ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ

ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು. ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 17, 2024 | 6:11 PM

ಬೆಂಗಳೂರು, ಮಾರ್ಚ್​​ 17: ಮಹಿಳೆಯರ ಸಬಲೀಕರಣಕ್ಕಾಗಿ ಜಾರಿ ಮಾಡಿರುವ ಶಕ್ತಿ ಯೋಜನೆ ಇದೀಗ ಮಹಿಳಾ ಕಂಡಕ್ಟರ್​ (conductor) ಗಳಿಗೆ ಮುಳುವಾದಂತಾಗಿದೆ. ಏಕೆಂದರೆ ಶಕ್ತಿ‌ ಯೋಜನೆಗಾಗಿ ಹಗಲು ರಾತ್ರಿ ಶ್ರಮಿಸುವ ಮಹಿಳಾ ಕಂಡಕ್ಟರ್​ಗೆ ಅಧಿಕಾರಿಗಳಿಂದ ಟಾರ್ಚರ್​​ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿವೆಂಬತೆ ಕೆಎಸ್​ಆರ್​​ಟಿಸಿ ಮಹಿಳಾ ಕಂಡಕ್ಟರ್​ ಒಬ್ಬರು ವಿಡಿಯೋ ಮಾಡಿ ಕಣ್ಣಿರಿಟ್ಟಿದ್ದಾರೆ. ಸದ್ಯ ಈ ವಿಚಾರವಾಗಿ ನಿಮಗೆ ನಿಜಕ್ಕೂ ಮಹಿಳೆಯರ ಮೇಲೆ ಕಿಂಚಿತ್ತು ಕಾಳಜಿ ಇದ್ದರೆ ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಬಿಜೆಪಿ ವಾಗ್ದಾಳಿ ಮಾಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್ 

ಬಿಎಂಟಿಸಿ ಮಹಿಳಾ ಕಂಡಕ್ಟರ್‌‌ಗೆ ಅವರ ಮೇಲಧಿಕಾರಿಗಳು ಇನ್ನಿಲ್ಲದಂತೆ ನೀಡಿದ ಕಿರುಕುಳದ ಬಗ್ಗೆ ದೂರು ನೀಡಿ ನಾಲ್ಕು ದಿನಗಳಾದರೂ ಯಾವುದೇ ಕ್ರಮವಿಲ್ಲ, ಕನಿಷ್ಟ ದೂರು ನೀಡಿದ ಮಹಿಳೆಗೆ ಸಾಂತ್ವನವೂ ಹೇಳಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರೇ, ಇದೇನಾ ನೀವು ಮಹಿಳೆಯರಿಗೆ ನೀಡಿದ “ಶಕ್ತಿ” ಎಂದು ಪ್ರಶ್ನೆ ಮಾಡಿದೆ.

ಇದನ್ನೂ ಓದಿ: KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ

ಡಿಪೋ ಮ್ಯಾನೇಜರ್ ಎಂ.ಕೃಷ್ಣಪ್ಪ ಅವರು ಬೇಗ ಬಂದರೂ ಲೇಟ್ ಆಗಿ ಡ್ಯೂಟಿ ನೀಡುತ್ತಿದ್ದಾರೆ. ಎಷ್ಟೇ ತಡವಾದರೂ ಕೆಲಸ ಮುಗಿಸಿ ಮನೆಗೆ ಹೋಗುವಂತೆ ಟಾರ್ಚರ್ ನೀಡುತ್ತಿದ್ದಾರೆ ಅಂತ ಆರೋಪ ಮಾಡಲಾಗಿದೆ. ಡಿಪೋದ ಇತರೆ ಅಧಿಕಾರಿಗಳ ಗಮನಕ್ಕೂ ತಂದರೂ ಅವರಿಂದಲೂ ಟಾರ್ಚರ್ ಅಂತೆ. ಅಧಿಕಾರಿಗಳ ಟಾರ್ಚರ್​​ಗೆ ರೋಸಿ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:08 pm, Sun, 17 March 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್