ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಕೇಸ್: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು

ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳ ಮೋಕ್ಷ ಮಾಡಿದ ಬಿಜೆಪಿ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯ ವರ್ತನೆಗೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಿಎಸ್​​​​​ಐಗೆ ಕ್ಷಮೆ ಕೇಳಬೇಕೆಂದು ತಾಕೀತು ಮಾಡಿತ್ತು. ಈ ಹಿನ್ನೆಲೆಯಲ್ಲಿ ಐಶ್ವರ್ಯ, ಪಿಎಸ್​​ಐಗೆ ಕ್ಷಮೆಯಾಚಿಸಿದ್ದಾರೆ. ಇದರ ಬೆನ್ನಲ್ಲೇ ಹೈಕೋರ್ಟ್​​, ಐಶ್ವರ್ಯಗೆ ನಿರೀಕ್ಷಣಾ ಜಾಮೀನು ನೀಡಿದೆ.

ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಕೇಸ್: ಕ್ಷಮೆಯಾಚಿಸಿದ ಬಿಜೆಪಿ ಶಾಸಕನ ಪುತ್ರಿಗೆ ಜಾಮೀನು
Aishwarya
Edited By:

Updated on: Sep 22, 2026 | 6:00 PM

ಬೆಂಗಳೂರು, (ಸೆಪ್ಟೆಂಬರ್ 22): ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುರೇಶ್ ಗೌಡ ಪುತ್ರಿ ಐಶ್ವರ್ಯಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ. ಮಹಿಳಾ ಪಿಎಸ್ಐ ಬಳಿ ಕ್ಷಮೆಯಾಚಿಸಿದರೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೇ ಐಶ್ವರ್ಯ, ವಿಡಿಯೋ ಮಾಡಿ ಕ್ಷಮೆಯಾಚಿಸಿದ್ದಾರೆ. ಇದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್​ ಇಂದು (ಸೆಪ್ಟೆಂಬರ್ 22) ಐಶ್ವರ್ಯಗೆ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಆಗಸ್ಟ್ 12 ರಂದು ಭೀಮನ ಅಮಾವಾಸ್ಯೆಯಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನಕ್ಕೆ ಬಂದಿದ್ದ ಐಶ್ವರ್ಯಾ, ಅಲ್ಲೇ ಇದ್ದ ಮಹಿಳಾ ಪಿಎಸ್​​ಐ ಸವಿತಾ ಪಾಟೀಲ್ ಅವರ ಕಪಾಳಕ್ಕೆ ಹೊಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಬಳಿಕ ಬಂಧನದಿಂದ ತಪ್ಪಿಸಿಕೊಳ್ಳಲು ಐಶ್ವರ್ಯ ಜಾಮೀನಿಗಾಗಿ ಹೈಕೋರ್ಟ್​​ಗೆ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಐಶ್ವರ್ಯಾ ಕ್ಷಮೆಯಾಚಿಸಿದರೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಬಹುದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಇದರ ಬೆನ್ನಲ್ಲೇ ಐಶ್ವರ್ಯ, ಸವಿತಾ ಪಾಟೀಲ್‌ಗೆ ವೀಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಹೀಗಾಗಿ ಕೋರ್ಟ್​​​ ಐಶ್ವರ್ಯಗೆ ಜಾಮೀನು ನೀಡಿದೆ.

ಇದನ್ನೂ ನೋಡಿ: ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಪ್ರಕರಣ: ವಿಡಿಯೋ ಮೂಲಕ ಕ್ಷಮೆ ಕೇಳಿದ ಶಾಸಕ ಸುರೇಶ್​ ಗೌಡ ಪುತ್ರಿ ಐಶ್ವರ್ಯಾ

ಐಶ್ವರ್ಯಾ ಮಹಿಳಾ ಪಿಎಸ್ಐ ಸವಿತಾ ಕ್ಷಮೆ ಕೇಳಿದ್ದಾರೆ. ನ್ಯೂಸ್ ಚಾನಲ್​ಗಳಲ್ಲೂ ಕ್ಷಮೆಯಾಚನೆ ಸುದ್ದಿ ಪ್ರಸಾರವಾಗಿದೆ ಎಂದು ಹೈಕೋರ್ಟ್​ಗೆ ಐಶ್ವರ್ಯಾ ಪರ ವಕೀಲರಿಂದ ಮಾಹಿತಿ ನೀಡಿದ್ದು, ಆರೋಪಕ್ಕೆ ಕೇವಲ 2 ವರ್ಷದವರೆಗೆ ಮಾತ್ರ ಶಿಕ್ಷೆ ಇದೆ. ಐಶ್ವರ್ಯಾ ಹಾಗೂ ಆಕೆಯ ತಂದೆ ಈಗಾಗಲೇ ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದರು. ಇದನ್ನು ಆಲಿಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಐಶ್ವರ್ಯಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ

ಆಗಸ್ಟ್ 12 ರಂದು ಭೀಮನ ಅಮಾವಾಸ್ಯೆಯಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನಕ್ಕೆ ಐಶ್ವರ್ಯಾ ತಮ್ಮ ಮಕ್ಕಳೊಂದಿಗೆ ತೆರಳಿದ್ದರು. ದೇವಾಲಯದ ಗರ್ಭಗುಡಿಗೆ ಪ್ರವೇಶಿಸುವ ವಿಚಾರವಾಗಿ ಅಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್ಐ ಸವಿತಾ ಪಾಟೀಲ್ ಅವರೊಂದಿಗೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಐಶ್ವರ್ಯಾ ಪಿಎಸ್ಐಗೆ ಕಪಾಳಮೋಕ್ಷ ಮಾಡಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಪಿಎಸ್​ಐ ಸವಿತಾ ಬಿ.ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಗಾಯಗೊಳಿಸುವುದು, ಉದ್ದೇಶಪೂರ್ವಕ ಅವಮಾನ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಐಶ್ವರ್ಯಾ ಕೂಡ ಪೊಲೀಸ್‌ ಅಧಿಕಾರಿಯ ವಿರುದ್ಧ ಪ್ರತಿದೂರು ನೀಡಿದ್ದರು. ಪೊಲೀಸ್‌ ಅಧಿಕಾರಿಯೇ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎಂದು ಅವರು ಆರೋಪಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:58 pm, Tue, 22 September 26

Loading...
Unable to load recommendations.
Follow Us