AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಆರೋಪ

ಬಿಜೆಪಿ ನಾಯಕರು ಧರ್ಮಸ್ಥಳ ಸಮರ ಸಾರಿದ್ದಾರೆ. ಇಂದು ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಷಡ್ಯಂತ್ರಕ್ಕೆ ತಿರುಗೇಟು ಕೊಟ್ಟಿದ್ದಾರೆ. ವೇದಿಕೆಯ ಮೇಲೆ ನಾಯಕರು ಸಿಡಿಲಬ್ಬರದ ಭಾಷಣ ಮಾಡಿದ್ರೆ, ವೇದಿಕೆ ಕೆಳಗೆ ಕೇಸರಿ ಧ್ವಜ, ಶಾಲುಗಳು ರಾರಾಜಿಸಿವೆ. ಇನ್ನು ಬಿಜೆಪಿಯ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಹ ತಿರುಗೇಟು ನೀಡಿದ್ದಾರೆ. ಇದೆಲ್ಲರದ ನಡುವೆ ಧರ್ಮಸ್ಥಳ ಕೇಸ್​ ನಲ್ಲಿ ಷಡ್ಯಂತ್ರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಆ ಷಡ್ಯಂತ್ರದ ಗುಟ್ಟು ಬಿಚ್ಚಿಟ್ಟಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಆರೋಪ
Dk Shivakumar
ರಮೇಶ್ ಬಿ. ಜವಳಗೇರಾ
|

Updated on:Sep 01, 2025 | 9:41 PM

Share

ಬೆಂಗಳೂರು, (ಸೆಪ್ಟೆಂಬರ್ 01): ಕೇಸರಿ ಕಹಳೆ, ಎಲ್ಲಿ ನೋಡಿದ್ರೂ ಕೇಸರಿ ಧ್ವಜ, ಎಲ್ಲಿ ಕಣ್ಣಾಯಿಸಿದರೂ ಕೇಸರಿ ಶಾಲುಗಳ ಹಾರಾಟ. ಹೌದು.. ಬಿಜೆಪಿ ನಾಯಕರು ನಡೆಸಿದ ಧರ್ಮಸ್ಥಳ ಸ್ಥಳ ಚಲೋ ಫುಲ್ ಕೇಸರಿಮಯವಾಗಿತ್ತು. ಇಷ್ಟು ದಿನ ಷಡ್ಯಂತ್ರ ನಡೆಯುತ್ತಿದೆ ಎನ್ನುವುತ್ತಿದ್ದ ನಾಯಕರು ಇಂದು (ಸೆಪ್ಟೆಂಬರ್ 01) ಧರ್ಮಸ್ಥಳ ಚಲೋ ನಡೆಸಿ ರಾಜ್ಯ ಸರ್ಕಾರದ ನಡೆ ವಿರುದ್ಧ ವಾಗ್ದಾಳಿ ನಡೆಸಿದರು. ಇದೆಲ್ಲದರ ನಡುವೆ ಇದೇ ಧರ್ಮಸ್ಥಳದ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವುವಕುಮಾರ್ ಹೊಸ ಬಾಂಬ್ ಸಿಡಿಸಿದ್ದರು. ಈ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಕಂಪನ ಸೃಷ್ಟಿಸಿದ್ದು, ಷಡ್ಯಂತ್ರ ಯಾರದ್ದು ಇದೆ ಎಂದು ಹೇಳಬೇಕೆಂದು ವಿಪಕ್ಷ ನಾಯಕರು ಬಿಗಿಪಟ್ಟು ಹಿಡಿದಿದ್ದರು. ಅಲ್ಲದೇ ಈ ಬಗ್ಗೆ ಅಧಿವೇಶನದಲ್ಲೂ ಆಗ್ರಹಿಸಿದ್ದರು. ಆದರೂ ಬಾಯ್ಬಿಡದ ಡಿಕೆ ಶಿವಕುಮಾರ್, ಇಂದು ಷಡ್ಯಂತ್ರದ ಗುಟ್ಟು ಬಿಚ್ಚಿಟ್ಟಿದ್ದು, ಧರ್ಮಸ್ಥಳ ಪ್ರಕಣದಲ್ಲಿ ಬಿಜೆಪಿ ಮೂಲ ಕಾರ್ಯಕರ್ತರೇ ಷಡ್ಯಂತ್ರ ಮಾಡಿರುವುದು ಎಂದು ಗಂಭೀರ ಆರೋಪ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಪ್ರಸ್ತುತ ಎಸ್‌ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ . ಎನ್‌ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ನೇರವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ:  ಇದು ಖಾಲಿ ಟ್ರಂಕ್, ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದ ಡಿಕೆ ಶಿವಕುಮಾರ್

ಇದರೊಂದಿಗೆ ಅತ್ತ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅಬ್ಬರಿಸಿದ್ರೆ ಇತ್ತ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲೇ 2 ಬಣಗಳಾಗಿವೆ, ಅವರದ್ದೇ ಷಡ್ಯಂತ್ರ . ಬಿಜೆಪಿ ಮೂಲ ಕಾರ್ಯಕರ್ತರೇ ಷಡ್ಯಂತ್ರ ಮಾಡಿರುವುದು ಎಂದು ಡಿ ಸ್ಫೋಟಕ ಆರೋಪ ಮಾಡಿದರು. ಈ ಮೂಲಕ ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾಗಿನಿಂದ ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಡಿಕೆಶಿ ಹೇಳಿದಂತೆ ಇದರಲ್ಲಿ ಯಾರದ್ದು ಷಡ್ಯಂತ್ರ ಇರಬಹುದು ಎಂದು ನಿಗೂಢ ರಹಸ್ಯವಾಗಿತ್ತು. ಆದ್ರೆ, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿಯವರದ್ದೇ ಷಡ್ಯಂತ್ರ ಎಂದು ಆರೋಪಿಸಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ್ದಾರೆ.

ಅಂದು ಡಿಕೆಶಿ ಹೇಳಿದ್ದೇನು?

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ. ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ ವಿಚಾರಗಳ ಬಗ್ಗೆ ಅರಿವಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು.

ಈ ಸಂಬಂಧ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರಿಸುವಂತೆ ಪಟ್ಟು ಹಿಡಿದಿದ್ದರು. ಷಡ್ಯಂತ್ರ ಅಂದ್ರೆ ಯಾರದ್ದು? ಏನು? ಎನ್ನುವ ಬಗ್ಗೆ ಡಿಕೆ ಶಿವಕುಮಾರ್ ಅವರು ಉತ್ತರಿಸಬೇಕೆಂದು ಅಧಿವೇಶನದಲ್ಲೂ ಆಗ್ರಹಿಸಿದ್ದರು. ಹೀಗಾಗಿ ಡಿಕೆಶಿ ಅವರ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

Published On - 9:40 pm, Mon, 1 September 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!