ನಮ್ಮ ಮೆಟ್ರೋ 3ನೇ ಹಂತಕ್ಕೆ ತ್ವರಿತ ಅನುಮೋದನೆ, ಬಿಎಂಆರ್​ಸಿಎಲ್​ಗೆ ಪೂರ್ಣಾವಧಿ ಎಂಡಿ ನೇಮಕಕ್ಕೆ ಕೇಂದ್ರಕ್ಕೆ ತೇಜಸ್ವಿ ಸೂರ್ಯ ಮನವಿ

Tejasvi Surya meets Uniom Minister Hardeep Singh Puri; ಬೆಂಗಳೂರು ದಕ್ಷಿಣ ಕ್ಷೇತ್ರದ ನಿಟ್ಟಿನಲ್ಲಿ ಮೆಟ್ರೋ ಯೋಜನೆಯ ಹಂತ 3 ಬಹಳ ಮಹತ್ವದ್ದಾಗಿದೆ. ಇದು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮತ್ತು ಹೆಚ್ಚಿನ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ ಎಂದು ಸೂರ್ಯ ತಿಳಿಸಿದ್ದಾರೆ.

ನಮ್ಮ ಮೆಟ್ರೋ 3ನೇ ಹಂತಕ್ಕೆ ತ್ವರಿತ ಅನುಮೋದನೆ, ಬಿಎಂಆರ್​ಸಿಎಲ್​ಗೆ ಪೂರ್ಣಾವಧಿ ಎಂಡಿ ನೇಮಕಕ್ಕೆ ಕೇಂದ್ರಕ್ಕೆ ತೇಜಸ್ವಿ ಸೂರ್ಯ ಮನವಿ
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ & ತೇಜಸ್ವಿ ಸೂರ್ಯ Image Credit source: Twitter
Follow us
Ganapathi Sharma
|

Updated on:Aug 18, 2023 | 8:20 PM

ನವದೆಹಲಿ, ಆಗಸ್ಟ್ 18: ಬೆಂಗಳೂರು ಮೆಟ್ರೋ ರೈಲು (Namma Metro) ಯೋಜನೆಯ 3ನೇ ಹಂತಕ್ಕೆ ಶೀಘ್ರವೇ ಅನುಮೋದನೆ ನೀಡುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ಶುಕ್ರವಾರ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಮಾಡಿದ್ದಾರೆ. ಸುಸಜ್ಜಿತವಾದ ಮೆಟ್ರೋ ಸಂಪರ್ಕವು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಬೊಟ್ಟುಮಾಡಿದ ಮಾಡಿದ ಸೂರ್ಯ, ಯೋಜನೆಯೆ ಆರಂಭಕ್ಕೆ ಅನುಮೋದನೆಗಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರವು 3 ನೇ ಹಂತದ ಡಿಪಿಆರ್ ಅನ್ನು ಸಿದ್ಧಪಡಿಸಿತ್ತು. ಅದಕ್ಕೀಗ ಕೇಂದ್ರ ಸರ್ಕಾರದ ಅನುಮೋದನೆ ದೊರೆಯಬೇಕಿದೆ.

ಮೆಟ್ರೋದ 3 ನೇ ಹಂತವನ್ನು ಜೆಪಿ ನಗರದ ವೇಗಾ ಸಿಟಿ ಜಂಕ್ಷನ್ ಮತ್ತು ಮಾಗಡಿ ರಸ್ತೆಯ ಕಡಬಗೆರೆವರೆಗೆ ಯೋಜಿಸಲಾಗಿದೆ. ಈ ಮಾರ್ಗವು 44.65 ಕಿಮೀ ಉದ್ದವಿದ್ದು, 2 ಕಾರಿಡಾರ್‌ಗಳಾಗಿ ವಿಭಜಿಸಲಾಗಿದೆ. ಜೆಪಿ ನಗರ 4 ನೇ ಹಂತದಿಂದ ಕೆಂಪಾಪುರ (ORR ಪಶ್ಚಿಮ) ವರೆಗೆ 22 ನಿಲ್ದಾಣಗಳನ್ನೊಳಗೊಂಡಂತೆ 32.15 ಕಿಮೀ ಮತ್ತು ಹೊಸಹಳ್ಳಿ ಮತ್ತು ಕಡಬಗೆರೆ (ಮಾಗಡಿ ರಸ್ತೆ) ನಡುವೆ 9 ನಿಲ್ದಾಣಗಳನ್ನೊಳಗೊಂಡಂತೆ (ಒಟ್ಟು 31 ನಿಲ್ದಾಣಗಳು) 12.50 ಕಿಮೀ ಇರಲಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ನಿಟ್ಟಿನಲ್ಲಿ ಮೆಟ್ರೋ ಯೋಜನೆಯ ಹಂತ 3 ಬಹಳ ಮಹತ್ವದ್ದಾಗಿದೆ. ಇದು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಮತ್ತು ಹೆಚ್ಚಿನ ಪ್ರಯಾಣಿಕರಿಗೆ ಸೇವೆ ಸಲ್ಲಿಸುತ್ತದೆ ಎಂದು ಸೂರ್ಯ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋದ 3 ನೇ ಹಂತದ ಅನುಮೋದನೆಯನ್ನು ತ್ವರಿತಗೊಳಿಸುವಲ್ಲಿ ಸಚಿವರ ಮಧ್ಯಸ್ಥಿಕೆಯಿಂದ ಸುಮಾರು 1.10 ಕೋಟಿ ಬೆಂಗಳೂರಿಗರಿಗೆ ಪ್ರಯೋಜನವಾಗಲಿದೆ ಎಂದು ಅವರು ಹೇಳಿದ್ದಾರೆ.

ಬಿಎಂಆರ್‌ಸಿಎಲ್‌ಗೆ ಪೂರ್ಣಾವಧಿ ಎಂಡಿ ಬೇಕು; ಸೂರ್ಯ

ಬೆಂಗಳೂರು ಮೆಟ್ರೋ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬಗಳ ಬಗ್ಗೆ ಸೂರ್ಯ ಅವರು ಕೇಂದ್ರ ಸಚಿವರ ಗಮನ ಸೆಳೆದರು. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (BMRCL) ಪೂರ್ಣಾವಧಿ ಎಂಡಿ ಅಗತ್ಯದ ಕುರಿತು ಪ್ರಸ್ತಾಪಿಸಿದ ಸೂರ್ಯ, ಬಿಎಂಆರ್‌ಸಿಎಲ್‌ನಲ್ಲಿನ ಆಡಳಿತಾತ್ಮಕ ಕಾಳಜಿಗಳು ಮತ್ತು ದಕ್ಷತೆಯನ್ನು ಸುಧಾರಿಸುವ, ಯೆಲ್ಲೋ ಲೈನ್​ನಲ್ಲಿನ ಅಡೆತಡೆಗಳನ್ನು ಪರಿಹರಿಸುವ ಅಗತ್ಯವನ್ನು ಸಹ ಚರ್ಚಿಸಲಾಗಿದೆ. ಸಚಿವರು ಈ ನಿಟ್ಟಿನಲ್ಲಿ ಸಕಾರಾತ್ಮಕ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಮೆಟ್ರೋದ ಹಂತ 2ಎ, ಹಂತ 2ಬಿ ಮತ್ತು ಯೆಲ್ಲೋ ಲೈನ್​​ನ ಪ್ರಗತಿಯನ್ನು ಪರಿಶೀಲಿಸಲು ಪುರಿ ಶೀಘ್ರದಲ್ಲೇ ಬೆಂಗಳೂರಿಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸೂರ್ಯ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Fri, 18 August 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ