳಿಗೆ ಊಟ ವ್ಯವಸ್ಥೆ ಮಾಡಲಾಗಿತ್ತು.

ಇದಕ್ಕೂ ಮೊದಲು ಇಂದು ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಬಿಜೆಪಿ ಶಾಸಕ ಎಂ.ಪಿ‌. ರೇಣುಕಾಚಾರ್ಯ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಬದಲು ಎತ್ತುಗಳಿಗೆ ಪೂಜೆ ಮಾಡಿ ಸುದ್ದಿಯಾಗಿದ್ದರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಎತ್ತುಗಳಿಗೆ ಪೂಜೆ ಮಾಡುವ ಮೂಲಕ ಬಸವ ಜಯಂತಿ ಆಚರಿಸಿದ್ದರು. ಶಾಸಕ ಎಂ.ಪಿ.ರೇಣುಕಾಚಾರ್ಯ ಎತ್ತುಗಳ ಪೂಜೆ ನಡೆಸುವಾಗ ಅವರ ಪತ್ನಿ ಸುಮಾ ಸಹ ಭಾಗಿಯಾಗಿದ್ದರು.

ಕರ್ನಾಟಕ ಕೊವಿಡ್ ಪ್ರಕರಣಗಳ ವಿವರ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ  41,779 ಜನರಿಗೆ ಕೊವಿಡ್ ಸೋಂಕು ಖಚಿತಪಟ್ಟಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ ಕೊರೊನಾದಿಂದ 373 ಜನರು ನಿಧನರಾಗಿದ್ದಾರೆ.ಬೆಂಗಳೂರು ನಗರ ಜಿಲ್ಲೆಯಲ್ಲಿ  ಕಳೆದ 24 ಗಂಟೆಗಳಲ್ಲಿ 14,316 ಜನರಿಗೆ ಸೋಂಕು ತಗುಲಿದ್ದು ಖಚಿತಪಟ್ಟಿದ್ದು, 121 ಜನರು ಅಸು ನೀಗಿದ್ದಾರೆ. ಇಂದಿನ ಸೋಂಕಿತರ ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾಕ್ಕೆ ತುತ್ತಾದವರ ಸಂಖ್ಯೆ 21,30,267ಕ್ಕೆ ಏರಿಕೆಯಾಗಿದೆ. ಜತೆಗೆ ಈವರೆಗೆ 15,10,557 ಜನರು ಗುಣಮುಖರಾಗಿದ್ದಾರೆ.  5,98,605 ಸೋಂಕಿತರಿಗೆ ರಾಜ್ಯದ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಎಲ್ಲದರ ಜತೆಗೆ ಪ್ರಮುಖವಾಗಿ ಹೇಳಲೇಬೇಕಾದ ಅಂಶವೆಂದರೆ ಕಳೆದ 24 ಗಂಟೆಗಳಲ್ಲಿ 35,879 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.

ಜಿಲ್ಲಾವಾರು ಸೋಂಕಿತರ ವಿವರ ಬೆಂಗಳೂರು ನಗರ ಜಿಲ್ಲೆ 14,316, ತುಮಕೂರು 2,668,  ಬಳ್ಳಾರಿ 2,421, ಮೈಸೂರು 2,340, ಬೆಳಗಾವಿ 1,592, ಮಂಡ್ಯ 1,385, ಹಾಸನ 1,339, ಉಡುಪಿ 1,219, ದಕ್ಷಿಣ ಕನ್ನಡ 1,215, ರಾಯಚೂರು 1,063, ಕಲಬುರಗಿ 929, ಧಾರವಾಡ 829, ಚಿಕ್ಕಮಗಳೂರು 835, ಉತ್ತರ ಕನ್ನಡ 78, ಬಾಗಲಕೋಟೆ 773, ಚಾಮರಾಜನಗರ ಜಿಲ್ಲೆ 713, ಬೆಂಗಳೂರು ಗ್ರಾಮಾಂತರ 707, ಯಾದಗಿರಿ 68,  ಚಿಕ್ಕಬಳ್ಳಾಪುರ 676, ಗದಗ 591, ದಾವಣಗೆರೆ 581, ಕೊಡಗು 539, ಕೊಪ್ಪಳ 495, ರಾಮನಗರ 459, ಶಿವಮೊಗ್ಗ 459, ವಿಜಯಪುರ 444, ಚಿತ್ರದುರ್ಗ 314,​ ಕೋಲಾರ 306, ಹಾವೇರಿ 292, ಬೀದರ್ 223 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: Fact Check: ಚಹಾ ಕುಡಿದರೆ ಕೊರೊನಾ ಸೋಂಕು ಬರುವುದಿಲ್ಲ ಎಂಬ ಮಾಹಿತಿ ನಿಜವೇ?

Published On - 11:01 pm, Fri, 14 May 21

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?