ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದಿಸಿದ್ರಾ ಸಿಟಿ ರವಿ? ಅಷ್ಟಕ್ಕೂ ಆಗಿದ್ದೇನು?

ಅತ್ತ ಸಂಸತ್​ನಲ್ಲಿ ಅಂಬೇಡ್ಕರ್​ ಅವರ ವಿಚಾವಾಗಿ ಆಡಳಿತರೂಢ ಎನ್​ಡಿಎ ಸದಸ್ಯರು ಹಾಗೂ ವಿಪಕ್ಷ ಸದಸ್ಯರ ನಡುವೆ ದೊಡ್ಡ ಮೊಟ್ಟದ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಇದರ ಮಧ್ಯ, ನೂಕಾಟ ತಳ್ಳಾಟದಲ್ಲಿ ಇಬ್ಬರು ಸಂಸದರ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಇದರ ಮಧ್ಯ ಇತ್ತ ಕರ್ನಾಟಕ ವಿಧಾನಪರಿಷತ್ ಚಳಿಗಾಲದ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಈ ಸಂಬಂಧ ಪರಸ್ಪರ ಚರ್ಚೆ ವೇಳೆ ಬಿಜೆಪಿ ಸದಸ್ಯ ಸಿಟಿ ರವಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದರಿಂದ ಸನದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.

ಸದನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅಶ್ಲೀಲ ಪದದಿಂದ ನಿಂದಿಸಿದ್ರಾ ಸಿಟಿ ರವಿ? ಅಷ್ಟಕ್ಕೂ ಆಗಿದ್ದೇನು?
ಲಕ್ಷ್ಮೀ ಹೆಬ್ಬಾಳ್ಕರ್​-ಸಿಟಿ ರವಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 19, 2024 | 3:55 PM

ಬೆಳಗಾವಿ (ಡಿಸೆಂಬರ್.19): ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾಂಗ್ರೆಸ್ ನಾಯಕರು ಸಿಟಿ ರವಿ ವಿರುದ್ಧ ಆಕ್ರೋಶಗೊಂಡಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಬಿಗಿಪಟ್ಟು ಹಿಡಿದಿದೆ.

ರಾಜ್ಯಸಭೆಯಲ್ಲಿ ಅಮಿತ್‌ ಶಾ (Amit Shah) ಹೇಳಿಕೆ ಖಂಡಿಸಿ ಪರಿಷತ್‌ನಲ್ಲಿ (Vidhan Parishad) ಇಂದು ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಮಾತಿನ ಚಕಮಕಿ ನಡೆಯವಾಗ ನನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರ ಆರೋಪ ಮಾಡಿದ್ದಾರೆ.  ಇದರಿಂದ ಸದನದಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಗಿದೆ.

ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದಬಳಕೆ ಬಗ್ಗೆ ಕೇಳಿದಾಗ ಸಿಟಿ ರವಿಯವರು ಡಾ ಬಿಅರ್ ಅಂಬೇಡ್ಕರ್ ಕುರಿತು ಮಾತಾಡಿದರು! 

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯರು ಪ್ರಾಸ್ಟೂ* ಎಂಬ ಪದ ಬಳಕೆ ಮಾಡಿದ್ದಾರೆ. ಈ ಪದವನ್ನು ಬಳಕೆ ಮಾಡಿದ್ದರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೆಂಡಾಮಂಡಲವಾಗಿದ್ದಾರೆ. ಇದರಿಂದ ತಮಗಾದ ಅವಮಾನ ತಡೆದುಕೊಳ್ಳಲಾಗದೇ ಲಕ್ಷ್ಮೀ ಹೆಬ್ಬಾಳ್ಕರ್ ಕಣ್ಣಿರು ಹಾಕುತ್ತಾ ಪರಿಷತ್ತಿನಿಂದ ಹೊರಗೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಸಿಟಿ ರವಿ ವಿರುದ್ಧ ಮುಗಿಬಿದ್ದಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ.

ಸಭಾಪತಿ ಜೊತೆ ಕಾಂಗ್ರೆಸ್ ನಾಯಕರ ಸಭೆ

ಅಶ್ಲೀಲ ಪದ ಬಳಿಕೆ ಮಾಡಿರುವ ಸಿಟಿ ರವಿ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಕಾಂಗ್ರೆಸ್ ನಾಯಕರು ಕಾನೂನ ಪರಿಣಿತರ ಜೊತೆ ಚರ್ಚೆ ನಡೆಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಚೇಂಬರ್ ನಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಪ್ರಿಯಾಂಕ್ ಖರ್ಗೆ., ಬೋಸರಾಜ್ ಲಕ್ಷ್ಮಿ ಹೆಬ್ಬಾಳ್ಕರ್, ಹೆಚ್ ಕೆ ಪಾಟೀಲ್ ಮಾತುಕತೆ ನಡೆಸಿದ್ದಾರೆ.

ಸಿ.ಟಿ. ಮಾತಿಗೆ ಮಾಜಿ‌ ಸಚಿವೆ ಉಮಾಶ್ರೀ ಖಂಡನೆ

Tv9ಗೆ ಮಾಜಿ‌ ಸಚಿವ ಉಮಾಶ್ರೀ ಪ್ರತಿಕ್ರಿಯಿಸಿ, ಯಾವ ಹೆಣ್ಣೂ‌ ಸಹ ನನ್ನನ್ನ ಪ್ರಾಸಿಟ್ಯೂಟ್ ಅಂದ್ರು ಅಂತ ಸುಳ್ಳು ಅಥವಾ ಸುಮ್ಮನೆ ಹೇಳುವುದಿಲ್ಲ. ಸಿ.ಟಿ‌ ರವಿ ಆ ಪದ ಬಳಕೆ ಮಾಡಿದ್ದು ನಿಜ/ ನಮ್ಮ‌ ನಾಯಕ ರಾಹುಲ್ ಗಾಂಧಿ ಬಗ್ಗೆ ಡ್ರಗ್ ಅಡಿಕ್ಟ್ ಎಂದು ಮಾತನಾಡಿದ್ರು ಆಗ ನೀವು ಅಪಘಾತದಲ್ಲಿ ಇಬ್ಬರ ಕೊಲೆ ಮಾಡಿದ್ದೀರಿ, ಕೊಲೆಗಡುಕರು ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಕೂಗಿದ್ರು.. ಆಗ ಸಿ.ಟಿ‌. ರವಿ ಪ್ರಾಸಿಟ್ಯೂಟ್ ಅಂತ 10 ಬಾರೀ ಕೂಗಿದ್ರು. ಕೂಗಿದ್ದು ನಿಜ. ಸಭಾಪತಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಂಎಲ್‌ಸಿ ನಾಗರಾಜ್ ಯಾದವ್ ಹೇಳಿದ್ದಿಷ್ಟು

ಈ ಸಂಬಂಧ ಕಾಂಗ್ರೆಸ್​ ಎಂಎಲ್‌ಸಿ ನಾಗರಾಜ್ ಯಾದವ್ ಪ್ರತಿಕ್ರಿಯಿಸಿ, ಅಂಬೇಡ್ಕರ್ ಅಪಮಾನ ಮಾಡಿರೋ ಬಗ್ಗೆ ನಾವು ಸದನದಲ್ಲಿ ಮಾತಾಡ್ತಿದ್ದೇವೆ. ಅಮಿತ್ ಶಾ ವಿಚಾರ ಮತಾಡುವಾಗ ಗದ್ದಲ ಆಗುತ್ತೆ. ಲಕ್ಷ್ಮೀ ಹೆಬ್ಬಾಳ್ಕರ್ ಸಿಟಿ ರವಿಗೆ ಕೊಲೆಗಾರ ಎನ್ನುವ ಶಬ್ದ ಬಳಕೆ ಮಾಡ್ತಾರೆ. ಆಗ ಸಿಟಿ ರವಿ ಸಹ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಕ್ಷೇಪಾರ್ಹ್ ಪದ ಬಳಕೆ ಮಾಡಿದ್ದಾರೆ. ಈ ಹಿನ್ನೆಲೆ ನಾವು ಸಭಾಪತಿಗಳಿಗೆ ದೂರನ್ನ ಕೊಟ್ಟಿದ್ದು, ಸಿಟಿ ರವಿಯನ್ನ ಪರಿಷತ್ ನಿಂದ ಹೊರಹಾಕಬೇಕೆದು ಮನವಿ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಸದಸ್ಯ ಶರವಣ ಹೇಳಿದ್ದೇನು?

ಈ ಬಗ್ಗೆ ಜೆಡಿಎಸ್ ಪರಿಷತ್ ಸದಸ್ಯ ಶರವಣ ಮಾತನಾಡಿ, ಅಂಬೇಡ್ಕರ್ ವಿಚಾರವಾಗಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳ ನಡುವೆ ಸದನದಲ್ಲಿ ವಾಕ್ಸಮರ ನಡೆಯುತ್ತಿತ್ತು. ಸದನದ ಒಳಗಡೆ ನಾವೆಲ್ಲ ಪ್ರತಿಭಟನೆ ಮಾಡುತ್ತಿದ್ದೇವು. ಸ್ಪೀಕರ್ 10 ನಿಮಿಷ ಮುಂದೂಡಿಕೆ ಮಾಡಿದ್ರು. ಆಗ ಕೊಲೆಗಡುಕ ಡ್ರಗ್ಗಿಸ್ಟ್ ಪದ ಬಂತು. ನಾನು ಕೂಡ ಸಿಟಿ ರವಿ ಹತ್ತರದಿಂದ ನೋಡಿದ್ದೇನೆ. ಯಾವದೇ ಅಶ್ಲೀಲ ಪದ ಬಳಕೆ ನನ್ನ ಗಮನಕ್ಕೆ ಬಂದಿಲ್ಲ. ಅಂತ ಪದ ಬಳಕೆ ಮಾಡಿಲ್ಲ ಅಂದುಕೊಂಡಿರುವೆ ಎಂದು ಸಿಟಿ ರವಿ ಪರ ಬ್ಯಾಟಿಂಗ್ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Thu, 19 December 24

ಮಲ್ಲಿಕಾರ್ಜುನ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ: ಬಸವರಾಜು
ಮಲ್ಲಿಕಾರ್ಜುನ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ: ಬಸವರಾಜು
ನಿವೃತ್ತಿ ಬೆನ್ನಲ್ಲೇ ಟೀಮ್ ಇಂಡಿಯಾ ತೊರೆದ ಅಶ್ವಿನ್​ಗೆ ಅದ್ಧೂರಿ ಸ್ವಾಗತ
ನಿವೃತ್ತಿ ಬೆನ್ನಲ್ಲೇ ಟೀಮ್ ಇಂಡಿಯಾ ತೊರೆದ ಅಶ್ವಿನ್​ಗೆ ಅದ್ಧೂರಿ ಸ್ವಾಗತ
ಸಿದ್ದರಾಮಯ್ಯ ಸಹ ಬಂಗಾರಪ್ಪ ಹಾಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ: ಮಧು
ಸಿದ್ದರಾಮಯ್ಯ ಸಹ ಬಂಗಾರಪ್ಪ ಹಾಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ: ಮಧು
ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್
ರಕ್ತನಾಳಗಳು ಸಂಕುಚಿತಗೊಳ್ಳುವುದರಿಂದ ಹೃದಯಾಘಾತದ ಅಪಾಯ ಹೆಚ್ಚು: ಡಾಕ್ಟರ್
ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ
ಬಿಜೆಪಿ ಸಂಸದ ಪ್ರತಾಪ್​ಗೆ ಗಾಯ, ರಾಹುಲ್​ ಗಾಂಧಿಯೇ ತಳ್ಳಿದ್ದು ಎಂದ ಸಾರಂಗಿ
ಮಕ್ಕಳು ಮತ್ತು ವಯೋವೃದ್ಧರು ಮನೆಗಳಿಂದ ಹೊರಬಾರದ ಸ್ಥಿತಿ!
ಮಕ್ಕಳು ಮತ್ತು ವಯೋವೃದ್ಧರು ಮನೆಗಳಿಂದ ಹೊರಬಾರದ ಸ್ಥಿತಿ!
ಎಲ್ಲರಿಗೂ ಟೈಮ್ ಬರುತ್ತೆ: ಡ್ರೆಸ್ಸಿಂಗ್ ರೂಮ್​ನಲ್ಲಿ ಅಶ್ವಿನ್ ಭಾವುಕ ಮಾತು
ಎಲ್ಲರಿಗೂ ಟೈಮ್ ಬರುತ್ತೆ: ಡ್ರೆಸ್ಸಿಂಗ್ ರೂಮ್​ನಲ್ಲಿ ಅಶ್ವಿನ್ ಭಾವುಕ ಮಾತು
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
ಬೆಂಗಳೂರು: ರಸ್ತೆಗೆ ಅಡ್ಡಲಾಗಿ ಕಂಟೈನರ್ ನಿಲ್ಲಿಸಿದ ಚಾಲಕ, ಟ್ರಾಫಿಕ್ ಜಾಮ್
ಗೌತಮಿನ ಸ್ವಮ್ಮಿಂಗ್​ಪೂಲ್​ಗೆ ತಳ್ಳಿದ ಮೋಕ್ಷಿತಾ; ಹೆಚ್ಚಿತು ದ್ವೇಷ
ಗೌತಮಿನ ಸ್ವಮ್ಮಿಂಗ್​ಪೂಲ್​ಗೆ ತಳ್ಳಿದ ಮೋಕ್ಷಿತಾ; ಹೆಚ್ಚಿತು ದ್ವೇಷ
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!
ಮನೆಯಲ್ಲಿ ಕೆಲವು ವಸ್ತುಗಳನ್ನು ಭೂಮಿ ಮೇಲೆ ಇಡಬಾರದು: ಇದೆ ಅಧ್ಯಾತ್ಮ ಕಾರಣ!