ಚಿತ್ರದುರ್ಗ: ನಗರದ ದವಳಗಿರಿ ಬಡಾವಣೆಯಲ್ಲಿರುವ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಮನೆಯಲ್ಲಿ ತಡರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.
ಬಳ್ಳಾರಿಯ ಕೂಡ್ಲಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಮನೆಯಲ್ಲಿ ತಡರಾತ್ರಿ ಕಳ್ಳತನವಾಗಿದೆ. ಯಾರೂ ಇಲ್ಲದ ವೇಳೆ ಬೀಗ ಮುರಿದು ಮನೆಯಲ್ಲಿದ್ದ ವಸ್ತುಗಳನ್ನು ದೋಚಿ ಖದೀಮರು ಪರಾರಿಯಾಗಿದ್ದಾರೆ. 6 ತಿಂಗಳ ಹಿಂದೆಯೂ ಇದೇ ಮನೆಯಲ್ಲಿ ಕಳ್ಳತನವಾಗಿತ್ತು. ಘಟನಾ ಸ್ಥಳಕ್ಕೆ ಕೋಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.