ವಕ್ಫ್ ಬೋರ್ಡ್​ನಲ್ಲಿ ಅವ್ಯವಹಾರಗಳ ಸರಮಾಲೆ; ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಆರೋಪ

ಅಕ್ರಮ ತಡೆಗಟ್ಟುವಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ, ಐಎಎಸ್ ಅಧಿಕಾರಿ ಮಹೇಂದ್ರ ಜೈನ್​ ಅವರಿಗೆ ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಬಹಿರಂಗ ಪತ್ರ ಬರೆದಿದ್ದಾರೆ.

ವಕ್ಫ್ ಬೋರ್ಡ್​ನಲ್ಲಿ ಅವ್ಯವಹಾರಗಳ ಸರಮಾಲೆ; ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಆರೋಪ
ಸಾಂದರ್ಭಿಕ ಚಿತ್ರ
Follow us
Skanda
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 04, 2020 | 7:13 PM

ಬೆಂಗಳೂರು: ವಕ್ಫ್​ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮ ತಡೆಗಟ್ಟುವಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹೆಚ್ಚುವರಿ ಮಹಾ ನಿರ್ದೇಶಕ, ಐಎಎಸ್ ಅಧಿಕಾರಿ ಮಹೇಂದ್ರ ಜೈನ್​ ಅವರಿಗೆ ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಬಹಿರಂಗ ಪತ್ರ ಬರೆದಿದ್ದಾರೆ.

ವಕ್ಫ್​ ಇಲಾಖೆಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದು ಸರ್ಕಾರ ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಪತ್ರದ ಮುಖೇನ ಅನ್ವರ್ ಮಾಣಿಪ್ಪಾಡಿ ಕೆಲವೊಂದು ಅವ್ಯವಹಾರಗಳ ಉದಾಹರಣೆಯನ್ನು ನೀಡಿದ್ದಾರೆ.

ದರ್ಗಾಗಳಲ್ಲಿ ನಡೆಯುತ್ತಿದೆ ಅವ್ಯವಹಾರ ಬೆಂಗಳೂರಿನ ಶಿವಾಜಿ ನಗರದಲ್ಲಿರುವ ಕಂಬಲ್ ಪೋಶ್ ದರ್ಗಾಕ್ಕೆ ಕೆಲ ತಿಂಗಳ ಹಿಂದಷ್ಟೇ ಸರ್ಕಾರವು ನಿವೃತ್ತ ಕೆಎಎಸ್​ ಅಧಿಕಾರಿ ಆತೀಕ್ ಅಹ್ಮದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ. ಆದರೆ, ಅವರಿಗೆ ಅಧಿಕಾರ ಹಸ್ತಾಂತರಿಸಲು 8 ವರ್ಷಗಳಿಂದ ಅಧಿಕಾರದಲ್ಲಿದ್ದ ಅಧಿಕಾರಿ ಸತಾಯಿಸಿದ್ದಾರೆ ಎಂದು ದೂರಿದ್ದಾರೆ.

ಇದುವರೆಗೆ ಎಷ್ಟು ಹಣ ಗುಳುಂ ಆಗಿರಬಹುದು? ನಂತರ ಸಿಇಓ ಅವರಿಗೆ ಸತತವಾಗಿ ಪತ್ರ ಬರೆದು ಸಮಿತಿಗಳ ಮೂಲಕ ಪ್ರಶ್ನಿಸಿ ಅಧಿಕಾರ ಪಡೆಯಬೇಕಾಯಿತು. ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಆತೀಕ್ ಅಹ್ಮದ್ ತನ್ನ ಸಾಮರ್ಥ್ಯವನ್ನು ತೋರಿದ್ದಾರೆ. ಮೊದಲಿದ್ದ ಸಮಿತಿ 12 ವರ್ಷದಲ್ಲಿ ₹ 26 ಲಕ್ಷ ಮೊತ್ತವನ್ನು ಮಾತ್ರ ಸಂಗ್ರಹಿಸಿತ್ತು. ಆದರೆ ಆತೀಕ್ ಅಹ್ಮದ್ ಕೇವಲ ₹ 5 ತಿಂಗಳಲ್ಲಿ 35 ಲಕ್ಷ ಸಂಗ್ರಹಿಸಿದ್ದಾರೆ. ಹಾಗಾದರೆ ಮೊದಲು ಎಷ್ಟು ಅವ್ಯವಹಾರ ನಡೆದಿತ್ತು ಎಂದು ಪ್ರಶ್ನಿಸಿದ್ದಾರೆ.

ದುಡಿಯುವವರಿಗೆ ಮೂರು ಕಾಸಿನ ಸಂಬಳ ಆತೀಕ್ ಅಹ್ಮದ್ ಬಂದ ನಂತರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ಇದು ಮೊದಲಿದ್ದವರಿಗೆ ಏಕೆ ಸಾಧ್ಯವಾಗಲಿಲ್ಲ? ಇದು ವಕ್ಫ್ ಇಲಾಖೆಯ ಅವ್ಯವಹಾರಕ್ಕೆ ಒಂದು ಉದಾಹರಣೆಯಷ್ಟೇ. ಇದೇ ರೀತಿ ಕೋಲಾರದ ಚಿಂತಾಮಣಿಯ ಮುರುಗಮಲ್ಲಾ ದರ್ಗಾದಲ್ಲೂ ಅವ್ಯವಹಾರ ನಡೆಯುತ್ತಿದೆ. ಇವೆಲ್ಲವನ್ನೂ ಮಟ್ಟ ಹಾಕಬೇಕು. ದರ್ಗಾಗಳಲ್ಲಿ 8-10 ವರ್ಷಗಳಿಂದ ದುಡಿಯುತ್ತಿರುವವರಿಗೆ ಮೂರು ಕಾಸಿನ ಸಂಬಳ ನೀಡಲಾಗುತ್ತಿದೆ. ಬಂದ ಆದಾಯವೆಲ್ಲವೂ ಯಾರದ್ದೋ ಪಾಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಅಧಿಕಾರಿ ಎತ್ತಂಗಡಿಗೆ ಯತ್ನ ಈಗ ವಕ್ಫ್ ಇಲಾಖೆಯ ಕೆಲವು ಭ್ರಷ್ಟರು ಪ್ರಾಮಾಣಿಕ ಅಧಿಕಾರಿಯಾದ ಆತೀಕ್ ಅಹ್ಮದ್ ಅವರನ್ನು ಎತ್ತಂಗಡಿ ಮಾಡಲು ನಿರಂತರ ಪ್ರಯತ್ನಿಸುತ್ತಿದ್ದಾರೆ. ಇಲಾಖೆಯಲ್ಲಿ ರಾಜಾರೋಷವಾಗಿ ಅವ್ಯವಹಾರ ನಡೆಯುತ್ತಿದ್ದರೂ ಸರ್ಕಾರವೇಕೆ ಕಣ್ಣುಮುಚ್ಚಿ ಕುಳಿತಿದೆ? ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಕೆ ಏಕೆ? ಎಂದು ಪತ್ರದ ಮೂಲಕ ಪ್ರಶ್ನೆ ಮಾಡಿದ್ದಾರೆ.

ಇನ್ನಾದರೂ ಸರ್ಕಾರ ವಕ್ಫ್ ಇಲಾಖೆಯ ಭ್ರಷ್ಟ ಚಟುವಟಿಕೆಗಳಿಗೆ ಇತಿಶ್ರೀ ಹಾಡಬೇಕು. ಪ್ರಾಮಾಣಿಕ ಅಧಿಕಾರಿಗಳನ್ನು ನೇಮಿಸುವ ಮೂಲಕ ಪಾರದರ್ಶಕ ಆಡಳಿತ ಆಗುವಂತೆ ಗಮನ ಹರಿಸಬೇಕು ಎಂದು ಅನ್ವರ್ ಮಾಣಿಪ್ಪಾಡಿ ಮನವಿ ಮಾಡಿದ್ದಾರೆ.

ವಕ್ಫ್ ಮಂಡಳಿ ಹಗರಣಗಳನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಅನ್ವರ್ ಮಾಣಿಪ್ಪಾಡಿ..

Published On - 7:13 pm, Fri, 4 December 20

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?