ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಈಗ ಬಯಲಾಗುತ್ತಿವೆ. ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಮುನಿರತ್ನ ಬ್ಲ್ಯಾಕ್​ಮೇಲ್ ಮಾಡುತ್ತಿದ್ದುದಲ್ಲದೆ, ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು ಎಂಬುದು ದೂರಿನಲ್ಲಿ ಉಲ್ಲೇಖವಾಗಿದೆ.

ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ
ಮುನಿರತ್ನ
Follow us
| Updated By: ಗಣಪತಿ ಶರ್ಮ

Updated on: Sep 20, 2024 | 9:26 AM

ಬೆಂಗಳೂರು, ಸೆಪ್ಟೆಂಬರ್ 20: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಇದೀಗ ಬೆಳಕಿಗೆ ಬರುತ್ತಿದೆ. ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ ಎಂದು ಅತ್ಯಾಚಾರ ಸಂತ್ರಸ್ತೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ.

ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು. ಅತ್ಯಾಚಾರ ಸಂತ್ರಸ್ತೆ ಮೂಲಕ ಹನಿಟ್ರ್ಯಾಪ್​​ಗೆ ಯತ್ನಿಸಿದ್ದರು. ಹನಿಟ್ರ್ಯಾಪ್​ಗೆ ಅಮಾಯಕ ಹೆಚ್​​ಐವಿ ಸೋಂಕಿತರನ್ನೂ ಬಳಸಾಗುತ್ತಿತ್ತು ಎಂಬ ಗಂಭೀರ ಆರೋಪಗಳು ಇದೀಗ ಕೇಳಿಬಂದಿವೆ. ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಟ್ರಾಸಿಟಿ ಕೇಸ್ ದುರ್ಬಳಕೆಯ ಆರೋಪ

ರಾಜಕೀಯ ಎದುರಾಳಿಗಳ ಹಣಿಯಲು ಮುನಿರತ್ನ ಅಟ್ರಾಸಿಟಿ ಕೇಸ್​​ಗಳ ದುರ್ಬಳಕೆ ಮಾಡುತ್ತಿದ್ದರು ಎಂಬ ಆರೋಪವೂ ಈಗ ಕೇಳಿಬಂದಿದೆ. ಮುನಿರತ್ನ ಅಟ್ರಾಸಿಟಿ ಕೇಸ್​​ಗಳನ್ನೇ ದಾಳವನ್ನಾಗಿ ಬಳಸಿಕೊಳ್ಳುತ್ತಿದ್ದರು. ಹಣ ಕೊಟ್ಟು ಪ್ರಭಾವ ಬಳಸಿ ಅಟ್ರಾಸಿಟಿ ಕೇಸ್​​ಗಳನ್ನು ದಾಖಲಿಸುತ್ತಿದ್ದರು. ಈ ಹಿಂದೆ ಆರ್​ಆರ್ ನಗರದಲ್ಲಿ ಹಲವರ ವಿರುದ್ಧ ಅಟ್ರಾಸಿಟಿ ಕೇಸ್​ಗಳು ದಾಖಲಾಗಿದ್ದವು ಎಂದು ಮೂಲಗಳು ತಿಳಿಸಿವೆ.

ಮುನಿರತ್ನ ಮತ್ತೆ ಬಂಧನ

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುನಿರತ್ನರನ್ನು ಮತ್ತೆ ಬಂಧಿಸಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರ ಪೊಲೀಸರು ಮುನಿರತ್ನರನ್ನು ಶುಕ್ರವಾರ ಬೆಳಗ್ಗೆ ಬಂಧಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ

ಮುನಿರತ್ನ ವಿರುದ್ಧ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಜಾತಿನಿಂದನೆ ಪ್ರಕರಣದಲ್ಲಿ ಅವರಿಗೆ ಗುರುವಾರವಷ್ಟೇ ಜಾಮೀನು‌ ಮಂಜೂರಾಗಿತ್ತು. ಜೈಲಿನಿಂದ ಹೊರಬಂದ ಕೂಡಲೇ ಇದೀಗ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ