AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತ ಬರುವಂತೆ ಹಲ್ಲೆ, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು

ಬೆಳಗಾವಿ ಅಧಿವೇಶನದ ಕೊನೆ ದಿನ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ವಿಧಾನಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಸದಸ್ಯ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದರು ಎಂಬ ವಿಚಾರ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ. ಏತನ್ಮಧ್ಯೆ, ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದು, ಕೊಲೆಗೆ ಸಂಚು ಹೂಡಿದ್ದಾರೆ ಎಂದು ಸಿಟಿ ರವಿ ಪ್ರತಿ ದೂರು ನೀಡಿದ್ದಾರೆ.

ರಕ್ತ ಬರುವಂತೆ ಹಲ್ಲೆ, ಕೊಲೆಗೆ ಸಂಚು: ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಪ್ರತಿ ದೂರು
ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ
Sahadev Mane
| Edited By: |

Updated on: Dec 20, 2024 | 7:02 AM

Share

ಬೆಳಗಾವಿ, ಡಿಸೆಂಬರ್ 20: ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಕೊಲೆಗೆ ಸಂಚು ಹೂಡಲಾಗಿದೆ ಎಂದು ಸಿಟಿ ರವಿ ಆರೋಪಿಸಿದ್ದಾರೆ. ಜತೆಗೆ, ಪ್ರತಿ ದೂರು ಕೂಡ ನೀಡಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ದೂರಿನಲ್ಲೇನಿದೆ?

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಗುರುವಾರ ದೂರು ದಾಖಲಿಸಿದ್ದಾರೆ. ಸಿಟಿ ರವಿ ತಮ್ಮ ಕಡೆಗೆ ನುಗ್ಗಿ ಬಂದು 10 ಬಾರಿ ಆ ಆಕ್ಷೇಪಾರ್ಹ ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಕೂಡ ಮಾಡಿ, ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರು ಕೊಟ್ಟಿದ್ದರು. ಇದಾದ ಬೆನ್ನಲ್ಲೇ ಸುವರ್ಣಸೌಧದಲ್ಲಿ ಧರಣಿ ಕುಳಿತಿದ್ದ ಸಿಟಿ ರವಿಯನ್ನು ಹೀರೇಬಾಗೇವಾಡಿ ಪೊಲೀಸರು ಬಲವಂತವಾಗಿ ಹೆಗಲ ಮೇಲೆ ಹೊತ್ತುಕೊಂಡು, ಜೀಪು ಹತ್ತಿಸಿ ಕರೆದೊಯ್ದಿದ್ದರು. ಹೀರೇಬಾಗೇವಾಡಿ ಠಾಣೆಯಲ್ಲಿ ಕೆಲಹೊತ್ತು ಕೂರಿಸಿ ನಂತರ ನಂದಗಢ ಠಾಣೆಗೆ ಕರೆದೊಯ್ದಿದ್ದರು. ಮತ್ತೆ ಅಲ್ಲಿಂದ ಖಾನಾಪುರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಂಧಿಸಿದ್ದರು.

ಖಾನಾಪುರ ಪೊಲೀಸ್ ಠಾಣೆಯಿಂದ ಬೆಂಗಳೂರಿಗೆ ಸಿ.ಟಿ.ರವಿ ಶಿಫ್ಟ್

ಖಾನಾಪುರ ಠಾಣೆಯಲ್ಲಿ ಸಿಟಿ ರವಿ ಬಂಧಿಸಿಡಲಾಗಿತ್ತು. ಠಾಣೆ ಮುಂದೆ ಬಿಜೆಪಿ ಎಂಎಲ್ಸಿ ರವಿಕುಮಾರ್, ಸುಭಾಷ್ ಪಾಟೀಲ್, ಸಂಜಯ್ ಪಾಟೀಲ್, ಸೇರಿದಂತೆ ಮತ್ತಿತ್ತತರು ಸಿ.ಟಿ.ರವಿ ಬಂಧನ ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ.

ನಂತರ ವಿಪಕ್ಷ ನಾಯಕ ಆರ್.ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಮಾಜಿ ಸಚಿವ ಪ್ರಭು ಚೌಹಾಣ್‌ ಖಾನಾಪುರ ಪೊಲೀಸ್ ಠಾಣೆಗೆ ಲಗ್ಗೆ ಹಾಕಿದ್ದಾರೆ. ಆದರೆ ಠಾಣೆಯೊಳಗೆ ಯಾರನ್ನೂ ಬಿಡದ ಕಾರಣ ಭಾರಿ ಜಟಾಪಟಿಯೇ ನಡೆಯಿತು. ಪೊಲೀಸ್ ನಡೆಗೆ ಕೆರಳಿದ ಆರ್.ಅಶೋಕ್, ನಾನು ಸಹ ಹೋಂ ಮಿನಿಸ್ಟರ್ ಆಗಿ ಕೆಲಸ ಮಾಡಿದ್ದೇನೆ. ಇದೆಲ್ಲವೂ ನಡೆಯೋದಿಲ್ಲ, ಕಮಿಷನರ್​ಗೆ ನಿಮ್ಮನ್ನ ನೋಡಿಕೊಳ್ತೇನೆ ಎಂದು ಎಚ್ಚರಿಕೆ ನೀಡಿದರು.

ಕೊಲೆಗೆ ಸಂಚು, ಪ್ರತಿ ದೂರು ನೀಡಿದ ಸಿಟಿ ರವಿ

ಇನ್ನು ಖಾನಾಪುರ ಠಾಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಕೂಡ ಪ್ರತಿದೂರು ದಾಖಲಿಸಿದ್ದಾರೆ. ಖಾನಾಪುರ ಠಾಣೆಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ, ಕಾನೂನು ಸುವ್ಯವಸ್ಥೆ ಕಾರಣ ಪೊಲೀಸರು ಸಿಟಿ ರವಿಯನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಮುಂದಾದರು. ಈ ವೇಳೆಯೂ ಭಾರಿ ಹೈಡ್ರಾಮವೇ ನಡೆಯಿತು. ಬಿಜೆಪಿ ನಾಯಕರು ಏಕಾಏಕಿ ಮುಗಿಬಿದ್ದರು. ಇದರಿಂದ ಭಾರಿ ತಳ್ಳಾಟ, ನೂಕಾಟವೇ ನಡೆಯಿತು.

ಪೊಲೀಸರ ವರ್ತನೆ ವಿರುದ್ಧ ಆಕ್ರೋಶ ಹೊರಹಾಕಿದ ಸಿಟಿ ರವಿ ನನ್ನ ಕೊಲೆಗೆ ಸಂಚು ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ಸಿಟಿ ರವಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಈ ಕಾಂಗ್ರೆಸ್​ನವರು ಏನು ಮಾಡುವುದಕ್ಕೂ ಹಿಂಜರಿಯುವುದಿಲ್ಲ. ಈ ಸರ್ಕಾರ ಬೆಳಗಾವಿಯನ್ನು ಮಿನಿ ಪಾಕಿಸ್ತಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದಿಸಿದ್ರಾ ಸಿಟಿ ರವಿ? ಅಷ್ಟಕ್ಕೂ ಆಗಿದ್ದೇನು?

ಡಿಸಿಎಂ ಮತ್ತು ಗೃಹ ಸಚಿವರ ಸೂಚನೆಯಂತೆ ಪೊಲೀಸ್ ಕಮಿಷನರ್ ವರ್ತಿಸುತ್ತಿದ್ದಾರೆ. ಸಿಟಿ ರವಿ ತಲೆಗೆ ರಕ್ತ ಬರುವಂತೆ ಏಟು ಬಿದ್ದಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆದ್ದಾರೆ.

ಇಂದು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಸಿಟಿ ರವಿ ಹಾಜರು

ಗುರುವಾರ ರಾತ್ರಿ ಬಿಗಿಭದ್ರತೆಯಲ್ಲಿ ಸಿಟಿ ರವಿಯನ್ನು ಖಾನಾಪುರ ಠಾಣೆಯಿಂದ ಬೆಂಗಳೂರಿಗೆ ಬಿಗಿಭದ್ರತೆಯಲ್ಲಿ ಕರೆತರಲಾಗುತ್ತಿದೆ. ಇಂದು ಸಂಜೆಯೊಳಗೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್​​​ಗೆ ಸಿ‌ಟಿ‌ ರವಿಯನ್ನು ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sahadev Mane
Sahadev Mane