ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ: ಬಿಕೆ ಹರಿಪ್ರಸಾದ್ ಆರೋಪ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಅಕ್ರಮ ಹಣಕಾಸು ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಕಂಟೇನರ್​ಗಳಲ್ಲಿ ಹಣ ಬಂದಿದ್ದು, ತೂಕದ ಮೂಲಕ ಖರ್ಚು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕರ್ನಾಟಕದ ಉಪಚುನಾವಣೆ ಗೆಲುವಿನ ಬಗ್ಗೆಯೂ ಮಾತನಾಡಿದ್ದು, ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದಿದ್ದಾರೆ.

ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ: ಬಿಕೆ ಹರಿಪ್ರಸಾದ್ ಆರೋಪ
ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ: ಬಿಕೆ ಹರಿಪ್ರಸಾದ್ ಆರೋಪ
Edited By:

Updated on: Nov 24, 2024 | 2:52 PM

ಮಂಗಳೂರು, ನವೆಂಬರ್​ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ. ಹಣ ಎಣಿಸುವ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಖರ್ಚು ಮಾಡಿದ್ದಾರೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್​ (BK Hariprasad) ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡ ಹರಿಪ್ರಸಾದ್

ರಾಜ್ಯದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು. ನಾವು ಕೂಡ ಅವರಿಗಿಂತ ಹೆಚ್ಚು ಪೈಪೋಟಿ ನೀಡಿದ್ದೇವೆ. ನಾವೇನು ಖಾವಿ ತೊಟ್ಟ ಸನ್ಯಾಸಿಗಳಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳಿಗೆ ಸೆಡ್ಡು ಹೊಡೆಯಲು ತಂತ್ರ: ಡಿಸೆಂಬರ್ 5ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸಮಾವೇಶ

ಅವರ ಹಣ, ಹೆಂಡಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ. ಆ ಮೂಲಕ ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡರು. ನಮ್ಮ ಕೆಲಸದ ಮೂಲಕ ಕೂಡ ಉತ್ತರ ಕೊಟ್ಟಿದ್ದೇವೆ. ಬಿಜೆಪಿ ಚುನಾವಣೆಗೂ ಮೊದಲು ಸುಳ್ಳು ವದಂತಿ ಹಬ್ಬಿಸಿದ್ದರು. ಗ್ಯಾರಂಟಿ, ವಕ್ಫ್ ವಿಚಾರ ಪ್ರಸ್ತಾಪಿಸಿ ಅಪಪ್ರಚಾರ ಮಾಡಿದರು.

ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ

ಬಿಜೆಪಿಯಲ್ಲಿ ಕಾಂಗ್ರೆಸ್​​ಗಿಂತ ಡಬಲ್​ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜ‌ನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್​ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ, ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ. ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾಂವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್​​ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ, ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್​ಗೆ ಶುರುವಾಯ್ತು ಹೊಸ ಆತಂಕ!

ಸಿಎಂ ಬದಲಾಗುತ್ತಾರೆ ಅಂತಾ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಆಗಲ್ಲ. ಸಿಎಂ ಬದಲಾವಣೆ ಯಡಿಯೂರಪ್ಪನವರ ಸಹಿ ಮಾಡಿದ ಹಾಗೇ ಅಲ್ಲ. ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us