AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ್ಕರ್​ರನ್ನು ನಿಂದಿಸಿದ ಪ್ರಕರಣ ರದ್ದು ಕೋರಿ ಸಿಟಿ ರವಿ ಅರ್ಜಿ: ಹೈಕೋರ್ಟ್​ನಲ್ಲಿ ವಾದ, ಪ್ರತಿವಾದ ಹೀಗಿತ್ತು

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಫೆಬ್ರವರಿ 13ಕ್ಕೆ ಮುಂದೂಡಿದೆ. ನ್ಯಾಯಾಲಯದಲ್ಲಿ ನಡೆದ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳು ವಿಚಾರಣೆ ಮುಂದೂಡಿಕೆ ಮಾಡಿದರು. ವಾದ, ಪ್ರತಿವಾದದ ವಿವರ ಇಲ್ಲಿದೆ.

ಹೆಬ್ಬಾಳ್ಕರ್​ರನ್ನು ನಿಂದಿಸಿದ ಪ್ರಕರಣ ರದ್ದು ಕೋರಿ ಸಿಟಿ ರವಿ ಅರ್ಜಿ: ಹೈಕೋರ್ಟ್​ನಲ್ಲಿ ವಾದ, ಪ್ರತಿವಾದ ಹೀಗಿತ್ತು
ಹೆಬ್ಬಾಳ್ಕರ್​ರನ್ನು ನಿಂದಿಸಿದ ಪ್ರಕರಣ ರದ್ದು ಕೋರಿ ಸಿಟಿ ರವಿ ಅರ್ಜಿ: ಹೈಕೋರ್ಟ್​ನಲ್ಲಿ ವಾದ, ಪ್ರತಿವಾದ
Ganapathi Sharma
|

Updated on: Jan 30, 2025 | 1:08 PM

Share

ಬೆಂಗಳೂರು, ಜನವರಿ 30: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಷಯಕ್ಕೆ ಸಂಬಂಧಿಸಿ ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಬಿಜೆಪಿ ಎಂಎಲ್​​ಸಿ ಸಿಟಿ ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್​​ನಲ್ಲಿ ಗುರುವಾರ ನಡೆಯಿತು. ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿತು. ವಾದ, ಪ್ರತಿವಾದ ಆಲಿಸಿದ ಕೋರ್ಟ್​, ವಿಚಾರಣೆಯನ್ನು ಫೆಬ್ರವರಿ 13ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್ ವಿಚಾರಣೆ ವೇಳೆ ವಿವಿಧ ವಿಚಾರಗಳ ಪ್ರಸ್ತಾಪವಾಯಿತು.

ಸಿಟಿ ರವಿ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ವಿಧಾನ ಪರಿಷತ್​​ನಲ್ಲಿ ಘಟನೆ ನಡೆದಿರುವುದರಿಂದ ರವಿ ಅವರಿಗೆ ಶಾಸಕಾಂಗ ವಿನಾಯಿತಿ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಈ ವೇಳೆ, ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾ. ನಾಗಪ್ರಸನ್ನ ಪ್ರಶ್ನಿಸಿದರು. ಇದೇ ವೇಳೆ, ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದರು.

ಸಿಟಿ ರವಿ ಪರ ವಕೀಲರ ವಾದವೇನು?

ಸದನದ ಸದಸ್ಯರಿಗೆ ನೀಡಿದ ರಕ್ಷಣೆ ಏನು? ಸಭಾಪತಿಗಳು ಪೀಠದಲ್ಲಿ ಇಲ್ಲದೆ ಇದ್ದ ಸಂದರ್ಭದಲ್ಲಿಯೂ ಅದು ಅನ್ವಯವಾಗುತ್ತದೆಯೇ? ಶಾಸಕಾಂಗವು ಈ ಪ್ರಕರಣದ ಬಗ್ಗೆ ಗಮನಹರಿಸಿ ತೀರ್ಪು ನೀಡಿದ ನಂತರ, ಸಿಐಡಿಯಂತಹ ಸಂಸ್ಥೆ ಇನ್ನೂ ತನಿಖೆ ನಡೆಸಬಹುದೇ ಎಂದು ಪ್ರಭುಲಿಂಗ ನಾವದಗಿ ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾ. ನಾಗಪ್ರಸನ್ನ, ಆದರೆ ಮಾತನಾಡಿದ ವಿಷಯಕ್ಕೂ ಶಾಸಕಾಂಗಕ್ಕೂ ಯಾವುದೇ ಸಂಬಂಧವಿಲ್ಲದಿದ್ದರೆ ಹೇಗೆ ಎಂದು ಪ್ರಶ್ನಿಸಿದರು.

ಆಗ ಸೀತಾ ಸೊರೇನ್ ಹಾಗೂ ಕೇಂದ್ರ ಸರ್ಕಾರದ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ್ದ ತೀರ್ಪನ್ನು ನಾವದಗಿ ಉಲ್ಲೇಖಿಸಿದರು. ಸಂವಿಧಾನದ ಆರ್ಟಿಕಲ್ 194(2) ರ ಅನ್ವಯ ಸದನದಲ್ಲಿದ್ದಾಗ ಸದಸ್ಯರು ಅಲ್ಲಿನ ಕಾನೂನು ವ್ಯಾಪ್ತಿಗೇ ಬರುತ್ತಾರೆ. ಪರಿಸ್ಥಿತಿಯ ಆಧಾರದ ಮೇಲೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದರು. ಆರ್ಟಿಕಲ್ 194(2) ಶಾಸಕನಿಗೆ ನಿರ್ಭೀತಿಯಿಂದ ಮಾತನಾಡಲು ಅವಕಾಶ ನೀಡುತ್ತದೆ. ಅವರಿಗೆ ಸದನದ ಒಳಗೆ ಸಂಪೂರ್ಣ ಹಕ್ಕಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಏನನ್ನೂ ಮಾತನಾಡಲು ಸಂಪೂರ್ಣ ಸ್ವಾತಂತ್ರ್ಯ ಇದಯೇ? ಈ ಪ್ರಕರಣದಲ್ಲಿ ಆಡಿದ್ದಾರೆ ಎನ್ನಲಾದ ಮಾತುಗಳನ್ನೂ ಆಡಬಹುದೇ ಎಂದು ಪ್ರಶ್ನಿಸಿದರು.

ಮಾತನಾಡಿದ ವಿಷಯವನ್ನು ಕಾನೂನಿನಡಿಯಲ್ಲಿ ದೂಷಣೆ ಎಂದು ಪರಿಗಣಿಸಿದರೂ, ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ಸದನ ಹೊಂದಿರುತ್ತದೆ ಮತ್ತು ಯಾವುದೇ ಬಾಹ್ಯ ಸಂಸ್ಥೆ ಅಲ್ಲ ಎಂದು ನಾವದಗಿ ವಾದ ಮಂಡಿಸಿದರು.

ಎಸ್​​ಪಿಪಿ ವಾದವೇನು?

ವಿಚಾರಣಾ ನ್ಯಾಯಾಲಯದ ಮುಂದೆ ಬಾಕಿ ಉಳಿದಿರುವ ಪ್ರಕ್ರಿಯೆಗಳ ಮೇಲೆ ವಿಧಿಸಲಾದ ತಡೆಯಾಜ್ಞೆಯನ್ನು ತೆರವು ಮಾಡಲು ಎಸ್​​ಪಿಪಿ ನ್ಯಾಯಾಲಯವನ್ನು ಮನವಿ ಮಾಡಿದರು. ಹೈಕೋರ್ಟ್ ಆದೇಶದ ಕಾರಣ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಕೈಗಳನ್ನು ಕಟ್ಟಿಹಾಕಿದಂತಾಗಿದೆ. ಸಿಟಿ ರವಿ ಅವರ ವಾಯ್ಸ್ ಸ್ಯಾಂಪಲ್ ಪಡೆಯುವುದಕ್ಕೆ ಸಂಬಂಧಿಸಿದ ಅರ್ಜಿ ಬಾಕಿ ಇದೆ ಎಂದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯನ್ನು ಫೆಬ್ರವರಿ 13ಕ್ಕೆ ನಿಗದಿಪಡಿಸಿದೆ. ಈ ಹಿಂದೆ ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ