ಸಂಸದ ತೇಜಸ್ವಿ ಸೂರ್ಯ ಅಧಿಕೃತ ಫೋನ್ ಸಂಖ್ಯೆ ದುರ್ಬಳಕೆ: ಎಫ್​​ಐಆರ್​ ದಾಖಲು

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಅಧಿಕೃತ ಫೋನ್ ಸಂಖ್ಯೆಯನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಅಪರಿಚಿತ ವ್ಯಕ್ತಿಯ ವಿರುದ್ಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಅಧಿಕೃತ ಫೋನ್ ಸಂಖ್ಯೆ ದುರ್ಬಳಕೆ: ಎಫ್​​ಐಆರ್​ ದಾಖಲು
ಸಂಸದ ತೇಜಸ್ವಿ ಸೂರ್ಯ

Updated on: Jul 08, 2023 | 7:40 AM

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Suraya) ಅವರ ಅಧಿಕೃತ ಫೋನ್ ಸಂಖ್ಯೆಯನ್ನು ದುರುಪಯೋಗಪಡಿಸಿಕೊಂಡ ಆರೋಪದಡಿ ಅಪರಿಚಿತ ವ್ಯಕ್ತಿಯ ವಿರುದ್ಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸರು (Cyber Crime Police) ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಹಿಂದೂ ವರದಿ ಮಾಡಿದೆ. ಆರೋಪಿ ಜುಲೈ 1 ರಂದು ತೇಜಸ್ವಿ ಸೂರ್ಯ ಅವರ ಅಧಿಕೃತ ಫೋನ್ ಸಂಖ್ಯೆಯಿಂದ ಗುಜರಾತ್ (Gujarat) ಘಟಕದ ಬಿಜೆಪಿ (BJP) ಯುವಮೋರ್ಚಾ ಅಧ್ಯಕ್ಷ ಪ್ರಶಾಂತ್ ಕೋರಟ್ ಅವರಿಗೆ ಕರೆ ಮಾಡಿ ಹಣ ಮತ್ತು ವಜ್ರಕ್ಕೆ ಬೇಡಿಕೆಯಿಟ್ಟಿದ್ದರು.

ಬಳಿಕ ಪ್ರಶಾಂತ್ ಕೋರಟ್ ಅವರು ಖಚಿತತೆಗಾಗಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರಿಗೆ ಕರೆ ಮಾಡಿದಾಗ ಪ್ರಕರಣ ಬಯಲಾಗಿದೆ. ಈ ಸಂಬಂಧ ತೇಜಸ್ವಿ ಸೂರ್ಯ ಪಿಎ ಜುಲೈ 4 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ದೂರು ದಾಖಲಾಗಿದೆ. ಕಾಲ್ ರೆಕಾರ್ಡ್ ವಿವರಗಳ ಮೂಲಕ ಆರೋಪಿಗಳ ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ