ಮತದಾರರ ಹೆಸರು ಡಿಲೀಟ್ ಆಗದಂತೆ ಕ್ರಮ ವಹಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ
ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಅಥವಾ ಮತ್ತಿತರೆ ಯಾವುದೇ ಸಮಸ್ಯೆಗಳು ಆಗದಂತೆ ಕ್ರಮ ವಹಿಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕರಾದ ಡಾ.ಅಶ್ವತ್ಥ್ ನಾರಾಯಣ ಉಪಸ್ಥಿತರಿದ್ದರು.
ಬೆಂಗಳೂರು, ಮಾರ್ಚ್ 22: ಕರ್ನಾಟಕದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಅಥವಾ ಮತ್ತಿತರೆ ಯಾವುದೇ ಸಮಸ್ಯೆಗಳು ಆಗದಂತೆ ಕ್ರಮ ವಹಿಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ (Election Commission) ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ, ಶಾಸಕರಾದ ಡಾ.ಅಶ್ವತ್ಥ್ ನಾರಾಯಣ, ಭೈರತಿ ಬಸವರಾಜ, ಎಸ್. ಮುನಿರಾಜು, ಮುನಿರತ್ನ, ಸಿ.ಕೆ. ರಾಮಮೂರ್ತಿ ಉಪಸ್ಥಿತರಿದ್ದರು.
ಮತದಾರರ ಪಟ್ಟಿ ಪರಿಷ್ಕರಣೆ ನ್ಯೂನತೆ ಬಗ್ಗೆ ಆಯೋಗಕ್ಕೆ ದೂರು ನೀಡಿದ್ದೇವೆ: ಡಾ.ಅಶ್ವತ್ಥ್ ನಾರಾಯಣ
ಬಳಿಕ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಮಾತನಾಡಿ, ಮತದಾರರ ಪಟ್ಟಿಯಲ್ಲಿನ ಪರಿಷ್ಕರಣೆ ನೂನ್ಯತೆಗಳ ಬಗ್ಗೆ ಚುನಾವಣೆ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಆನ್ಲೈನ್ನಲ್ಲಿ ಮತದಾರರ ಹೆಸರು ನೋಂದಣಿ ಆಗುತ್ತಿಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಿಗಳ ದುರ್ಬಳಕೆ ಆಗುತ್ತಿದೆ. ಯಶವಂತಪುರ ರಸ್ತೆ ತೆರವಿನ ಬಗ್ಗೆಯೂ ಗಮನಕ್ಕೆ ತಂದಿದ್ದೇವೆ ಎಂದರು.
ಇದನ್ನೂ ಓದಿ: ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ!
ಸರ್ಕಾರದಿಂದ ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಿಗಳ ದುರ್ಬಳಕೆ ಆಗುತ್ತಿದೆ. ಯಶವಂತಪುರ ರಸ್ತೆ ತೆರವಿನ ಬಗ್ಗೆಯೂ ಗಮನಕ್ಕೆ ತಂದಿದ್ದೇವೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಪ್ಯಾರಾ ಮಿಲಿಟರಿ ಫೋರ್ಸ್ ನಿಯೋಜಿಸುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಪೂರಕವಾದ ಅರ್ಜಿ ಕೊಡಿ, ನಾವು ಅದರ ಬಗ್ಗೆ ಕ್ರಮ ವಹಿಸುವುದಾಗಿ ಆಯೋಗ ಭರವಸೆ ನೀಡಿದೆ ಎಂದು ಹೇಳಿದ್ದಾರೆ.
ತೇಜಸ್ವಿ ಸೂರ್ಯ ಹೇಳಿದ್ದಿಷ್ಟು
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕಳೆದ ಒಂದು ತಿಂಗಳಿಂದ ಲಿಂಕ್ ವರ್ಕರ್ಸ್ಗಳನ್ನು ಬಳಸಿಕೊಳ್ಳುತ್ತಿದೆ. ಗ್ಯಾರಂಟಿ ಇಂಪ್ಲಿಮೆಂಟ್ ಅಂತ ಮಾಡಿ ಅವರಿಗೆ ಸಂಬಳ ಕೊಟ್ಟು ಕೆಲಸಕ್ಕೆ ಹಾಕಿಕೊಂಡಿದ್ದಾರೆ. ಕಾಂಗ್ರೆಸ್ಗೆ ಬೇಕಾಗುವ ರೀತಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ನಗರ್ತಪೇಟೆಯಲ್ಲಿ ಪ್ರತಿಭಟನೆ: ಶೋಭಾ, ತೇಜಸ್ವಿ ಸೂರ್ಯ ಸೇರಿ 44 ಜನರ ವಿರುದ್ಧ FIR
ಇದು ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಬಗ್ಗೆ ದೂರು ನೀಡಿದ್ದೇವೆ. ಕೆಲವು ಪೊಲೀಸ್ ಅಧಿಕಾರಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳು ಕಾಂಗ್ರೆಸ್ ಏಜೆಂಟ್ಗಳಂತೆ ವರ್ತಿಸುತ್ತಿದ್ದಾರೆ. ಅಂತಹವರ ವಿರುದ್ಧ ಕೂಡ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ. ಯಾವ ಯಾವ ಅಧಿಕಾರಿಗಳ ವಿರುದ್ಧ ಮತದಾರರು ದೂರು ನೀಡಿದ್ದಾರೆ ಅಂತಹ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿದೆ. ಐದಾರು ಮತ ಕ್ಷೇತ್ರಗಳಿಂದ ಕೆಲವು ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.