ತಾವೇ ಖುದ್ದಾಗಿ ತೆರಳಿ, ರಾತ್ರಿ 2 ಗಂಟೆಗೆ ಆಕ್ಸಿಜನ್​ ತಂದುಕೊಟ್ಟ ರೇಣುಕಾಚಾರ್ಯ; 20 ರೋಗಿಗಳು ಅಪಾಯದಿಂದ ಪಾರು

ಆಕ್ಸಿಜನ್​ ವ್ಯವಸ್ಥೆ ಮಾಡಲು ಸಿಬ್ಬಂದಿಯ ಜತೆಗೆ ಸ್ವತಃ ಶಾಸಕರೇ ಹರಿಹರಕ್ಕೆ ತೆರಳಿದ್ದು, ರಾತ್ರಿ 2 ಗಂಟೆ ಸುಮಾರಿಗೆ ತಮ್ಮ ವಾಹನದಲ್ಲೇ ಆಕ್ಸಿಜನ್ ಸಿಲಿಂಡರ್ ತಂದುಕೊಟ್ಟಿದ್ದಾರೆ. ಆ ಮೂಲಕ ಆಕ್ಸಿಜನ್​ ಬೆಡ್​ನಲ್ಲಿದ್ದ ಸುಮಾರು 20 ಜನರ ಜೀವವನ್ನು ಅಪಾಯದಿಂದ ಪಾರು ಮಾಡಿದ್ದಾರೆ.

ತಾವೇ ಖುದ್ದಾಗಿ ತೆರಳಿ, ರಾತ್ರಿ 2 ಗಂಟೆಗೆ ಆಕ್ಸಿಜನ್​ ತಂದುಕೊಟ್ಟ ರೇಣುಕಾಚಾರ್ಯ; 20 ರೋಗಿಗಳು ಅಪಾಯದಿಂದ ಪಾರು
ಪಿಪಿಇ ಕಿಟ್​ ಧರಿಸಿ ಆಸ್ಪತ್ರೆಗೆ ಭೇಟಿ ನೀಡಿದ ರೇಣುಕಾಚಾರ್ಯ
Follow us
Skanda
|

Updated on: May 13, 2021 | 8:02 AM

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ವೈದ್ಯಕೀಯ ಆಕ್ಸಿಜನ್ ಖಾಲಿಯಾಗುವ ಹಂತ ತಲುಪಿದ್ದು, ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಂದ ರಾತ್ರಿ 2 ಗಂಟೆ ಸುಮಾರಿಗೆ ಆಕ್ಸಿಜನ್ ಪೂರೈಕೆ ಆಗಿದೆ. ಪಿಪಿಇ ಕಿಟ್ ಹಾಕಿಕೊಂಡು ವಾರ್ಡ್‌ಗೆ ಭೇಟಿ ನೀಡುವ ಸಲುವಾಗಿ ರೇಣುಕಾಚಾರ್ಯ ಆಸ್ಪತ್ರೆಗೆ ಬಂದಿದ್ದಾಗ ಮೆಡಿಕಲ್ ಆಕ್ಸಿಜನ್ ಖಾಲಿಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೇವಲ 3 ಗಂಟೆಗಳಿಗೆ ಆಗುವಷ್ಟು ಆಕ್ಸಿಜನ್ ಮಾತ್ರ ಇದೆ, ಆಕ್ಸಿಜನ್ ಬೇಕೆಂದು ವೈದ್ಯರು ಶಾಸಕರಿಗೆ ತಿಳಿಸಿದ್ದರು. ವಿಷಯ ಕಿವಿಗೆ ಬೀಳುತ್ತಿದ್ದಂತೆಯೇ ಆಕ್ಸಿಜನ್​ ಪೂರೈಕೆಗೆ ಸಜ್ಜಾದ ಶಾಸಕರು ತಾವೇ ಮುಂದೆ ನಿಂತು ಕೆಲಸ ಮಾಡಿದ್ದಾರೆ.

ಆಕ್ಸಿಜನ್​ ವ್ಯವಸ್ಥೆ ಮಾಡಲು ಸಿಬ್ಬಂದಿಯ ಜತೆಗೆ ಸ್ವತಃ ಶಾಸಕರೇ ಹರಿಹರಕ್ಕೆ ತೆರಳಿದ್ದು, ರಾತ್ರಿ 2 ಗಂಟೆ ಸುಮಾರಿಗೆ ತಮ್ಮ ವಾಹನದಲ್ಲೇ ಆಕ್ಸಿಜನ್ ಸಿಲಿಂಡರ್ ತಂದುಕೊಟ್ಟಿದ್ದಾರೆ. ಆ ಮೂಲಕ ಆಕ್ಸಿಜನ್​ ಬೆಡ್​ನಲ್ಲಿದ್ದ ಸುಮಾರು 20 ಜನರ ಜೀವವನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಶಾಸಕರ ಸಮಯ ಪ್ರಜ್ಞೆಗೆ ಹಾಗೂ ತಾವೇ ಮುಂದೆ ನಿಂತು ತಮ್ಮ ವಾಹನದಲ್ಲೇ ಆಕ್ಸಿಜನ್ ಪೂರೈಕೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

RENUKACHARYA

ಆಕ್ಸಿಜನ್​ ಪೂರೈಸಲು ಧಾವಿಸಿದ ರೇಣುಕಾಚಾರ್ಯ

ಬೆಂಗಳೂರಿನಲ್ಲಿ ಸೋನುಸೂದ್​ ಟ್ರಸ್ಟ್​ ಸದಸ್ಯರಿಂದ ಸಹಾಯ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನ ಶ್ರೇಯಸ್ ಆಸ್ಪತ್ರೆಯಲ್ಲಿ ನಿನ್ನೆ (ಮೇ 12) ತಡರಾತ್ರಿ ಆಕ್ಸಿಜನ್ ಪ್ಲಾಂಟ್ ಸೋರಿಕೆಯಾಗಿದೆ. ಅದೃಷ್ಟವಶಾತ್ ಆಸ್ಪತ್ರೆ ಸಿಬ್ಬಂದಿ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿಹೋಗಿದೆ. ಆಸ್ಪತ್ರೆಯ ಪ್ಲಾಂಟ್‌ನಿಂದ ಆಕ್ಸಿಜನ್ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆ ಸಿಬ್ಬಂದಿ, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ. ಜತೆಗೆ, ಸೋನುಸೂದ್ ಚಾರಿಟಬಲ್ ಟ್ರಸ್ಟ್‌ಗೂ ವಿಷಯ ಮುಟ್ಟಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಸೋನುಸೂದ್ ಚಾರಿಟಬಲ್ ಟ್ರಸ್ಟ್‌ ಸದಸ್ಯರು ತಡಮಾಡದೇ ಧಾವಿಸಿ ಕಾರ್ಯಪ್ರವೃತ್ತರಾಗಿದ್ದಾರೆ. ಪರಿಣಾಮ ಆಸ್ಪತ್ರೆಯಲ್ಲಿದ್ದ 30ಕ್ಕೂ ಹೆಚ್ಚು ರೋಗಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದ ಕೂಡಲೇ 6 ಜಂಬೋ ಸಿಲಿಂಡರ್ ತಂದು ಆಸ್ಪತ್ರೆಗೆ ಕೊಟ್ಟ ಸೋನುಸೂದ್ ಚಾರಿಟಬಲ್ ಟ್ರಸ್ಟ್ ಸದಸ್ಯರು ಬಳಿಕ ಆಸ್ಪತ್ರೆಯ ಆಕ್ಸಿಜನ್ ಪ್ಲಾಂಟ್ ಲೀಕೇಜ್ ದುರಸ್ತಿ ಮಾಡಿಸಿದ್ದಾರೆ. ಎಸಿಪಿ ರೀನಾ ಸುವರ್ಣ ಮತ್ತು ಸೋನುಸೂದ್ ಚಾರಿಟಬಲ್ ಟ್ರಸ್ಟ್ ಸಮಯಪ್ರಜ್ಞೆಯಿಂದ ಆಸ್ಪತ್ರೆಯಲ್ಲಿ ಘಟಿಸಬಹುದಾಗಿದ್ದ ದುರಂತ ತಪ್ಪಿಹೋಗಿದ್ದು ವೈದ್ಯರಾದಿಯಾಗಿ ಇಡೀ ಆಸ್ಪತ್ರೆ ಸಿಬ್ಬಂದಿ ವರ್ಗದವರು ಸಹಾಯ ಹಸ್ತ ಚಾಚಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾರೆ.

ಇದನ್ನೂ ಓದಿ: ಜಾತಿ, ಧರ್ಮವನ್ನು ನೋಡಿ ಹಗರಣ ಬಯಲು ಮಾಡಿಲ್ಲ; ಸಂಸದ ತೇಜಸ್ವಿ ಸೂರ್ಯ ಪರ ರೇಣುಕಾಚಾರ್ಯ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ