ಅಂಗನವಾಡಿ ಶಿಕ್ಷಕರ ಹುದ್ದೆಗೆ ಉರ್ದು ಕಡ್ಡಾಯ: ಕರ್ನಾಟಕ ಸರ್ಕಾರದ ಆದೇಶಕ್ಕೆ ಭಾರೀ ವಿರೋಧ

ಕರ್ನಾಟಕ ಸರ್ಕಾರ ಹೊರಡಿಸಿದೆ ಎನ್ನಲಾದ ಆದೇಶದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ ಉರ್ದು ಭಾಷೆಯನ್ನು ಕಲಿತಿರಬೇಕು ಎಂಬ ನಿಯಮ ಮಾಡಲಾಗಿದೆ. ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ.

ಅಂಗನವಾಡಿ ಶಿಕ್ಷಕರ ಹುದ್ದೆಗೆ ಉರ್ದು ಕಡ್ಡಾಯ: ಕರ್ನಾಟಕ ಸರ್ಕಾರದ ಆದೇಶಕ್ಕೆ ಭಾರೀ ವಿರೋಧ
Follow us
ರಮೇಶ್ ಬಿ. ಜವಳಗೇರಾ
|

Updated on: Sep 24, 2024 | 5:37 PM

ಬೆಂಗಳೂರು, (ಸೆಪ್ಟೆಂಬರ್ 24): ಕರ್ನಾಟಕ ಸರ್ಕಾರವು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳ ಶಿಕ್ಷಕರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಸರ್ಕಾರದ ನಡೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉರ್ದು ಭಾಷೆ ಕಡ್ಡಾಯಗೊಳಿಸಿರುವ ನಿರ್ಧಾರದ ಬಗ್ಗೆ ವಿರೋಧ ಪಕ್ಷ ಬಿಜೆಪಿ ಟೀಕಿಸಿದ್ದು, ಇದು ಕಾಂಗ್ರೆಸ್ ಸರ್ಕಾರದ “ಮುಸ್ಲಿಂ ತುಷ್ಟೀಕರಣ” ಎಂದು ಆರೋಪಿಸಿದೆ. ಕನ್ನಡ ಸಂಘಟನೆಗಳು ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿವೆ.

ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಇತ್ತೀಚಿನ ಅಧಿಸೂಚನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಆ ಪ್ರದೇಶದಲ್ಲಿ ಮುಸ್ಲಿಂ ಸಮುದಾಯ ಹೆಚ್ಚಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯವಾಗಿ ತಿಳಿದಿರಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ. ಇದು ಬಾರೀ ವಿವಾದಕ್ಕೀಡಾಗಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಕನ್ನಡಿಗರ ಮೇಲೆ ಉದ್ದೇಶಪೂರ್ವಕ ಉರ್ದು ಹೇರಿಕೆಯ ರಾಜ್ಯ ಸರ್ಕಾರದ ಕ್ರಮವು, ಟಿಪ್ಪು ಮತ್ತು ಹೈದರಾಲಿ ಮಾದರಿಯ ಕನ್ನಡ ದಮನನೀತಿಯ ಮುಂದುವರಿದ ಭಾಗವಾಗಿದೆ. ಟಿಪ್ಪುವನ್ನು ಪರಮ ಆದರ್ಶವನ್ನಾಗಿ ಅಂಗೀಕರಿಸಿರುವ, ಕಳೆದ 1 ವರ್ಷದಿಂದ ಒಂದು ಸಮುದಾಯದ ಅತಿಯಾದ ತುಷ್ಟೀಕರಣ ನೀತಿಯನ್ನು ಆಡಳಿತದ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಗಳು ಕನ್ನಡದ ಅಸ್ಮಿತೆಗೆ, ಕನ್ನಡಿಗರಿಗೆ ಮಾಡುತ್ತಿರುವ ಅತೀ ದೊಡ್ಡ ಅಪಮಾನ ಎಂದು ಕಿಡಿಕಾರಿದ್ದಾರೆ.

ಅಂಗನವಾಡಿ ಹುದ್ದೆಗಳಿಗೆ ಕನ್ನಡದ ಬದಲು, ಉರ್ದು ಹೇರಿಕೆಯನ್ನು ಕಡ್ಡಾಯಗೊಳಿಸುವ ಮೂಲಕ ಕನ್ನಡಕ್ಕೆ ಅಪಮಾನ ಮಾಡುವ ಕಾರ್ಯಕ್ಕೆ ‘ಕೈ’ ಹಾಕಿರುವುದು ಅಸಹ್ಯದ ಪರಮಾವಧಿ. ರಾಜಕೀಯ, ತುಷ್ಟೀಕರಣದ ಕಾರಣಗಳಿಗಾಗಿ ಕನ್ನಡದ ಸಾರ್ವಭೌಮತ್ವಕ್ಕೆ, ಅಸ್ಮಿತೆಗೆ ಉದ್ದೇಶಪೂರ್ವಕ ಅಪಮಾನವನ್ನು ಕನ್ನಡಿಗರು ಸಹಿಸಲು ಸಾಧ್ಯವಿಲ್ಲ. ಇಂತಹ ಪ್ರಮಾದಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡದೇ, ಸಂಬಂಧಪಟ್ಟವರನ್ನು ಕೂಡಲೇ ಅಮಾನತ್ತುಗೊಳಿಸಿ, ಕನ್ನಡದ ಅಸ್ಮಿತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಆಗ್ರಹಿಸಿದ್ದಾರೆ.

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್