ರಾಜೀನಾಮೆ ಕೊಟ್ಟರೆ ಜೀವ ಉಳಿಯುತ್ತೆ: ಮುನಿರತ್ನ ದೂರಿನಲ್ಲಿ ದಾಖಲಾದ ಸ್ಫೋಟಕ ಸಂಗತಿಗಳ ವಿವರ ಇಲ್ಲಿದೆ

ಶಾಸಕ ಮುನಿರತ್ನ ಮೇಲಿನ ಮೊಟ್ಟೆ ಎಸೆತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಒಂದ್ಕಡೆ ಎಫ್​ಐಆರ್ ದಾಖಲಾಗಿದ್ದರೆ, ಎಫ್​ಐಆರ್​ನಲ್ಲಿ ಏನಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಇನ್ನೊಂದೆಡೆ, ಪ್ರಕರಣದ ಸಂಬಂಧ ಕಾಂಗ್ರೆಸ್ ಬಿಜೆಪಿ ನಾಯಕರ ನಡುವೆ ವಾಕ್ಸಮರ ಮುಂದುವರಿದಿದೆ. ಮುನಿರತ್ನ ದೂರಿನಲ್ಲಿ ಏನೇನಿದೆ ಎಂಬ ವಿವರಗಳಿಗಾಗಿ ಮುಂದೆ ಓದಿ.

ರಾಜೀನಾಮೆ ಕೊಟ್ಟರೆ ಜೀವ ಉಳಿಯುತ್ತೆ: ಮುನಿರತ್ನ ದೂರಿನಲ್ಲಿ ದಾಖಲಾದ ಸ್ಫೋಟಕ ಸಂಗತಿಗಳ ವಿವರ ಇಲ್ಲಿದೆ
ಮುನಿರತ್ನ
Follow us
Prajwal Kumar NY
| Updated By: Ganapathi Sharma

Updated on: Dec 26, 2024 | 2:42 PM

ಬೆಂಗಳೂರು, ಡಿಸೆಂಬರ್ 26: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಅವರು ನೀಡಿದ ದೂರಿನ ಅನ್ವಯ ನಂದಿನಿ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಒಳಸಂಚು ರೂಪಿಸಿ, ಹಲ್ಲೆ ಮತ್ತು ಕೊಲೆ ಮಾಡುವ ಉದ್ದೇಶದ ಭಾಗವಾಗಿ ಮೊಟ್ಟೆ ಎಸೆಯಲಾಗಿದೆ ಎಂದು ಮುನಿರತ್ನ ದೂರಿನಲ್ಲಿ ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಮುನಿರತ್ನ ನೀಡಿದ ದೂರಿನಲ್ಲಿ ಸ್ಫೋಟಕ ಸಂಗತಿಗಳು ದಾಖಲಾಗಿವೆ. ಮುನಿರತ್ನ ನೀಡಿರುವ ದೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಸೇರಿದಂತೆ ನೂರರಿಂದ 150 ಜನರ ಹೆಸರಿದೆ.

ಮುನಿರತ್ನ ದೂರಿನ ಸಾರಾಂಶ

ಡಿಸೆಂಬರ್ 5, 2024 ರಂದು ವಕೀಲರ ರೂಪದಲ್ಲಿ ಬಂದ ಇಬ್ಬರು, ‘ನಿನಗೆ ಈಗಲೂ ಕಾಲ ಮಿಂಚಿಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು. ಇಲ್ಲದೆ ಇದ್ದರೆ ನಿನ್ನ ಮೇಲೆ ಪೋಕ್ಸೋ ಕೇಸ್ ಹಾಕಿ ಮತ್ತೆ ಜೈಲಿಗೆ ಕಳುಹಿಸುತ್ತೇವೆ ಎಂದು ಬೆದರಿಕೆ ಹಾಕಿದ್ದರು. ನಮ್ಮ ಅಣ್ಣ, ಡಿಕೆಸುರೇಶ್ ಸಂತೋಷವಾಗಿರಬೇಕು. ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್​ ಅವರನ್ನ ಸೋಲಿಸಿದ್ದಕ್ಕಾಗಿ ಅವರು ನೊಂದಿದ್ದಾರೆ. ಅವರು ಸಂತೋಷವಾಗಿರಬೇಕಾದರೆ ಕುಸುಮಾ ಅವರು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಶಾಸಕರಾಗಬೇಕು. ಮುಂದಿನ ದಿನಗಳಲ್ಲಿ ಲಕ್ಷ್ಮೀ ಹೆಬ್ಬಾಳ್ಳರ್ ಅವರ ಹಾಗೆ ಸಚಿವರಾಗಿ ನೋಡಬೇಕು. ಹೀಗಾಗಿ ನೀನು ರಾಜೀನಾಮೆ ಕೊಟ್ಟರೆ ಜೀವ ಉಳಿಯುತ್ತದೆ ಇಲ್ಲದಿದ್ದರೆ 100-150 ಜನ ಸೇರಿಸಿ ಒಟ್ಟಿಗೆ ಬಂದು ನೀನು ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ, ಆ್ಯಸಿಡ್ ಕೋಳಿ ಮೊಟ್ಟೆ ಹಾಕಿ, ನಿನ್ನ ಬಟ್ಟೆ ಹರಿದು, ಮುಖಕ್ಕೆ ಮಸಿ ಬಳಿದು ಚಪ್ಪಲಿ ಹಾರ ಹಾಕುತ್ತೇವೆ’ ಹೀಗೆಂದು ಬೆದರಿಕೆ ಹಾಕಿದ್ದಾರೆ ಎಂದು ಮುನಿರತ್ನ 7 ಪುಟಗಳ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುನಿತ್ನ ವಿರುದ್ಧ ಪ್ರತಿದೂರು

ಮತ್ತೊಂದೆಡೆ, ಮೊಟ್ಟೆ ಎಸೆದವರು ಎನ್ನಲಾದ ಆರೋಪಗಳಿಂದಲೂ ಪ್ರತಿದೂರು ದಾಖಲಾಗಿದೆ. ತಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆಂದು ವಿಶ್ವನಾಥ, ಕೃಷ್ಣಮೂರ್ತಿ ಮತ್ತು ಚಂದ್ರು ಪ್ರತಿದೂರು ದಾಖಲಿಸಿದ್ದಾರೆ.

ಈ ಮಧ್ಯೆ ನಿನ್ನೆ ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮುನಿರತ್ನ ಡಿಸ್ಚಾರ್ಜ ಆಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಡಿಸ್ಚಾರ್ಜ್ ಆದ ಬೆನ್ನಲ್ಲೆ ಮಾತನಾಡಿರುವ ಮುನಿರತ್ನ, ಪೊಲೀಸರು ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿ, ಕಾಂಗ್ರೆಸ್ ವಾಕ್ಸಮರ

ವಿಪಕ್ಷ ನಾಯಕ ಅಶೋಕ್, ಮೊಟ್ಟೆ ದಾಳಿ ನಡೆಸಿದ್ದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪದೇಪದೆ ನಮ್ಮ ಶಾಸಕರ ಮೇಲೆ ದಾಳಿ ಆಗುತ್ತಿದೆ ಎಂದಿದ್ದಾರೆ. ಇನ್ನು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ, ಮೊಟ್ಟೆ ಕಥೆ ಬಗ್ಗೆ ನನಗೆ ಗೊತ್ತಿಲ್ಲ ಆ ಮೇಲೆ ಮಾತಾಡುತ್ತೇನೆ ಎಂದಿದ್ದಾರೆ.

ವಿಪಕ್ಷ ನಾಯಕರ ಆರೋಪಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ಕೊಟ್ಟಿದ್ದಾರೆ. ಮುನಿರತ್ನ ಕುರಿತು ನಾನು ಮಾತಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಬಿಜೆಪಿಯವರು ಡ್ರಾಮಾ ಕಂಪನಿ ರೀತಿ ವರ್ತಿಸುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ: ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು

ತಮ್ಮ ಪುತ್ರಿ ಕುಸುಮಾ ಹೆಸರು ಎಳೆದು ತರುತ್ತಿರುವುದಕ್ಕೆ ಅವರ ತಂದೆ ಹನುಮಂತರಾಯಪ್ಪ ಆಕ್ರೋಶಗೊಂಡಿದ್ದಾರೆ. ಮುನಿರತ್ನ ನೀಚ, ನಿನ್ನೆಯ ಘಟನೆ ಅವರದೇ ಪ್ರಾಯೋಜಿತ ಎಂದಿದ್ದಾರೆ.

ಒಟ್ಟಾರೆಯಾಗಿ ಮುನಿರತ್ನ ಮೇಲಿನ ಮೊಟ್ಟೆ ಎಸೆತ ಪ್ರಕರಣ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ತನಿಖೆಯಲ್ಲಿ ಯಾರ ಆರೋಪ ಸತ್ಯ, ಯಾರದ್ದು ಸುಳ್ಳು ಎಂಬುದು ಗೊತ್ತಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್