AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಟನಲ್ ರಸ್ತೆ ಜಟಾಪಟಿ: ಡಿಕೆಶಿಗೆ ಪ್ರಶ್ನೆಗಳ ಸುರಿಮಳೆ, ಉತ್ತರಿಸುವಂತೆ ತೇಜಸ್ವಿ ಸೂರ್ಯ ಸವಾಲ್

ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಸರ್ಕಾರ ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ ಜಂಕ್ಷನ್‌ವರೆಗೆ ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಆದ್ರೆ, ಇದಕ್ಕೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ವಿರೋಧಪಡಿಸಿದ್ದು, ಟನಲ್ ರಸ್ತೆಯಿಂದಾಗುವ ಹಾನಿ ಬಗ್ಗೆ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಟನಲ್​​ ರಸ್ತೆಯಿಂದ ಟ್ರಾಫಿಕ್ ಕಂಟ್ರೋಲ್ ಗೆ ಬರುವುದಿಲ್ಲ ಎಂದು ಕೆಲ ಟೆಕ್ನಿಕಲ್ ಮಾಹಿತಿಯನ್ನು ಡಿಕೆಶಿ ಮುಂದಿಟ್ಟಿದ್ದಾರೆ. ಆದರೂ ಇದಕ್ಕೆ ಜಗ್ಗದೇ ಟನಲ್ ನಿರ್ಮಾಣದ ಪಣ ತೊಟ್ಟಿರುವ ಡಿಕೆಶಿಗೆ ತೇಜಸ್ವಿ ಸೂರ್ಯ ಕೆಲ ಪ್ರಶ್ನೆಗಳನ್ನು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಟನಲ್ ರಸ್ತೆ ಜಟಾಪಟಿ: ಡಿಕೆಶಿಗೆ ಪ್ರಶ್ನೆಗಳ ಸುರಿಮಳೆ, ಉತ್ತರಿಸುವಂತೆ ತೇಜಸ್ವಿ ಸೂರ್ಯ ಸವಾಲ್
Tejaswi Surya
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Nov 04, 2025 | 6:22 PM

Share

ಬೆಂಗಳೂರು, (ನವೆಂಬರ್ 04): ಬೆಂಗಳೂರಿನ ಟನಲ್ ರೋಡ್ ವಿಚಾರ ಈಗ ಸಂಸದ ತೇಜಸ್ವಿ ಸೂರ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಮಾತು ಮೇಲಾಟಕ್ಕೆ ತಿರುಗಿದೆ. ತೇಜಸ್ವಿ ಸೂರ್ಯ ಕೊಟ್ಟಿದ್ದ ಪ್ರಸ್ತಾವನೆಯನ್ನು ಡಿಕೆ ಶಿವಕುಮಾರ್ ಒಪ್ಪಿಲ್ಲ. ಹೀಗಾಗಿ ಇದೇ ವಿಚಾರ ಮತ್ತೆ ಇಬ್ಬರ ನಡುವೆ ಸಮರ ಸಾರುವಂತೆ ಮಾಡಿದ್ದು, ಸುರಂಗ ಮಾರ್ಗದ ಸುತ್ತಲಿನ ಚರ್ಚೆಗಳು ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಬೆಂಗಳೂರಿನಲ್ಲಿ ಟನಲ್ ರಸ್ತೆ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ಅವರು ಕೆಲ ಟೆಕ್ನಿಕಲ್ ಪ್ರಶ್ನೆಗಳ ಹಾಕಿದ್ದು, ಇವುಗಳಿಗೆ ಉತ್ತರ ಕೊಡಿ ಎಂದು ಡಿಕೆ ಶಿವಕುಮಾರ್​​ಗೆ ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಟೆಕ್ನಿಕಲ್ ವಿಚಾರಗಳ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಲ್ಲ . ವೈಯಕ್ತಿಕನಿಂದನೆ ಮಾಡುವ ಕೆಲಸ ಆಗುತ್ತಿದೆ. ಮದುವೆ ಆಗುತ್ತೇನೆಂದು ಕಾರು ಕೇಳಿಲ್ಲ. ಹಳೆಯ ಕಾರು ಒಂದು ಲಕ್ಷ ಕಿಲೋಮೀಟರ್ ಸಂಚಾರ ಮಾಡಿದೆ. ಆ ಕಾರಣಕ್ಕಾಗಿ ನಾನು ಹೊಸ ಕಾರು ಕೇಳಿದ್ದೆ. ಕಾರ್ ಗೆ ಎಲಿಜಿಬಿಟಿ ಮದುವೆ ವಿಚಾರ ಅಲ್ಲ. ಸಾಗರ್ ಖಂಡ್ರೆಯಂತ ಬ್ಯಾಚುಲರ್ ಗೆ ಕೂಡ ಕಾರು ಕೊಟ್ಟಿದ್ದಾರೆ. ಕಾನೂನು ಪ್ರಕಾರ ಕೊಡಲು ಅವಕಾಶ ಇದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ:  ಟನಲ್​ ರಸ್ತೆ ವಿವಾದ: ಲಾಲ್​ಬಾಗ್​ನಲ್ಲಿರುವ ಬಂಡೆ ಕೊರೆಯುವ ನಿರ್ಧಾರದ ಬಗ್ಗೆ ಜನ ಏನಂತಾರೆ?

ಟನಲ್ ರಸ್ತೆಯಲ್ಲಿ ದ್ವಿಚಕ್ರ-ತ್ರಿಚಕ್ರ ವಾಹನಗಳಿಗಿಲ್ಲ ಅವಕಾಶ

ಟನಲ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ನನ್ನ ಮೇಲೆ ವೈಯಕ್ತಿಕವಾಗಿ ಟೀಕೆ ಮಾಡ್ತಿದ್ದಾರೆ. ಅದು ಬಿಟ್ಟರೆ ನನ್ನ ಪ್ರೆಶ್ನೆಗಳಿಗೆ ಉತ್ತರ ಕೊಡುತ್ತಿಲ್ಲ. ಟನಲ್ ರಸ್ತೆಯಲ್ಲಿ ಎರಡು ಹಾಗೂ ಮೂರು ಚಕ್ರದ ವಾಹನಗಳಿಗೆ ಅವಕಾಶ ಇಲ್ಲ. ಇದು ಯಾವ ರೀತಿ ನ್ಯಾಯ, ಅವರು ಟ್ಯಾಕ್ಸ್ ಕಟ್ಟಲ್ವ. ಶ್ರೀಮಂತರಿಗೆ ಮಾತ್ರ ಟನಲ್ ರೋಡ್ ನಾ ಎಂದು ಪ್ರಶ್ನಿಸಿದರು.

ಯಲ್ಲೋ ಲೈನ್ ನಲ್ಲಿ 37% ಟ್ರಾಫಿಕ್ ಕಡಿಮೆ ಆಗಿದೆ ಎಂದು ನೀವೇ ಹೇಳುತ್ತೀರಾ. ಹೀಗಿದ್ರು ಟನಲ್ ಗೆ ಯಾಕೆ ಬೆಂಬಲ ಕೊಡುತ್ತಿದ್ದೀರಾ? ಡಿಪಿಆರ್ ಪ್ರಕಾರ ಮುಂದೆ ಈಗಿನ ಖರ್ಚಿಗಿಂತ 25% ಹೆಚ್ಚಳ ಆಗಲಿದೆ. ಕೇಂದ್ರ ಸರ್ಕಾರ ಅಟಲ್ ಟನಲ್ ಗೆ 9 ಕಿಮೀ 3200 ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದಾರೆ. ಇಲ್ಲಿ ಯಾವ ಪರ್ವತ ಇದೆ. ಕಿ.ಮೀ ಗೆ 1050 ಕೋಟಿ ರೂ, ಖರ್ಚು ಮಾಡುತ್ತಿದ್ದೀರಿ. ಇಲ್ಲಿ ಯಾರ ವೈಯಕ್ತಿಕ ಟೀಕೆ ಇಲ್ಲ. ಇಲ್ಲಿ ಮದುವೆ, ಎಳಸು ಚರ್ಚೆ ಬದಲು ಈ ಪ್ರಶ್ನೆಗಳಿಗೆ ಉತ್ತರ ಕೊಡಿ. ಆದಷ್ಟು ಬೇಗ ಸಮಿತಿ ರಚನೆ ಮಾಡಲಿ ನಾನು ಅದಕ್ಕೆ ಕಾಯಿತ್ತಿದ್ದೇನೆ ಎಂದರು.

ದಾಖಲೆ ಬಿಡುಗಡೆ ಮಾಡಿದ ತೇಜಸ್ವಿ ಸೂರ್ಯ

ಇನ್ನು ಇದೇ ವೇಳೆ ತೇಜಸ್ವಿ ಸುರ್ಯ ಅವರು ಹೊಸ ಕಾರಿಗಾಗಿ ಅರ್ಜಿ ಹಾಕಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಮದುವೆಯಾಗುವ ವೇಳೆಯಲ್ಲಿ ಹೊಸ ಕಾರು ಬೇಕೆಂದು ಅರ್ಜಿ ಹಾಕಿದ್ದು, ಅದರ ದಾಖಲೆ ಬಿಡುಗಡೆ ಮಾಡಿ ಎಂದರೆ ಬಿಡುಗಡೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಂಸದ ತೇಜಸ್ವಿ ಸೂರ್ಯ, ಕಾರು ಕೇಳಿರುವ ಬಗ್ಗೆ ದಾಖಲೆ ಬಿಡುಗಡೆ ಮಾಡಿ ಡಿಕೆ ಶಿವಕುಮಾರ್​​​​ ಗೆ ತಿರುಗೇಟು ನೀಡಿದ್ದಾರೆ.

Published On - 6:16 pm, Tue, 4 November 25

Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!