Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದದ ವಿವರ ಇಲ್ಲಿದೆ ನೋಡಿ

ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು ಇದೀಗ ಅವರ ಜಾಮೀನಿ ಅರ್ಜಿ ಆದೇಶವನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಕಾಯ್ದಿರಿಸಿದೆ.

ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದದ ವಿವರ ಇಲ್ಲಿದೆ ನೋಡಿ
ಬಿಜೆಪಿ ಶಾಸಕ ಮುನಿರತ್ನ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Sep 18, 2024 | 2:47 PM

ಬೆಂಗಳೂರು, (ಸೆಪ್ಟೆಂಬರ್ 18): ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ​ ಇಂದು (ಸೆ.18) ಬೆಂಗಳೂರಿನ ವಿಶೇಷ ನ್ಯಾಯಾಲಯವು, ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ(ಸೆಪ್ಟೆಂಬರ್ 19) ಕಾಯ್ದಿರಿಸಿದ್ದಾರೆ. ಈ

ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ ಘಟನೆಯಾಗಿರುವುದರಿಂದ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು.

ಇದನ್ನೂ ಓದಿ: ಜೀವ ಬೆದರಿಕೆ, ಜಾತಿ ನಿಂದನೆ ಕೇಸ್​: ಮುನಿರತ್ನ ಬಂಧನದ ನಂತರ ಮತ್ತೊಂದು ಆಡಿಯೋ ವೈರಲ್

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ದು, 2015 ರಿಂದ 2020 ರವರೆಗೆ ದೂರುದಾರ ಪಾಲಿಕೆ ಸದಸ್ಯರಾಗಿದ್ದರು. ನಂತರ ಭಿನ್ನಾಭಿಪ್ರಾಯ ಬಂದಿತ್ತೆಂದು ದೂರಿನಲ್ಲಿ ಹೇಳಲಾಗಿದೆ. 2015 ರಿಂದ ಯಾವಾಗ ನಿಂದಿಸಿದ್ದರೆಂದು ಹೇಳಿಲ್ಲ 3 (1) r,s ಸೆಕ್ಷನ್ ಅನ್ವಯಿಸುವುದಿಲ್ಲವೆಂದು ಎಸ್ ಪಿಪಿ ಒಪ್ಪಿಕೊಂಡಿದ್ದಾರೆ. 3 (1) u ಅಡಿಯೂ ದೂರಿನಲ್ಲಿನ ಆರೋಪ ಅನ್ವಯವಾಗುವುದಿಲ್ಲ. 41 ಎ ಅಡಿ ನೋಟಿಸ್ ನೀಡಬೇಕಿತ್ತು. ಹೀಗಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಎರಡೂ ಕಡೆಯಿಂದ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ್ ಗಜಾನನ ಭಟ್, ನಾಳೆಗೆ (ಸೆ.19) ಆದೇಶ ಕಾಯ್ದಿರಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಮೊದಲ ಎಫ್‌ಐಆರ್​ನಲ್ಲಿ ಮುನಿರತ್ನ ವಿರುದ್ಧ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿಯನ್ನು ಗಾಯಗೊಳಿಸುವ ಭಯ, ವಂಚನೆ ಮತ್ತು ಸ್ವಯಂಪ್ರೇರಿತವಾಗಿ ಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ