AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಮತದಾನದಲ್ಲಿ ಎರಡು ನಿಯಮ ಯಾಕೆ? ಚುನಾವಣಾ ಆಯೋಗದ ದ್ವಂದ್ವ ನೀತಿ ಪ್ರಶ್ನಿಸಿ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ

ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಶಾಸಕರು ಮತ ಚಲಾಯಿಸುವ ನಿಯಮಾವಳಿಗಳಲ್ಲಿರುವ ದ್ವಂದ್ವ ನೀತಿಯನ್ನು ಪ್ರಶ್ನಿಸಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ. ಒಂದೇ ದಿನ ಎರಡು ಚುನಾವಣೆಗಳು ನಡೆದರೆ ಶಾಸಕರು ಎರಡು ಬೇರೆ ಬೇರೆ ರೀತಿಯ ನಿಯಮಗಳನ್ನು ಪಾಲಿಸಬೇಕಾದ ಗೊಂದಲದ ಬಗ್ಗೆ ಅವರು ಪತ್ರದಲ್ಲಿ ಸ್ಪಷ್ಟೀಕರಣ ಕೋರಿದ್ದಾರೆ.

ಶಾಸಕರ ಮತದಾನದಲ್ಲಿ ಎರಡು ನಿಯಮ ಯಾಕೆ? ಚುನಾವಣಾ ಆಯೋಗದ ದ್ವಂದ್ವ ನೀತಿ ಪ್ರಶ್ನಿಸಿ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ
ಶಾಸಕ ಎಸ್. ಸುರೇಶ್ ಕುಮಾರ್ ಹಾಗೂ ಅವರು ಚುನಾವಣಾ ಅಧಿಕಾರಿಗೆ ಬರೆದ ಪತ್ರದ ಪ್ರತಿ (ಕೃಪೆ: ಶಾಸಕರ ಫೇಸ್​ಬುಕ್ ಹಾಗೂ ಎಕ್ಸ್ ಪೋಸ್ಟ್)Image Credit source: Facebook
ಗಣಪತಿ ಶರ್ಮಾ
|

Updated on: Jun 20, 2026 | 1:48 PM

Share

ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಹಿನ್ನೆಲೆಯಲ್ಲಿ, ಶಾಸಕರು (ಮತದಾರರ ನೆಲೆಯಲ್ಲಿ) ವರ್ತಿಸಬೇಕಾದ ನಿಯಮಗಳಲ್ಲಿರುವ ವ್ಯತ್ಯಾಸಗಳ ಬಗ್ಗೆ ರಾಜಾಜಿನಗರ ಕ್ಷೇತ್ರದ ಬಿಜೆಪಿ (BJP) ಶಾಸಕ ಹಾಗೂ ಮಾಜಿ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ಪ್ರಶ್ನೆ ಮಾಡಿದ್ದಾರೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಈ ನಿಯಮಾವಳಿಗಳ ಹಿಂದಿರುವ ಅಸಲಿ ಉದ್ದೇಶವೇನು ಎಂದು ಪ್ರಶ್ನಿಸಿದ್ದಾರೆ.

ಮುಖ್ಯಾಂಶಗಳು

ಶಾಸಕರ ಮತದಾನದ ದ್ವಂದ್ವ ನೀತಿ ಬಗ್ಗೆ ಪ್ರಶ್ನೆ. ರಾಜ್ಯಸಭೆಯಲ್ಲಿ ಬಹಿರಂಗ, ಪರಿಷತ್ತಿನಲ್ಲಿ ಗೌಪ್ಯ ಮತದಾನ. ಗೊಂದಲಕ್ಕೆ ಸ್ಪಷ್ಟೀಕರಣ ಕೋರಿ ಸಿಇಒಗೆ ಪತ್ರ.

ಪತ್ರದಲ್ಲಿರುವ ಪ್ರಮುಖ ಅಂಶಗಳೇನು?

ಇತ್ತೀಚೆಗೆ ನಮ್ಮ ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಹಾಗೂ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಚುನಾವಣೆಗಳು ನಡೆದಿದ್ದವು. ರಾಜ್ಯಸಭೆ ಮತ್ತು ವಿಧಾನ ಪರಿಷತ್ ಎರಡೂ ಚುನಾವಣೆಗಳಿಗೂ ವಿಧಾನಸಭಾ ಸದಸ್ಯರೇ (ಶಾಸಕರು) ಮತದಾರರಾಗಿದ್ದಾರೆ. ಆದರೆ, ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಮತ ಚಲಾಯಿಸುವಾಗ ತಾವು ಗುರುತು ಮಾಡಿದ ಮತಪತ್ರವನ್ನು ಅಲ್ಲಿ ಕುಳಿತಿರುವ ತಮ್ಮ ಪಕ್ಷದ ಏಜೆಂಟರಿಗೆ ಕಡ್ಡಾಯವಾಗಿ ತೋರಿಸಿ ಹಾಕಬೇಕಿರುತ್ತದೆ. ಆದರೆ, ಅದೇ ವಿಧಾನ ಪರಿಷತ್ ಚುನಾವಣೆಯಲ್ಲಿ ಇದೇ ಶಾಸಕರಿಗೆ ಗೌಪ್ಯ ಮತದಾನದ ಸೌಲಭ್ಯವನ್ನು ನೀಡಲಾಗಿರುತ್ತದೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದ ಪ್ರತಿಯನ್ನು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸುರೇಶ್ ಕುಮಾರ್

ನಿಯಮಾವಳಿಗಳ ಉದ್ದೇಶವೇನು? ಸುರೇಶ್ ಕುಮಾರ್ ಪ್ರಶ್ನೆ

ಒಂದೊಮ್ಮೆ ರಾಜ್ಯಸಭೆಯ ಚುನಾವಣೆಗಳು ಅವಿರೋಧವಾಗಿ ಆಯ್ಕೆಯಾಗದೇ ಹೋಗಿದ್ದರೆ, ರಾಜ್ಯಸಭೆ ಮತ್ತು ವಿಧಾನ ಪರಿಷತ್ತಿನ ಎರಡೂ ಚುನಾವಣೆಗಳು ಒಂದೇ ದಿನ ನಡೆಯುತ್ತಿದ್ದವು. ಅಂತಹ ಸಂದರ್ಭದಲ್ಲಿ ಅದೇ ವಿಧಾನಸಭಾ ಸದಸ್ಯರು ರಾಜ್ಯಸಭೆಗೆ ಮತ ಹಾಕುವಾಗ ತಮ್ಮ ಏಜೆಂಟರಿಗೆ ಬ್ಯಾಲೆಟ್ ಪೇಪರ್ ತೋರಿಸಬೇಕಾಗುತ್ತದೆ ಮತ್ತು ಅದೇ ದಿನ ವಿಧಾನ ಪರಿಷತ್ತಿಗೆ ಮತ ಚಲಾಯಿಸುವಾಗ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕಾಗುತ್ತದೆ. ಒಂದೇ ದಿನ, ಒಂದೇ ಮತದಾರರಾಗಿ ವರ್ತಿಸುವಾಗ ಶಾಸಕರಿಗೆ ಈ ದ್ವಂದ್ವ ನೀತಿ ಏಕೆ? ಈ ರೀತಿಯ ವಿಭಿನ್ನ ನಿಯಮಾವಳಿಗಳ ಹಿಂದೆ ಇರುವ ಉದ್ದೇಶವಾದರೂ ಏನು? ಎಂದು ಸುರೇಶ್ ಕುಮಾರ್ ಅವರು ಪತ್ರದ ಮೂಲಕ ಚುನಾವಣಾ ಆಯೋಗವನ್ನು ನೇರವಾಗಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್​ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ಸಾರ್ವಜನಿಕವಾಗಿ ಮತ್ತು ರಾಜಕೀಯ ವಲಯದಲ್ಲಿ ಉದ್ಭವಿಸಿರುವ ಈ ಗೊಂದಲಕ್ಕೆ ಶೀಘ್ರವೇ ಸ್ಪಷ್ಟೀಕರಣ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು