ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಬಿಜೆಪಿ ಎಂಪಿ ಸುಧಾಕರ್ ನೇಮಕ

ಕೇಂದ್ರ ಸರ್ಕಾರ ಸ್ಥಾಯಿ ಸಮಿತಿಯನ್ನು ರಚನೆ ಮಾಡಿದೆ. ಬಿಜೆಪಿಯ ಭರ್ತೃಹರಿ ಮಹತಾಬ್ ಅವರಿಗೆ ಹಣಕಾಸು ಸಮಿತಿಯ ಮುಖ್ಯಸ್ಥ ಸ್ಥಾನ ನೀಡಿದ್ದರೆ, ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್​ ಅವರಿಗೆ ಸಂಸತ್​ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯ ಸ್ಥಾನ ನೀಡಲಾಗಿದೆ. ಆ ಮೂಲಕ ಕೇಂದ್ರದ ದೊಡ್ಡ ಜವಾಬ್ದಾರಿ ನೀಡಲಾಗಿದೆ.

ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಬಿಜೆಪಿ ಎಂಪಿ ಸುಧಾಕರ್ ನೇಮಕ
ಸಂಸತ್​ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಕೆ ಸುಧಾಕರ್ ನೇಮಕ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 27, 2024 | 7:08 PM

ಬೆಂಗಳೂರು, ಸೆಪ್ಟೆಂಬರ್​ 27: ಕೇಂದ್ರದ ಸ್ಥಾಯಿ ಸಮಿತಿಯನ್ನು ರಚನೆ ಮಾಡಲಾಗಿದ್ದು, ಇಂದು ಪಟ್ಟಿ ಬಿಡುಗಡೆ ಮಾಡಲಾಗಿದೆ. ಆ ಮೂಲಕ ಸಂಸತ್​ನ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ (K. Sudhakar) ನೇಮಕ ಮಾಡಲಾಗಿದೆ. ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡುವ ಮೂಲಕ ಡಾ.ಕೆ.ಸುಧಾಕರ್​ಗೆ ಅಭಿನಂದನೆ ತಿಳಿಸಿದೆ.

ಬಿಜೆಪಿಯ ಭರ್ತೃಹರಿ ಮಹತಾಬ್​ ಅವರಿಗೆ ಹಣಕಾಸು ಸ್ಥಾಯಿ ಸಮಿತಿಯ ಮುಖ್ಯಸ್ಥ ಸ್ಥಾನ ನೀಡಲಾಗಿದ್ದು,  ಶಶಿ ತರೂರ್​ ಅವರಿಗೆ ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಇನ್ನು ಈ ಬಗ್ಗೆ ಸ್ವತಃ ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದು, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆಯ ಮತ್ತು ಸಂತಸದ ವಿಷಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ಫಲಿತಾಂಶ; ಕುಮಾರಸ್ವಾಮಿ ನನ್ನನ್ನು ತಮ್ಮ ಪಕ್ಷದ ಅಭ್ಯರ್ಥಿಯಂತೆ ಭಾವಿಸಿ ಪ್ರಚಾರ ಮಾಡಿದರು: ಡಾ ಕೆ ಸುಧಾಕರ್

ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ನಮ್ಮ ಪಕ್ಷ ಹಿರಿಯ ನಾಯಕರಾದ ಅಮಿತ್​ ಶಾ ಹಾಗೂ ಬಿಎಲ್​ ಸಂತೋಷ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಡಾ.ಕೆ.ಸುಧಾಕರ್​ ಟ್ವೀಟ್

2025ರ ವೇಳೆಗೆ ಭಾರತವನ್ನ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಮಾಡುವ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಸಣ್ಣ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:07 pm, Fri, 27 September 24

ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಪುನೀತ್ ರಾಜ್​ಕುಮಾರ್​ಗಾಗಿ ದೇವಸ್ಥಾನ ಕಟ್ಟಿದ್ದೇಕೆ? ವಿವರಿಸಿದ ಅಭಿಮಾನಿ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ