AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸೌಧದಲ್ಲಿ ಉರ್ದು ದಿನಾಚರಣೆಗೆ ಬಿಜೆಪಿ ವಿರೋಧ: ಕನ್ನಡ ಭಾಷೆಗೆ ಇಂತಹ ವೈಭವದ ವೇದಿಕೆ ಎಷ್ಟು ಬಾರಿ ಲಭಿಸಿದೆ ಎಂದ ಸುರೇಶ್ ಕುಮಾರ್

ಇದೇ ನವೆಂಬರ್ 9ರಂದು ಉರ್ದು ದಿನದ ಅಂಗವಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದ ಆಶ್ರಯದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ಆಯೋಜಿಸಲು ಸಿದ್ಧತೆ ನಡೆದಿದೆ. ಆದ್ರೆ, ಇದಕ್ಕೆ ವಿರೋಧಗಳು ವ್ಯಕ್ತವಾಗಿದ್ದು, ಈ ಸಂಬಂಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ಮಾಧ್ಯಮ ಪ್ರಕಟಣೆ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ವಿಧಾನಸೌಧದಲ್ಲಿ ಉರ್ದು ದಿನಾಚರಣೆಗೆ ಬಿಜೆಪಿ ವಿರೋಧ: ಕನ್ನಡ ಭಾಷೆಗೆ ಇಂತಹ ವೈಭವದ ವೇದಿಕೆ ಎಷ್ಟು ಬಾರಿ ಲಭಿಸಿದೆ ಎಂದ ಸುರೇಶ್ ಕುಮಾರ್
Suresh Kumar
ಕಿರಣ್​ ಹನಿಯಡ್ಕ
| Edited By: |

Updated on: Sep 30, 2026 | 5:41 PM

Share

ಬೆಂಗಳೂರು, (ಸೆಪ್ಟೆಂಬರ್ 30): ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಅದ್ಧೂರಿಯಾಗಿ ‘ಉರ್ದು ದಿನಾಚರಣೆ’ ಆಚರಿಸಲು ಸಿದ್ಧತೆ ನಡೆಸಿದೆ. ಇದೇ ನವೆಂಬರ್ 9ರಂದು ಶಕ್ತಿಸೌಧವಾದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ ನಡೆಸುತ್ತಿರುವುದಕ್ಕೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್, ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕನ್ನಡಿಗರ ಅನನ್ಯತೆಯ ಸಂಕೇತವಾಗಿರುವ ವಿಧಾನಸೌಧವನ್ನು ನಿರ್ದಿಷ್ಟ ಸಮುದಾಯದ ಮತಬ್ಯಾಂಕ್ ಓಲೈಕೆಗೆ ಬಳಸಿಕೊಳ್ಳಲಾಗುತ್ತಿದೆ. ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನವೆಂಬರ್ 9ರಂದು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಉರ್ದು ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಉದ್ದೇಶಿಸಲಾಗಿದ್ದು, ಈ ವೇದಿಕೆಯಲ್ಲಿ ಉರ್ದು ಭಾಷೆ, ಸಂಸ್ಕೃತಿ, ಸಾಹಿತ್ಯ, ಪುಸ್ತಕಗಳು, ಆಹಾರ ಪದ್ಧತಿ ಹಾಗೂ ವಿವಿಧ ಕಲಾ ಪ್ರಕಾರಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ  ಯು.ಟಿ. ಖಾದರ್ ಘೋಷಣೆ ಮಾಡಿದ್ದಾರೆ. ಇದನ್ನೇ ಪ್ರಸ್ತಾಪಿಸಿರುವ ಸುರೇಶ್ ಕುಮಾರ್, ಸರ್ಕಾರದ ಆದ್ಯತೆಗಳ ಕುರಿತು ಪ್ರಶ್ನಿಸಿದ್ದಾರೆ.

ಇದನ್ನೂ ನೋಡಿ: ಬೆಳಗಾವಿ ಪಾಲಿಕೆ ಸಭೆಯಲ್ಲಿ ವಂದೇ ಮಾತರಂ ವಿವಾದ: ಬಿಜೆಪಿ-ಕಾಂಗ್ರೆಸಿಗರ ನಡುವೆ ವಾಗ್ವಾದ

ಸರ್ಕಾರದ ನಿಲುವನ್ನು ಪ್ರಶ್ನಿಸಿದ ಸುರೇಶ್ ಕುಮಾರ್

ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಸರ್ಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡಿರುವ ಸುರೇಶ್ ಕುಮಾರ್, “ಇಲ್ಲಿ ಪ್ರಶ್ನೆ ಉರ್ದು ಭಾಷೆಯದ್ದಲ್ಲ, ಬದಲಿಗೆ ಸರ್ಕಾರದ ಆದ್ಯತೆಯದ್ದಾಗಿದೆ. ಕನ್ನಡದ ನೆಲದಲ್ಲಿ, ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಇಂತಹ ವೈಭವದ ವೇದಿಕೆ ಎಷ್ಟು ಬಾರಿ ಲಭಿಸಿದೆ? ಕನ್ನಡದ ಶ್ರೀಮಂತ ಉಪಭಾಷೆಗಳಿಗೆ ಸಿಗದ ಇಂತಹ ಮಹತ್ವ ಮತ್ತು ಪ್ರಾಮುಖ್ಯತೆಯನ್ನು ಉರ್ದು ಭಾಷೆಗೆ ನೀಡುತ್ತಿರುವುದು ಏಕೆ?” ಎಂದು ನೇರಾ ನೇರವಾಗಿ ಪ್ರಶ್ನಿಸಿದ್ದಾರೆ.

ಕನ್ನಡಿಗರ ತೆರಿಗೆ ಹಣದಿಂದ ನಡೆಯುವ ಸರ್ಕಾರಿ ವೇದಿಕೆಗಳು ಕೇವಲ ವೋಟ್‌ಬ್ಯಾಂಕ್ ರಾಜಕಾರಣದ ಕೇಂದ್ರಗಳಾಗಬಾರದು. ನಿರ್ದಿಷ್ಟ ಸಮುದಾಯವನ್ನು ಓಲೈಸುವ ಉದ್ದೇಶದಿಂದ ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ವಿಧಾನಸೌಧವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಮತ್ತು ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಸರ್ಕಾರ ಕೈಗೊಂಡಿರುವ ಈ ಓಲೈಕೆ ರಾಜಕಾರಣದ ತೀರ್ಮಾನವನ್ನು ತಕ್ಷಣವೇ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೋತ್ತರಗಳು

ಪ್ರಶ್ನೆ: ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಉರ್ದು ದಿನಾಚರಣೆ ಆಚರಣೆಗೆ ಮುಂದಾಗಿರುವವರು ಯಾರು?

ಉತ್ತರ: ಕರ್ನಾಟಕದಲ್ಲಿ ಮೊದಲ ಬಾರಿಗೆ ಉರ್ದು ದಿನಾಚರಣೆಯನ್ನು ಆಚರಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.

ಪ್ರಶ್ನೆ: ಉರ್ದು ದಿನಾಚರಣೆಯನ್ನು ಎಲ್ಲಿ ಮತ್ತು ಯಾವಾಗ ಆಚರಿಸಲು ತೀರ್ಮಾನಿಸಲಾಗಿದೆ?

ಉತ್ತರ: ಇದೇ ನವೆಂಬರ್ 9ರಂದು ಉರ್ದು ದಿನಾಚರಣೆಯನ್ನು ಅದ್ಧೂರಿಯಾಗಿ ಶಕ್ತಿಸೌಧವಾದ ವಿಧಾನಸೌಧದ ಮೆಟ್ಟಿಲುಗಳ ಮೇಲೆ  ಆಚರಣೆ ಮಾಡಲು ನಿರ್ಧರಿಸಲಾಗಿದೆ.

ಪ್ರಶ್ನೆ: ಉರ್ದು ದಿನಾಚರಣೆ ಆಚರಿಸಲು ವಿರೋಧಿಸಿದವರು ಯಾರು?

ಉತ್ತರ: ಇದೇ ಮೊದಲ ಬಾರಿಗೆ ನವೆಂಬರ್ 9ರಂದು ವಿಧಾನಸೌಧದಲ್ಲಿ ಉರ್ದು ದಿನಾಚಣೆ ಆಚರಿಸಲು ಮುಂದಾಗಿರುವುದಕ್ಕೆ ಬಿಜೆಪಿಯ ಸುರೇಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!