JP Nadda Karnataka Visit: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಾಳೆ ಶನಿವಾರ ಕರ್ನಾಟಕಕ್ಕೆ ಆಗಮನ

JP Nadda Karnataka Visit: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಾಳೆ ಶನಿವಾರ ಕರ್ನಾಟಕಕ್ಕೆ ಆಗಮನ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಾಳೆ ಶನಿವಾರ ಕರ್ನಾಟಕಕ್ಕೆ ಆಗಮನ

ಜೆ.ಪಿ. ನಡ್ಡಾ ಅವರು ಸಂಜೆ 4 ಗಂಟೆಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.10 ರಿಂದ 5.20 ರವರೆಗೆ ಮುರುಘಾ ಮಠದಲ್ಲಿ ಆಯೋಜಿಸಿರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.20 ಕ್ಕೆ ಚಿತ್ರದುರ್ಗದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳೆಸಲಿದ್ದಾರೆ.

TV9kannada Web Team

| Edited By: Apurva Kumar Balegere

Jun 17, 2022 | 6:09 PM

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (BJP National President JP Nadda) ಅವರು ನಾಳೆ ಶನಿವಾರ ಜೂನ್ 18 ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಶನಿವಾರ ಬೆಳಗ್ಗೆ 11.50 ಕ್ಕೆ ಕೆಂಪೇಗೌಡ ಏರ್ ಪೋರ್ಟ್ ಗೆ ನಡ್ಡಾ ಆಗಮಿಸಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 12.30ಕ್ಕೆ ಯಲಹಂಕದ ಖಾಸಗಿ‌ ರೆಸಾರ್ಟ್ ಗೆ ನಡ್ಡಾ ಆಗಮಿಸಲಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ಬಿಜೆಪಿ ಓಬಿಸಿ ಮೋರ್ಛಾ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಖಾಸಗಿ ರೆಸಾರ್ಟ್ ನಿಂದ ಜಕ್ಕೂರು ಏರೋಡ್ರಂಗೆ ತೆರಳಲಿರುವ ನಡ್ಡಾ, ಮಧ್ಯಾಹ್ನ 2.45 ಕ್ಕೆ ಜಕ್ಕೂರು ಏರೋಡ್ರಂ ನಿಂದ ಚಿತ್ರದುರ್ಗಕ್ಕೆ (Chitradurga) ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಲಿದ್ದಾರೆ.

ಜೆ.ಪಿ. ನಡ್ಡಾ ಅವರು ಸಂಜೆ 4 ಗಂಟೆಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 4.10 ರಿಂದ 5.20 ರವರೆಗೆ ಮುರುಘಾ ಮಠದಲ್ಲಿ ಆಯೋಜಿಸಿರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.20 ಕ್ಕೆ ಚಿತ್ರದುರ್ಗದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳೆಸಲಿದ್ದಾರೆ. ಸಂಜೆ 6.30 ಕ್ಕೆ ಕೆಂಪೇಗೌಡ ಏರ್ ಪೋರ್ಟ್ ಗೆ (ಕೆಐಎಎಲ್ ) ವಾಪಸಾಗಿ, ಅಲ್ಲಿಂದ ರಾತ್ರಿ 7.40 ಕ್ಕೆ ದೆಹಲಿಗೆ ತೆರಳಲಿದ್ದಾರೆ.

Karnataka 2nd PUC Result 2022 Live: ನಾಳೆ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (former CM B. S. Yediyurappa ) ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಾರಿಗೆ ಸಚಿವ ಬಿ ಶ್ರೀರಾಮುಲು (Transport Minister B. Sreeramulu) ಅವರು ಚಿತ್ರದುರ್ಗದಲ್ಲಿ ನಡೆಯುವ ಕಾರ್ಯಕ್ರಮಗಳ ಜವಾಬ್ದಾರಿ ಹೊತ್ತಿದ್ದಾರೆ.

ನಾಳೆ ಮುಖ್ಯಮಂತ್ರಿ ಬೊಮ್ಮಾಯಿ ಚಿತ್ರದುರ್ಗ ಜಿಲ್ಲಾ ಪ್ರವಾಸ: ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraja Bommai) ಅವರೂ ನಾಳೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಮಾಡಲಿದ್ದಾರೆ. ಮಧ್ಯಾಹ್ನ 2:30ಕ್ಕೆ ಜಕ್ಕೂರು ಏರೋಡ್ರಮ್​ನಿಂದ ಪ್ರಯಾಣ ಬೆಳೆಸಲಿದ್ದಾರೆ. ಹೆಲಿಕಾಪ್ಟರ್​ನಲ್ಲಿ ಚಿತ್ರದುರ್ಗಕ್ಕೆ ತೆರಳಲಿರುವ ಸಿಎಂ ಬೊಮ್ಮಾಯಿ, ನಾಳೆ ಸಂಜೆ 6 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಗ್ನಿಪಥವೋ ಅಥವಾ ಅಗ್ನಿಕುಂಡವೋ -ಮತ್ತೊಂದು CAA, Farm laws ಆಗದಿದ್ದರೆ ಸಾಕು, ಆಗುಹೋಗುಗಳ ವಿಶ್ಲೇಷಣೆ ಇಲ್ಲಿದೆ

Follow us on

Related Stories

Most Read Stories

Click on your DTH Provider to Add TV9 Kannada