ಯಡಿಯೂರಪ್ಪ ನಿವಾಸ ಪವರ್​ ಹೌಸ್​​: ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಹಾಕುತ್ತಿರುವ ಆಪ್ತ ಶಾಸಕರು

ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಸದ್ಯಕ್ಕೆ ಕಾವೇರಿ ನಿವಾಸದಲ್ಲಿದ್ದಾರೆ. ಹಾಗಾಗಿ ಶಾಸಕರ ದಂಡು ಕಾವೇರಿ ನಿವಾಸದಲ್ಲಿ ಕಾಣಿಸಿಕೊಂಡಿದೆ. ಪಕ್ಕದಲ್ಲೇ ಇರುವ ಕುಮಾರ ಕೃಪಾ ಗೆಸ್ಟ್​ ಹೌಸ್​​ನಲ್ಲಿ ಬಿಜೆಪಿ ವರಿಷ್ಠರು ಮತ್ತು ವೀಕ್ಷಕರು ವಾಸ್ತವ್ಯ ಹೂಡಿದ್ದು, ಸದರಿ ಶಾಸಕರು ಅಲ್ಲಿಗೂ ಒಂದು ವಿಸಿಟ್ ಹಾಕುತ್ತಿದ್ದಾರೆ. ​

ಯಡಿಯೂರಪ್ಪ ನಿವಾಸ ಪವರ್​ ಹೌಸ್​​: ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಹಾಕುತ್ತಿರುವ ಆಪ್ತ ಶಾಸಕರು
ಯಡಿಯೂರಪ್ಪ ಪವರ್​ ಹೌಸ್​​: ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಲು ಯಡಿಯೂರಪ್ಪ ನಿವಾಸಕ್ಕೆ ವಿಸಿಟ್ ಹಾಕುತ್ತಿರುವ ಆಪ್ತ ಶಾಸಕರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 28, 2021 | 9:30 AM

ಬಿ ಎಸ್ ಯಡಿಯೂರಪ್ಪ ಅವರ ಮಾನಸ ಪುತ್ರ ಎಂದೇ ಬಿಂಬಿತರಾಗಿರುವ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದಾರೆ. ಇದೇ ಸಂದರ್ಭವನ್ನು ಬಳಸಿಕೊಂಡು ಅಂದರೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ನಿರ್ಗಮನಗೊಂಡಿದ್ದರೂ ಅವರ ಆಪ್ತ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿರುವುದರಿಂದ ಬಿಎಸ್​ವೈ ಮಾತು ಇನ್ನೂ ನಡೆಯುತ್ತದೆ ಎಂದು ಅವರ ಆಪ್ತ ವಲಯ ಹೇಳುತ್ತಿದೆ. ಹಾಗಾಗಿ ಬಿ ಎಸ್ ಯಡಿಯೂರಪ್ಪ ಅವರು ಪವರ್​ ಹೌಸ್​​ ಆಗಿದ್ದು, ಬೊಮ್ಮಾಯಿ ನೂತನ ಮಂತ್ರಿ ಮಂಡಲ ಸೇರುವ ತವಕದಲ್ಲಿ ಯಡಿಯೂರಪ್ಪ ಅವರನ್ನು ಅನೇಕ ಶಾಸಕರು ಎಡತಾಕತೊಡಗಿದ್ದಾರೆ.

ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ ಸದ್ಯಕ್ಕೆ ಕಾವೇರಿ ನಿವಾಸದಲ್ಲಿದ್ದಾರೆ. ಹಾಗಾಗಿ ಶಾಸಕರ ದಂಡು ಕಾವೇರಿ ನಿವಾಸದಲ್ಲಿ ಕಾಣಿಸಿಕೊಂಡಿದೆ. ಪಕ್ಕದಲ್ಲೇ ಇರುವ ಕುಮಾರ ಕೃಪಾ ಗೆಸ್ಟ್​ ಹೌಸ್​​ನಲ್ಲಿ ಬಿಜೆಪಿ ವರಿಷ್ಠರು ಮತ್ತು ವೀಕ್ಷಕರು ವಾಸ್ತವ್ಯ ಹೂಡಿದ್ದು, ಸದರಿ ಶಾಸಕರು ಅಲ್ಲಿಗೂ ಒಂದು ವಿಸಿಟ್ ಹಾಕುತ್ತಿದ್ದಾರೆ. ​ಇದೀಗ ಖುದ್ದು ಬಸವರಾಜ ಬೊಮ್ಮಾಯಿ ಅವರೂ ಸಹ ಯಡಿಯೂರಪ್ಪ ನಿವಾಸಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಯಡಿಯೂರಪ್ಪ ಆಶೀರ್ವಾದ ಪಡೆಯಲು ಬಂದಿದ್ದಾರೆ.

ಸಚಿವ ಸ್ಥಾನದ ಮೇಲೆ ಕಣ್ಣು ನೆಟ್ಟಿರುವ ಎಂಪಿ ಕುಮಾರಸ್ವಾಮಿ ಅವರು ಯಡಿಯೂರಪ್ಪ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಜೊತೆಗೆ ಆರಗ ಜ್ಞಾನೇಂದ್ರ ಸಹ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಇನ್ನು ಪಕ್ಕದ ಕೆ.ಕೆ.ಗೆಸ್ಟ್‌ ಹೌಸ್‌ಗೆ ಬಿಜೆಪಿ ಶಾಸಕರು ಆಗಮಿಸುತ್ತಿದ್ದಾರೆ. ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಭೈರತಿ ಬಸವರಾಜ್, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಮುರುಗೇಶ್​ ನಿರಾಣಿ, ಅರವಿಂದ ಲಿಂಬಾವಳಿ, ಎಂಎಲ್‌ಸಿ ವಿಶ್ವನಾಥ್ ಆಗಮಿಸಿದ್ದಾರೆ.

Karnataka Politics: ಮುಖ್ಯಮಂತ್ರಿ ಹೆಸರು ಘೋಷಣೆ ಬಳಿಕ ಯಡಿಯೂರಪ್ಪ ಕಾಲಿಗೆ ನಮಸ್ಕಾರ ಮಾಡಿದ ಬಸವರಾಜ ಬೊಮ್ಮಾಯಿ

(BJP MLAs visit out going chief minister bs yediyurappa)

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM