Joint Opposition Meeting: ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆಯ ಟೈಮಿಂಗ್​ ಹಾಗೂ ಏನೆಲ್ಲ ಚರ್ಚೆ ಆಗುತ್ತೆ? ಇಲ್ಲಿದೆ ವಿವರ

ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಹಾಕಲು ವಿಪಕ್ಷಗಳು ಒಂದಾಗಿದ್ದು, ಇಂದು, ನಾಳೆ (ಜು.17, 18) ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹಾ ಮೈತ್ರಿಕೂಟದ ಸಭೆ ನಡೆಯಲಿದೆ.

Joint Opposition Meeting: ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆಯ ಟೈಮಿಂಗ್​ ಹಾಗೂ ಏನೆಲ್ಲ ಚರ್ಚೆ ಆಗುತ್ತೆ? ಇಲ್ಲಿದೆ ವಿವರ
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Jul 17, 2023 | 11:22 AM

ಬೆಂಗಳೂರು: ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ (Lokasbha Election) ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಕಟ್ಟಿಹಾಕಲು ವಿಪಕ್ಷಗಳು ಒಂದಾಗಿದ್ದು, ಇಂದು, ನಾಳೆ (ಜು.17, 18) ನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಮಹಾ ಮೈತ್ರಿಕೂಟದ ಸಭೆ ನಡೆಯಲಿದೆ. ಈ ಹಿನ್ನೆಲೆ ಕೇಂದ್ರ ಮಟ್ಟದ ವಿರೋಧ ಪಕ್ಷದ ನಾಯಕರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.  ಇನ್ನು ಈ ಸಭೆಯಲ್ಲಿ 23 ಪಕ್ಷದ 49 ಕ್ಕೂ ಹೆಚ್ಚು ನಾಯಕರು ಭಾಗಿಯಾಗುತ್ತಾರೆ. ಇಂದು ಸಂಜೆ 6 ಗಂಟೆಗೆ ಸಭೆಗೆ ಆಗಮಿಸುವ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸುತ್ತಾರೆ. ನಂತರ 6.10ಕ್ಕೆ ಸಭೆಯಲ್ಲಿ 6 ಪ್ರಮುಖ ವಿಷಯಗಳ ಬಗ್ಗೆ ಪ್ರಸ್ತಾಪ ಮಾಡಲಾಗುತ್ತದೆ. ಸಂಜೆ 7 ಗಂಟೆಗೆ ನಾಳೆಯ ಸಭೆಯ ಕಾರ್ಯಸೂಚಿಗಳ ಬಗ್ಗೆ ಪ್ರಸ್ತಾಪ ಮಾಡಲಾಗುತ್ತದೆ. ಸಂಜೆ 7.30ಕ್ಕೆ ವಿಪಕ್ಷಗಳ ಒಕ್ಕೂಟದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ.

18ರ ಸಭೆಯ ವೇಳಾಪಟ್ಟಿ

ನಾಳೆ (ಜು.18) ರಂದು ಬೆಳಗ್ಗೆ 11 ಗಂಟೆಗೆ ಸಭೆಯಲ್ಲಿ ಮಲ್ಲಿಕಾರ್ಜುನ್​ ಖರ್ಗೆ ಪ್ರಾಸ್ತಾವಿಕ ಭಾಷಣ ಮಾಡುತ್ತಾರೆ. ನಂತರ 11.10ರಿಂದ 6 ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಮಧ್ಯಾಹ್ನ 1 ಗಂಟೆಗೆ ಊಟದ ವಿರಾಮ. 2.30ಕ್ಕೆ ಉಪಸಮಿತಿಗಳ ರಚನೆ ಮಾಡುವುದು. ಸಭೆಯಲ್ಲಿ ಮೈತ್ರಿಕೂಟದ ಕಾರ್ಯದರ್ಶಿ ಆಯ್ಕೆ ಮಾಡಲಾಗುತ್ತದೆ. ಮಧ್ಯಾಹ್ನ 3 ಗಂಟೆಗೆ ಮಹಾ ಮೈತ್ರಿಕೂಟದ ಸಭೆ ಅಂತ್ಯವಾಗಲಿದೆ. ಸಂಜೆ 4 ಗಂಟೆಗೆ ನಾಯಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಸಭೆಯಲ್ಲಿ ಆರು ಪ್ರಮುಖ ವಿಚಾರಗಳ ಬಗ್ಗೆ ಮಾತುಕತೆ

1) ಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳು ರೂಪಿಸಲು ಉಪಸಮಿತಿ ರಚನೆ ಬಗ್ಗೆ ಚರ್ಚೆಯಾಗಲಿದೆ. ಇದು ಮುಂದಿನ ಲೋಕಸಭಾ ಚುನಾವಣೆಗೆ ವಿಪಕ್ಷ ಮೈತ್ರಿಕೂಟಗಳ ಸೇತುವೆ ಹಾಗೆ ಕೆಲೆಸ ಮಾಡುತ್ತದೆ. ಮೈತ್ರಿಕೂಟದ ಬೆಳವಣಿಗೆಗಳ ಬಗ್ಗೆ ಪರಸ್ಪರ ಸಂವಹನ ನಡೆಸುವ ಕೆಲಸ ಮಾಡಲಿದೆ.

2) ಮೈತ್ರಿಕೂಟದ ಜಂಟಿ ಕಾರ್ಯಕ್ರಮಗಳ ಆಯೋಜನೆ ಉಪಸಮಿತಿ ರಚನೆ ಬಗ್ಗೆ ಚರ್ಚೆ ಮಾಡಲಾಗುತ್ತದೆ. ದೇಶಾದ್ಯಂತ ಎಲ್ಲಿ ಬೃಹತ್ ರ್ಯಾಲಿಗಳ ಆಯೋಜನೆ ಮಾಡಬೇಕು, ಸಮಾವೇಶಗಳು ಎಲ್ಲಿ ಮಾಡಬೇಕು, ಕೇಂದ್ರ ಸರ್ಕಾರದ ವಿರುದ್ಧ ಯಾವ ರೀತಿ ಜನಾಂದೋಲನ ಮಾಡಬೇಕು. ಈ ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸುವ ಜವಬ್ದಾರಿ ಈ ಸಮಿತಿ ನಿರ್ವಹಿಸಲಿದೆ.

ಇದನ್ನೂ ಓದಿ: ಇಂದು ವಿಪಕ್ಷಗಳ ಸಭೆಗೆ ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಗೈರು

3) ವಿಪಕ್ಷಗಳ ಒಕ್ಕೂಟಗಳ ನಡುವೆ ಸೀಟು ಹಂಚಿಕೆ ಬಗ್ಗೆ ಗಂಭೀರ ಮಾತುಕತೆ ನಡೆಯಲಿದೆ. ಯಾವ ರಾಜ್ಯದಲ್ಲಿ ಯಾವ ಪಕ್ಷ ಪ್ರಬಲವಾಗಿ ಇದೆ ಆ ಪಕ್ಷಕ್ಕೆ ಹೆಚ್ಚಿನ ಮನ್ನಣೆ. ಈ ಸಂದರ್ಭದಲ್ಲಿ ತಮ್ಮ ತಮ್ಮ ರಾಜ್ಯ ರಾಜಕೀಯ ಸ್ಥಿತಿಗತಿಗಳ ವಿವರಣೆಯನ್ನು ನಾಯಕರು ನೀಡಲಿದ್ದಾರೆ.

4) EVM ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗುತ್ತದೆ. ಚರ್ಚೆಯ ಬಳಿಕ ಚುನಾವಣಾ ಆಯೋಗಕ್ಕೆ ಒಂದಷ್ಟು ಸಲಹೆಗಳನ್ನು ನೀಡುವುದು.

5) ವಿಪಕ್ಷಗಳ ಮೈತ್ರಿಕೂಟಕ್ಕೆ ಇಡಬೇಕಾದ ಹೆಸರಿನ ಬಗ್ಗೆ ಮಾತುಕತೆ ನಡೆಯುತ್ತದೆ. ನಾಯಕರು ಎಲ್ಲರಿಗೂ ಒಮ್ಮತ ಮೂಡುವ ಹೆಸರು ಪೈನಲ್ ಮಾಡಲಿದ್ದಾರೆ.

6) ಮೈತ್ರಿಕೂಟ ಮುನ್ನೆಡಸಲು ಸಂಚಾಲಕರನ್ನು ನೇಮಕ‌ ಮಾಡುವುದು. ಈ ಆರು ಪ್ರಮುಖ ವಿಚಾರಗಳು ಚರ್ಚೆ ಆಗಲಿವೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:19 am, Mon, 17 July 23