AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ: ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ

ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಉಚಿತ ಗ್ಯಾರಂಟಿ ಯೋಜನೆ ಅನುಷ್ಠಾಕ್ಕೆ ಬಳಕೆ ಮಾಡಿಕೊಂಡಿದ್ದು ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣ ಸದ್ಯ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಹಾಗಾಗಿ ಜುಲೈ 15 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಭೆ ನಡೆಸಿ ಬಳಿಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನಿಸಿದೆ.

ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ: ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ
ಹಗರಣಗಳ ವಿರುದ್ಧ ಸಿಡಿದೆದ್ದ ಬಿಜೆಪಿ, ಜುಲೈ 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 11, 2024 | 3:18 PM

ಬೆಂಗಳೂರು, ಜುಲೈ 11: ದಲಿತ ಸಮುದಾಯದ ಅಭಿವೃದ್ದಿಗೆ ಅಂತ ಮೀಸಲಿಟ್ಟ ಹಣವನ್ನು ಕಾಂಗ್ರೆಸ್​​ (Congress) ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿತ್ತು. ಇದೀಗ ಇದೇ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣ ಕೂಡ ಚರ್ಚೆ ಆಗುತ್ತಿದೆ. ಹೀಗಾಗಿ ನಗರದಲ್ಲಿ ಜುಲೈ 15ರಂದು ಬಿಜೆಪಿಯಿಂದ (BJP) ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನಾ ಸಭೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ವಿಪಕ್ಷ ಬಿಜೆಪಿ ನಿರ್ಧಾರ ಮಾಡಿದೆ. ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ದಲಿತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಈ ವಿಚಾರವಾಗಿ ಪದಾಧಿಕಾರಿಗಳ ಸಭೆ ಬಳಿಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪದಾಧಿಕಾರಿಗಳ ಸಭೆಯಲ್ಲಿ ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಯಾಗಿದೆ. ದಲಿತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಗ್ಯಾರಂಟಿ ಯೋಜನೆಗೆ SCSP-TSP ಹಣ ಬಳಕೆ: ವರದಿ ಕೇಳಿದ ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ

ಜುಲೈ 15ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಲಾಗಿದೆ. ವಾಲ್ಮೀಕಿ ಸಮುದಾಯ ದೊಡ್ಡ ಸಂಖ್ಯೆಯಲ್ಲಿ ಬರಲಿದೆ. ದಲಿತರ ಹಣ ಲೂಟಿ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಮತ್ತು ದಲಿತರಿಗೆ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಕ್ಯಾಪ್ಟನ್ ಆಗಿ ಸಿದ್ದರಾಮಯ್ಯ ಇಡೀ ಸಚಿವ ಸಂಪುಟ ದಲಿತರ ಹಣ ನುಂಗಲು ತಯಾರಿ ಮಾಡಿಕೊಂಡಿರುವುದು ವಿಷಾದನೀಯ. ಸರ್ಕಾರದ ಯೋಜನೆ ಮೂಲಕ ದಲಿತ ಸಮುದಾಯದ ಏಳಿಗೆ ಮಾಡಬೇಕಿತ್ತು. ಆದರೆ ದಲಿತರಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದೆ ಅಂತ‌ ಬಿಜೆಪಿ ಒತ್ತಿ ಹೇಳಲಿದೆ. ವಾಲ್ಮೀಕಿ ಹಗರಣ, ಕಾರ್ಮಿಕರ ಇಲಾಖೆ ಹಗರಣ, ಎಸ್​​ಸಿಪಿ-ಟಿಎಸ್​​ಪಿ ಹಗರಣಗಳ ಸರಮಾಲೆಯ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: SCSP-TSP ಹಣ ಗ್ಯಾರಂಟಿಗೆ ಬಳಸಿಕೊಳ್ಳುತ್ತಿರುವುದಕ್ಕೆ ಹೆಚ್​ಎಂ ರೇವಣ್ಣನ ಸಮರ್ಥನೆ ಹೀಗಿದೆ

ರಾಜ್ಯ ಸರ್ಕಾರ ಎಸ್​ಸಿಪಿ, ಟಿಎಸ್​ಪಿ ಯೋಜನೆ ಹಣವನ್ನು ಗ್ಯಾರಂಟಿಗಳಿಗೆ ಡೈವರ್ಟ್ ಮಾಡಿದ್ದು ರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿಪಿ, ಟಿಎಸ್​ಪಿ ಕಾಯ್ದೆಯಡಿ ಮೀಸಲಿಟ್ಟ ಹಣ ಬಳಕೆ ವಿಚಾರವಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಮಧ್ಯಪ್ರವೇಶ ಮಾಡಿದೆ. ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದೆ. ಇನ್ನು 7 ದಿನಗಳ ಒಳಗಾಗಿ ಸಂಪೂರ್ಣ ವರದಿ ನೀಡುವಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:15 pm, Thu, 11 July 24