AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮತ್ತೊಂದು ಶುಭ ಸುದ್ದಿ ನೀಡಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಲೋಕಾರ್ಪಣೆ ದಿನಾಂಕವೂ ಇದೀಗ ಅಧಿಕೃತಗೊಂಡಿದೆ. ಪ್ರಧಾನಿ ಮೋದಿ ಸೆಪ್ಟೆಂಬರ್ 15ರಂದು ರೈಲಿಗೆ ಚಾಲನೆ ನೀಡಲಿದ್ದು, ಈ ಕುರಿತು ಸಂಸದ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಸೆಪ್ಟೆಂಬರ್ 15ರಂದು ಪ್ರಧಾನಿ ಮೋದಿ ಚಾಲನೆ
ಪುಣೆ ಬೆಳಗಾವಿ ಹುಬ್ಬಳ್ಳಿ ವಂದೇ ಭಾರತ್ ರೈಲು ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್
ಗಣಪತಿ ಶರ್ಮಾ
|

Updated on: Sep 10, 2024 | 2:45 PM

Share

ಬೆಂಗಳೂರು, ಸೆಪ್ಟೆಂಬರ್ 10: ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಕನಸು ಕೊನೆಗೂ ಸಾಕಾರಗೊಳ್ಳುವ ದಿನ ಸಮೀಪಿಸಿದೆ. ಪುಣೆ ಬೆಳಗಾವಿ ಹುಬ್ಬಳ್ಳಿ ನಡುವಣ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಸೆಪ್ಟೆಂಬರ್ 15 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ತಿಳಿಸಿದರು. ಮೋದಿ ಅವರು ವರ್ಚುವಲ್ ಆಗಿ ರೈಲಿಗೆ ಚಾಲನೆ ನೀಡಲಿದ್ದಾರೆ. ಅದೇ ವೇಳೆ, ಬೆಳಗಾವಿಯಲ್ಲಿ ಕಾರ್ಯಕ್ರಮದಲ್ಲಿ ಹಾಜರಾಗಲಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ.

ವಂದೇ ಭಾರತ್ ಎಕ್ಸ್​​ಪ್ರೆಸ್ ವಿಚಾರವಾಗಿ ಎರಡು ತಿಂಗಳ ಹಿಂದೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರೊಂದಿಗೆ ಸಭೆ ನಡೆಸಿರುವುದಾಗಿ ಶೆಟ್ಟರ್ ತಿಳಿಸಿದ್ದಾರೆ.

ಬೆಂಗಳೂರು ಧಾರವಾಡ ವಂದೇ ಭಾರತ್ ಅನ್ನು ಬೆಳಗಾವಿಯವರೆಗೆ ವಿಸ್ತರಿಸಲು ಮನವಿ ಮಾಡಿದ್ದೇನೆ. ಇದೀಗ ಪುಣೆ-ಹುಬ್ಬಳ್ಳಿ ಬೇಡಿಕೆ ಈಡೇರಿದ್ದು, ಶೀಘ್ರದಲ್ಲೇ ಬೆಂಗಳೂರು-ಧಾರವಾಡ ವಂದೇ ಭಾರತ್ ಬೆಳಗಾವಿವರೆಗೆ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗದ ಪ್ರಕ್ರಿಯೆ ಒಂದೆರಡು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕಾಮಗಾರಿ ಆರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಎಂ ಸ್ಥಾನಕ್ಕೆ ಪೈಪೋಟಿ ಅಂದಿನಿಂದಲೂ ಇದೆ: ಶೆಟ್ಟರ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್ ಹಿರಿಯ ನಾಯಕರ ನಡುವಿನ ಜಟಾಪಟಿ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್, ಅಧಿಕಾರ ಸ್ವೀಕರಿಸಿದ ಆರಂಭದಿಂದಲೂ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಚ್ಚಾಟ ನಡೆದಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳ ಶುರುವಾಗಿದ್ದು, ಶೀಘ್ರದಲ್ಲೇ ಅದು ಸ್ಫೋಟಗೊಳ್ಳಲಿದೆ. ಈ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕಾಂಕ್ಷಿಯಾಗಿದ್ದರು, ಆದರೆ ಈಗ ಇನ್ನೂ ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಸ್ಥಿರವಾಗಿದೆ ಮತ್ತು ಶೀಘ್ರದಲ್ಲೇ ಪತನವಾಗಬಹುದು. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಮುಡಾ ಹಗರಣಗಳು ಮುನ್ನೆಲೆಗೆ ಬಂದಿವೆ. ಇಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಮತ್ತು ಆಡಳಿತದ ಮೇಲೆ ನಿಯಂತ್ರಣವಿಲ್ಲ ಎಂದು ಶೆಟ್ಟರ್ ಟೀಕಿಸಿದರು.

‘ಎಸ್‌ಪಿಎಂ ರಸ್ತೆಯಿಂದ ಹಳೆ ಪಿಬಿ ರಸ್ತೆವರೆಗಿನ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಡಿರುವ ಲೋಪದಿಂದ ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಅವ್ಯವಸ್ಥೆಗೆ ಸಿಲುಕಿದ್ದು, ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ತಡೆಗೆ 20 ಕೋಟಿ ರೂ. ಶೆಟ್ಟರ್ ಹೇಳಿದರು.

ಇದನ್ನೂ ಓದಿ: ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಪೌರಕಾರ್ಮಿಕರಿಗೆ ಭೇಟಿ ನೀಡಿ ಜನಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿತ್ತು. ಸರಕಾರ ಪೌರಕಾರ್ಮಿಕರಿಗೆ ಆಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಟಾರ್ಚ್ ಬಾಯ್ ಆಗಿದ್ದ ‘ಪ್ರೇಮದ ಊರಲಿ’ ನಿರ್ದೇಶಕ ಮನೋಜ್ ಕುಮಾರ್
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಹಸಿ ಕಸದ ಜೊತೆ ಪ್ಲಾಸ್ಟಿಕ್ ಹಾಕಬೇಡಿ ಎಂದಿದ್ದಕ್ಕೆ ನಿವೃತ್ತ ಅಧಿಕಾರಿಯ ದರ್ಪ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಬಸ್ ತಂಗುದಾಣ ವಿರೂಪಗೊಳಿಸಿ ಬೇಕರಿ ನಿರ್ಮಾಣ
ಸ್ಯಾಂಡಿ ಸ್ವಾರ್ಥಿ; ನೇರವಾಗಿ ಹೇಳಿದ ಕಿಚ್ಚ ಸುದೀಪ್
ಸ್ಯಾಂಡಿ ಸ್ವಾರ್ಥಿ; ನೇರವಾಗಿ ಹೇಳಿದ ಕಿಚ್ಚ ಸುದೀಪ್
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು
‘ಪ್ರೇಮದ ಊರಲಿ’ ಸಿನಿಮಾ ಕಲೆಕ್ಷನ್ ಬಗ್ಗೆ ನಿರ್ದೇಶಕ ಮನೋಜ್ ಮಾತು