ಕೋರ್ಟ್​ ಮಹತ್ವದ ಆದೇಶ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಗುತ್ತಿಗೆದಾರನಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದ ಬಿಜೆಪಿ ಶಾಸಕ ಮುನಿರತ್ನ ಇದೀಗ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲು ಪಾಲಾಗಿದ್ದಾರೆ. ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಎಷ್ಟು ದಿನ?

ಕೋರ್ಟ್​ ಮಹತ್ವದ ಆದೇಶ: ಬಿಜೆಪಿ ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ
ಬಿಜೆಪಿ ಶಾಸಕ ಮುನಿರತ್ನ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 05, 2024 | 11:58 AM

ಬೆಂಗಳೂರು, (ಅಕ್ಟೋಬರ್ 05): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು(ಅಕ್ಟೋಬರ್ 05) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುನಿರತ್ನಗೆ 14 ದಿನ(ಅಕ್ಟೋಬರ್ 19ರ ವರೆಗೆ) ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಬಿಜೆಪಿ ಶಾಸಕ ಮುನಿರತ್ನ ಎಸ್​ಐಟಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆ ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇನ್ನು ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ವಕೀಲರು ಕೋರ್ಟ್​​ಗೆ ಮನವಿ ಮಾಡಿದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎನ್ ಮುನಿರತ್ನ ಅವರನ್ನು ಶುಕ್ರವಾರ ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ಘಟನೆ ನಡೆದಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

ಇದಕ್ಕೂ ಮೊದಲು ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಅತ್ಯಾಚಾರ ಪ್ರಕರಣದಲ್ಲಿ  ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.

Published On - 11:49 am, Sat, 5 October 24

ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಆರೋಪ ಮಾಡಲು ವಿಷಯಗಳಿಲ್ಲ, ಹಾಗಾಗೇ ಕೊಲೆಗಡುಕ ಅಂತಾರೆ: ಪಲ್ಲವಿ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಫಾರಂ ಹೌಸ್​ನಲ್ಲಿ ದರ್ಶನ್, ಹಲವು ಎಚ್ಚರಿಕಾ ಕ್ರಮ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಧ್ಯಾನವೆಂಬುದು ಮಾನಸಿಕ ನೈರ್ಮಲ್ಯ, ಏಕಾಗ್ರತೆಯ ಮೆಟ್ಟಿಲು: ರವಿಶಂಕರ್ ಗುರೂಜಿ
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಚೈತ್ರಾಗೆ ಕಿಚ್ಚ ಸುದೀಪ್ ಮಂಗಳಾರತಿ; ಮತ್ತೆ ಕಣ್ಣೀರು ಫಿಕ್ಸ್​
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
ಮಾರ್ಷಲ್​ಗಳ ರಕ್ಷಣೆಯಲ್ಲಿ ಸಭಾಪತಿಯವರ ಕೋಣೆಗೆ ಹೋದೆ: ಸಿಟಿ ರವಿ
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
CT ರವಿಯನ್ನು ಸುತ್ತಾಡಿಸಿದ ಬೆಳಗಾವಿ ಪೊಲೀಸರಿಗೆ ಫೋನ್​​ಗಳು: ವಿಡಿಯೋ ವೈರಲ್
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ರವಿ ಆರೋಪಿಯಾಗಿದ್ದರು, ಆದರೆ ಉಳಿದ ಬಿಜೆಪಿ ಶಾಸಕರು ಠಾಣೆಯಲ್ಲಿ ಯಾಕೆ? ಖರ್ಗೆ
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್