AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್:ಸುಧಾಕರ್​​ಗೆ ವಿಶ್ವನಾಥ್ ಬಹಿರಂಗ ಸವಾಲ್

ಲೋಕಸಭೆ ಚುನಾವಣೆ ನಂತರವೂ ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಸರಿದಾರಿಗೆ ಬರುತ್ತಿಲ್ಲ. ಹೌದು...ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಮತ್ತು ಶಾಸಕ ಯಲಹಂಕ ಶಾಸಕ ಎಸ್​​ಆರ್ ವಿಶ್ವನಾಥ್ ನಡುವಿನ ವಾರ್ ಮತ್ತೆ ತಾರಕಕ್ಕೇರಿದೆ. 2024ರ ಲೋಕಸಭಾ ಎಲೆಕ್ಷನ್​​​​ ಸಂದರ್ಭದಲ್ಲಿ ಶುರುವಾದ ಇಬ್ಬರ ನಡುವಿನ ಮುಸುಕಿನ ಗುದ್ದಾಟ ಇದೀಗ ಬಹಿರಂಗವಾಗಿ ಕಾದಾಟದ ಹಂತಕ್ಕೆ ಬಂದು ತಲುಪಿದೆ.

ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್:ಸುಧಾಕರ್​​ಗೆ ವಿಶ್ವನಾಥ್ ಬಹಿರಂಗ ಸವಾಲ್
Sudhakar And Vishwanth
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jun 26, 2026 | 8:21 PM

Share

ಮುಖ್ಯಾಂಶಗಳು

  • ಕರ್ನಾಟಕ ಬಿಜೆಪಿಯಲ್ಲಿ ಮತ್ತೆ ಶುರುವಾಯ್ತು ನಾಯಕರ ವಾರ್
  • ಚಿಕ್ಕಬಳ್ಳಾಪುರ ಸಂಸದ ಸುಧಾಕರ್​ಗೆ ಶಾಸಕ ವಿಶ್ವನಾಥ್ ಬಹಿರಂಗ ಸವಾಲ್
  • ನನ್ನ ಅಲುಗಾಡಿಸಲು ಬಂದ್ರೆ ನಿನ್ನ ಬುಡಕ್ಕೆ ಕೈ ಕಾಕ್ತೇನೆಂದ ವಿಶ್ವನಾಥ್

ಚಿಕ್ಕಬಳ್ಳಾಪುರ, (ಜೂನ್ 26): ಬಿಜೆಪಿ ಸಂಸದ ಡಾ ಕೆ ಸುಧಾಕರ್  (Dr K Sudhakar) ಹಾಗೂ ಯಲಹಂಕ ಬಿಜೆಪಿ ಶಾಸಕ ಎಸ್​​​ಆರ್ ವಿಶ್ವನಾಥ್  (SR VIshwanath) ನಡುವಿನ ಗುದ್ದಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು(ಜೂನ್ 26) ಎಸ್​​ಆರ ವಿಶ್ವನಾಥ್ ಅವರು ಚಿಕ್ಕಬಳ್ಳಾಪುರಕ್ಕೆ ತೆರಳಿ ಸ್ವಪಕ್ಷದ ಸಂಸದ ಸುಧಾಕರ್ ವಿರುದ್ಧ ನೇರ ನೇರವಾಗಿ ಏಕವಚನದಲ್ಲಿ ವಾಗ್ದಾಳಿ ನಡೆಸಿ ಸವಾಲು ಹಾಕಿದ್ದಾರೆ. ಯಲಹಂಕ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು ಎಂದು ಹೇಳಿದರೂ ಪದೇ ಪದೇ ನನ್ನ ಕ್ಷೇತ್ರದಲ್ಲಿ ರಾಜಕೀಯ ಮಾಡಲು ಬಂದರೆ ನಿನ್ನ ಬುಡಕ್ಕೆ ಕೈ ಹಾಕಿತ್ತೇನೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸುಧಾಕರ್​​​ಗೆ ವಿಶ್ವನಾಥ್ ಸವಾಲ್

ಕಾಂಗ್ರೆಸ್ ನಾಯಕರನ್ನು ಆಹ್ವಾನಿಸುವುದು ಹಾಗೂ ನನ್ನ ಬೆಂಬಲಿಗರನ್ನು ನನ್ನ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಪರ ಕೆಲಸ ಮಾಡಿಲ್ಲ, ಆದ್ರೂ ನಿನಗೆ ಅನುಮಾನ ಇದ್ರೆ ಆರೋಪ ಸತ್ಯವಾಗಿದ್ದರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿ ಗೆ ಬನ್ನಿ ಪ್ರಮಾಣ ಮಾಡಲು ಸಿದ್ಧ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷದ ಅಭ್ಯರ್ಥಿ ಯಾರೇ ಆಗಿದ್ದರೂ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ ಸ್ಪರ್ಧಿಸುವ ಧೈರ್ಯವಿದ್ದರೆ ಸುಧಾಕರ್ ನೇರವಾಗಿ ನನ್ನ ವಿರುದ್ಧವೇ ಕಣಕ್ಕಿಳಿಯಲಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ನೋಡಿ: ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?

ಲೋಕಸಭೆ ಬಿಟ್ಟು ವಿಧಾನಸಭೆ ಎಲೆಕ್ಷನ್​​ಗೆ ನಿಲ್ಲುವ ಪ್ಲ್ಯಾನ್

ಸುಧಾಕರ್ ಅವರು ಲೋಕಸಭೆ ಬಿಟ್ಟು ವಿಧಾನಸಭೆ ಚುನಾವಣೆಯತ್ತ ಗಮನ ಹರಿಸುತ್ತಿದ್ದಾರೆ. ಬಿಜೆಪಿಯಿಂದ ನಿನಗೆ ಟಿಕೆಟ್ ಕೊಡಲ್ಲ, ಬೇರೆ ಪಕ್ಷದಿಂದ ಸ್ಪರ್ಧೆ ಮಾಡು. ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಸಂದೀಪ್ ರೆಡ್ಡಿಗೆ ನೀಡಬೇಕು ಎಂದು ಹೈಕಮಾಂಡ್‌ಗೆ ಮನವಿ ಮಾಡುತ್ತೇವೆ ನೇರವಾಗಿ ಸುಧಾಕರ್​​​ಗೆ ಹೇಳಿದರು.

ನಾನು ನೇರಾ ನೇರ ವ್ಯಕ್ತಿ, ಹೇಳಿದ್ದನ್ನು ಮಾಡುತ್ತೇನೆ. ಆದ್ರೆ ಚಿಕ್ಕಬಳ್ಳಾಪುರ BJP ಸಂಸದ ಡಾ.ಕೆ.ಸುಧಾಕರ್ ಡಿಫರೆಂಟ್ ವ್ಯಕ್ತಿ. ಅವರು ರಾಜಕೀಯ ಶೈಲಿ ಸಂಪೂರ್ಣ ವಿಭಿನ್ನ. ಸುಧಾಕರ್ ಪ್ರತಿಭೆ ಕಂಡು ಹಿಡಿಯಲು ಸತ್ಯಶೋಧನಾ ಸಮಿತಿ ಮಾಡಬೇಕಾಗುತ್ತೆ ಎಂದು ವ್ಯಂಗ್ಯವಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ