ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಬೆನ್ನಲ್ಲೇ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬ ಆಡಿಯೋ ವೈರಲ್​ ಆಗಿದೆ.

ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿಯ ಸ್ಫೋಟಕ ಆಡಿಯೋ ವೈರಲ್​
ಮುನಿರತ್ನ
Edited By: ವಿವೇಕ ಬಿರಾದಾರ

Updated on: Sep 22, 2024 | 11:23 AM

ಬೆಂಗಳೂರು, ಸೆಪ್ಟೆಂಬರ್​ 22: ಘನ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚಲುವರಾಜು ಅವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಲಕ್ಷ ಲಕ್ಷ ಹಣ ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇದ್ದಾರೆ ಎಂಬ ಆಡಿಯೋ ವೈರಲ್​ ಆಗಿದೆ.

ದೇವರಾಜ ಅರಸು ನಿಗಮದ ಸಾರಥಿ ಯೋಜನೆ ಅಡಿಯಲ್ಲಿ ವಾಹನ ನೀಡಲು 1 ಲಕ್ಷ ರೂ. ಲಂಚ ನೀಡುವಂತೆ ಶಾಸಕ ಮುನಿರತ್ನ ಕಚೇರಿ ಸಿಬ್ಬಂದಿ ಉಷಾ ಕೇಳಿದ್ದಾರೆ ಅಂತ ಫಲಾನುಭವಿಯೊಬ್ಬರು ಕಾಂಗ್ರೆಸ್​ ಮುಖಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಶಾಸಕ ಮುನಿರತ್ನ ವಿರುದ್ಧದ ಕೇಸ್​ಗಳ ತನಿಖೆಗೆ ಎಸ್​ಐಟಿ ರಚನೆ ಮಾಡಿದ ಸರ್ಕಾರ

3 ಲಕ್ಷ ರೂ. ಮೌಲ್ಯದ ವಾಹನ ನೀಡಲು 1 ಲಕ್ಷ ರೂ. ಲಂಚ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈಗಾಲೇ 20 ಸಾವಿರ ರೂ. ಕೊಟ್ಟಿದ್ದೇನೆ. ವಾಹನ ಕೊಡಬೇಕೆಂದರೆ ಇನ್ನೂ 80 ಸಾವಿರ ಕೊಡಿ ಎಂದು ಮುನಿರತ್ನ ಕಚೇರಿ ಸಿಬ್ಬಂದಿ ಬೇಡಿಕೆ ಇಟ್ಟಿದ್ದಾರೆ ಎಂದು ಫಲಾನುಭವಿ ಮತ್ತು ಕಾಂಗ್ರೆಸ್​ ಮುಖಂಡ ಮಾತನಾಡಿರುವ ಆಡಿಯೋ ವೈರಲ್​ ಆಗಿದೆ.

ಸಾಕ್ಷಿಗಳಿಗೆ ಬೆದರಿಕೆ

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಜೈಲು ಸೇರಿದ್ದಾರೆ. ಇತ್ತ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಮುನಿರತ್ನ ಅವರ ವಿರುದ್ಧ ಸಾಕ್ಷಿ ಹೇಳಿದರೆ ಮನೆಗೆ ಬೆಂಕಿ ಹಚ್ಚುತ್ತೇವೆ. ನಿಮ್ಮ ವಂಶವೇ ಇರದಂತೆ ಮಾಡುತ್ತೇವೆಂದು ಸಾಕ್ಷಿಗಳ ಮನೆಗೆ ನುಗ್ಗಿ ಬಿಜೆಪಿ ಕಾರ್ಯಕರ್ತೆ ಸುನಂದಮ್ಮ ಮತ್ತು ಮುನಿರತ್ನ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ಪುತ್ರ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:22 am, Sun, 22 September 24

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us