ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಕೊರೊನಾ ನಿರ್ವಹಣೆ, ಪಶ್ಚಿಮ ಬಂಗಾಳ ಹಿಂಸಾಚಾರ, ರಾಜಕೀಯ ನಿರ್ಣಯಗಳ ಬಗ್ಗೆ ಚರ್ಚೆ

| Updated By: ganapathi bhat

Updated on: Jun 26, 2021 | 4:27 PM

ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರಕ್ಕೆ ಹೋಗಲಿಲ್ಲ. ಕಾಂಗ್ರೆಸ್ ಪಕ್ಷ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಕೊರೊನಾ ನಿರ್ವಹಣೆ, ಪಶ್ಚಿಮ ಬಂಗಾಳ ಹಿಂಸಾಚಾರ, ರಾಜಕೀಯ ನಿರ್ಣಯಗಳ ಬಗ್ಗೆ ಚರ್ಚೆ
ಬಿಜೆಪಿ
Follow us on

ಬೆಂಗಳೂರು: ಐದೂವರೆ ತಿಂಗಳ ಬಳಿಕ ಕಾರ್ಯಕಾರಿಣಿ ಸಭೆ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗ ಕಾರ್ಯಕಾರಿಣಿ ನಡೆದ ಬಳಿಕ ಬೆಂಗಳೂರಲ್ಲಿ ನಡೆದಿದೆ. ಕಳೆದ ಐದು ತಿಂಗಳಲ್ಲಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗಿದೆ. ಎರಡು ರಾಜಕೀಯ ನಿರ್ಣಯ ಮಂಡನೆ ಮಾಡಲಾಗಿದೆ ಎಂದು ಕಾರ್ಯಕಾರಿಣಿ ಸಭೆ ನಡೆದಿರುವ ಬಗ್ಗೆ ವಿವರಣೆ ನೀಡಿದ್ದಾರೆ.

ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ಸಮರೋಪಾದಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಕೆಲಸ ಸಾಗುತ್ತಿದೆ ಎಂದು ತಿಳಿಸಿದ್ದಾರೆ. ಕಾರ್ಯಕಾರಿಣಿ ಸಭೆಯಲ್ಲಿ, ಬೆಡ್, ಆಕ್ಸಿಜನ್ ಕಾನ್ಸಂಟ್ರೇಟರ್ ಪೂರೈಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸೆ ಬಗ್ಗೆ ಮಾತನಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರು ಜನರಿಗೆ ನೆರವು ನೀಡುವ ಬದಲು, ಋಣಾತ್ಮಕ ವಿಚಾರಗಳನ್ನು ಚರ್ಚೆ ಮಾಡುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರಕ್ಕೆ ಹೋಗಲಿಲ್ಲ. ಕಾಂಗ್ರೆಸ್ ಪಕ್ಷ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬೆಂಗಳೂರಲ್ಲಿ ಬಿಜೆಪಿ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನ ನಂತರದ ಸಭೆಯಲ್ಲಿ ಕೊವಿಡ್-19 ಬಗ್ಗೆ ಚರ್ಚೆಯಾಗಲಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಗರ್ಭಗುಡಿಯಲ್ಲಿ ರಮೇಶ್​ ಜಾರಕಿಹೊಳಿ ಇರೋದು ಕಷ್ಟ; ಕಾಂಗ್ರೆಸ್​ನಲ್ಲಿ 8-10 ಜನರಿಗೆ ಮುಖ್ಯಮಂತ್ರಿ ಆಗೋ ಯೋಗ್ಯತೆ ಇದೆ: ಕೈ ಶಾಸಕ

ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರ ಬದಲಾವಣೆ ಚರ್ಚೆ; ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸಂಘಟನೆಗೆ ಹೊಸ ಸೂತ್ರ?