AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಗೆ ಹಿತ್ತಲಲ್ಲೇ ನಡೆಯುತ್ತಿವೆ ಅಕ್ರಮಗಳು, ಭೂ ಹಗರಣಗಳು: ಬಿಜೆಪಿ ಸಂಸದ ಲಹರ್ ಸಿಂಗ್ ವಾಗ್ದಾಳಿ

ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕಲಬುರಗಿಯಲ್ಲಿ ಭೂ ಹಗರಣ ಮತ್ತು ಕುಟುಂಬ ಟ್ರಸ್ಟ್‌ಗಳ ಸಂಬಂಧಿತ ಆರೋಪಗಳನ್ನು ಸಿರೋಯಾ ಉಲ್ಲೇಖಿಸಿದ್ದು, ಖರ್ಗೆ ಅವರು ದೆಹಲಿಯಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸುವಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಹಿತ್ತಲಲ್ಲಿ ನಡೆಯುತ್ತಿರುವುದು ಅವರಿಗೆ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ಖರ್ಗೆ ಹಿತ್ತಲಲ್ಲೇ ನಡೆಯುತ್ತಿವೆ ಅಕ್ರಮಗಳು, ಭೂ ಹಗರಣಗಳು: ಬಿಜೆಪಿ ಸಂಸದ ಲಹರ್ ಸಿಂಗ್ ವಾಗ್ದಾಳಿ
ಲಹರ್ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ
Ganapathi Sharma
|

Updated on: Dec 30, 2024 | 7:25 AM

Share

ನವದೆಹಲಿ, ಡಿಸೆಂಬರ್ 30: ದೆಹಲಿಯಲ್ಲಿ ಪ್ರಜಾಪ್ರಭುತ್ವ ಉಳಿಸುವ ಕಾರ್ಯದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರತರಾಗಿದ್ದರೆ, ಅವರ ಹಿತ್ತಲಿನ ‘ರಿಪಬ್ಲಿಕ್ ಆಫ್ ಕಲಬುರಗಿ’ಯಲ್ಲಿ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಏನು ಮಾಡುತ್ತಿದ್ದಾರೆಂಬುದು ಅವರಿಗೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಕಟು ಟೀಕೆ ಮಾಡಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಖರ್ಗೆ ಕುಟುಂಬದ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ತೀವ್ರ ವಾಗ್ದಾಳಿ ನಡೆಸಿರುವ ಅವರು, ಖರ್ಗೆ ಹಿತ್ತಲಿನಲ್ಲೇ ನಡೆಯುತ್ತಿವೆ ಉಪದ್ರವಗಳು, ಭೂ ಹಗರಣಗಳು, ಕುಟುಂಬ ಟ್ರಸ್ಟ್‌ ಹಾವಳಿ, ಕಾಂಗ್ರೆಸ್ ಆಂತರಿಕ ಗೊಂದಲಗಳು ಎಂದು ಉಲ್ಲೇಖಿಸಿದ್ದಾರೆ.

ಸೋನಿಯಾ ಗಾಂಧಿಯವರ ತಂಡದ ಆರ್​ಟಿಐ ಶಾಸನಕ್ಕೆ ಧನ್ಯವಾದ. ಖರ್ಗೆ ಕುಟುಂಬದ ಟ್ರಸ್ಟ್‌ನ ಹಗರಣದ ವಿವರಗಳು ಉಚಿತವಾಗಿ ಎಲ್ಲರಿಗೂ ಲಭ್ಯವಿದೆ ಎಂದು ಲಹರ್ ಸಿಂಗ್ ವ್ಯಂಗ್ಯವಾಡಿದ್ದಾರೆ.

ಲಹರ್ ಸಿಂಗ್ ಹೇಳಿದ್ದೇನು?

“ಗೌರವಾನ್ವಿತ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ಪ್ರಜಾಪ್ರಭುತ್ವ ಉಳಿಸುವ ಕಾರ್ಯದಲ್ಲಿ ನಿರತರಾಗಿರುವಾಗ, ಅವರ ಬೆನ್ನ ಹಿಂದೆ ಕಲಬುರ್ಗಿ ರಿಪಬ್ಲಿಕ್​​ನಲ್ಲಿ ನಡೆಯುತ್ತಿರುವುದು ಅವರಿಗೆ ತಿಳಿಯುತ್ತಿಲ್ಲ. ಮಹಾನ್ ಸಾಂವಿಧಾನಿಕ ತಜ್ಞರಂತೆ ವರ್ತಿಸುವ ಅವರ ಮಗ ಸಚಿವ ಪ್ರಿಯಾಂಕ್ ಖರ್ಗೆ ಒಂದಿಲ್ಲೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ’’ ಎಂದು ಲಹರ್ ಸಿಂಗ್ ಉಲ್ಲೇಖಿಸಿದ್ದಾರೆ.

ಮುಂದುವರಿದು, ‘‘ಇದೊಂದೇ ಅಲ್ಲ, ಖರ್ಗೆ ಅವರ ಕುಟುಂಬದ ಟ್ರಸ್ಟ್‌ಗಳು ಮತ್ತು ಭೂ ಹಗರಣಗಳ ವಿವರಗಳೂ ಒಂದರ ಹಿಂದೆ ಒಂದರಂತೆ ಹೊರಬೀಳುತ್ತಿವೆ. ಅವರ ಕುಟುಂಬದ ಟ್ರಸ್ಟ್ ದಲಿತ ಕೋಟಾದಡಿ ಬೆಂಗಳೂರಿನಲ್ಲಿ ಪಡೆದ ಕೆಐಎಡಿಬಿಯ 5 ಎಕರೆ ಜಮೀನಿನ ವಿವಾದ ಜೋರಾದಾಗ ಆ ಜಾಗವನ್ನು ಟ್ರಸ್ಟ್ ಹಿಂದಿರುಗಿಸಿದೆ. ಶ್ರೀಮತಿ ಸೋನಿಯಾ ಗಾಂಧಿಯವರ ಆರ್‌ಟಿಐ ಕಾನೂನಿಂದಾಗಿ ಈ ಹಗರಣದ ಎಲ್ಲ ದಾಖಲೆಗಳು ಸುಲಭವಾಗಿ ಲಭ್ಯವಾಗಿದೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು’’ ಎಂದು ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮೃತ ಗುತ್ತಿಗೆದಾರ ಸಚಿನ್ ಮನೆಗೆ ವಿಜಯೇಂದ್ರ ಸೇರಿ ಬಿಜೆಪಿ ನಿಯೋಗ ಭೇಟಿ: ಸಿಬಿಐ ತನಿಖೆಗೆ ಕುಟುಂಬ ಆಗ್ರಹ

ಕರ್ನಾಟಕ ಕಾಂಗ್ರೆಸ್​​ನಲ್ಲಿನ ನಾಯಕತ್ವಕ್ಕಾಗಿ ನಡೆಯುತ್ತಿರುವ ಕಲಹಕ್ಕೂ ಕೂಡ ಧನ್ಯವಾದಗಳು. ಏಕೆಂದರೆ ಹಗರಣಗಳ ಮಾಹಿತಿ ಸುಲಭವಾಗಿ ಹೊರಬೀಳುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಯಾರಿಗೆ ಯಾರೂ ನಿಷ್ಠರಾಗಿಲ್ಲ. ಎಲ್ಲರೂ ತಮ್ಮ ಕುರ್ಚಿಗೆ ಅಂಟಿಕೊಂಡಿರುವುದರಿಂದ, ದೆಹಲಿ ದೂರದಲ್ಲಿದೆ ಮತ್ತು ಅಲ್ಲಿಗೆ ಏನೂ ತಲುಪುವುದಿಲ್ಲ ಎಂದು ಖರ್ಗೆ ಜೀ ಭಾವಿಸಿದರೆ ಅದು ತಪ್ಪು. ಪ್ರಜಾಪ್ರಭುತ್ವವನ್ನು ಉಳಿಸುವುದು ಎಂದರೆ ತಮ್ಮ ಕುಟುಂಬವನ್ನು ಉಳಿಸುವುದು ಎಂದರ್ಥವಲ್ಲ. ಅದೇನಿದ್ದರೂ ನೆಹರೂ-ಗಾಂಧಿ ಕುಟುಂಬದ ಮಂತ್ರ ಎಂದು ಲಹರ್ ಸಿಂಗ್ ಕಿಡಿ ಕಾರಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!
ಬರೋಬ್ಬರಿ 94 ವರ್ಷಗಳ ಬಳಿಕ ಬಾಕ್ಸಿಂಗ್ ಡೇನಲ್ಲಿ 20 ವಿಕೆಟ್..!
ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?
ಕೆಟ್ಟದ್ದು ಸಂಭವಿಸುವ ಮುನ್ನ ಯಾವೆಲ್ಲಾ ಸೂಚನೆಗಳು ಕಾಣಿಸುತ್ತೆ?
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಇಂದು ಈ ರಾಶಿಯವರ ಅನಿಸಿಕೆಗಳಿಗೆ ಫಲ ಸಿಗಲಿದೆ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್