AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಭೆ ಬಿಜೆಪಿ ಕಚೇರಿಗೆ ಸ್ಥಳಾಂತರ; ಭೇಟಿಗೆ ತುದಿಗಾಲಲ್ಲಿ ನಿಂತಿರುವ ಹಲವು ಶಾಸಕರು

ಈ ಮಧ್ಯೆ ಅರುಣ್ ಸಿಂಗ್​ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್​ ನಿರಾಣಿ, ಉಮೇಶ್​ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್​, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಭೆ ಬಿಜೆಪಿ ಕಚೇರಿಗೆ ಸ್ಥಳಾಂತರ; ಭೇಟಿಗೆ ತುದಿಗಾಲಲ್ಲಿ ನಿಂತಿರುವ ಹಲವು ಶಾಸಕರು
ಅರುಣ್​ ಸಿಂಗ್​
TV9 Web
| Updated By: Lakshmi Hegde|

Updated on: Jun 17, 2021 | 10:40 AM

Share

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯದ್ದೇ ಬಿಸಿಬಿಸಿ ಚರ್ಚೆ. ಅದರಲ್ಲೂ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ರವರು ನಿನ್ನೆ ಇಲ್ಲಿಗೆ ಆಗಮಿಸಿದ ಮೇಲಂತೂ ಬಿಜೆಪಿ ರಾಜಕೀಯ ವಲಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಶುರುವಾಗಿದೆ. ಇವತ್ತಂತೂ ಅನೇಕ ಶಾಸಕರು ಅರುಣ್​ ಸಿಂಗ್​​ರನ್ನು ಭೇಟಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಇಂದಿನ ಸಭೆಯನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ವರ್ಗಾಯಿಸಿದ್ದಾರೆ. ಇಂದು ಕುಮಾರಕೃಪಾ ಗೆಸ್ಟ್​​ಹೌಸ್​​​ನಲ್ಲಿ ಸಭೆ ನಡೆಯುವುದಿತ್ತು. ಆದರೆ ಕೊನೇ ಕ್ಷಣದಲ್ಲಿ ಅರುಣ್​ ಸಿಂಗ್​ ಅದನ್ನು ಬಿಜೆಪಿ ಕಚೇರಿಗೆ ಸ್ಥಳಾಂತರಿಸಿದ್ದಾರೆ.

ನನ್ನನ್ನು ಭೇಟಿ ಮಾಡಲು ಬರುವವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಸಿಗಲಿ. ಬಿಜೆಪಿ ಕಚೇರಿಯಲ್ಲಿ ಸಭೆ ಮಾಡಿದರೆ ನಮ್ಮಿಬ್ಬರನ್ನೂ ಭೇಟಿಯಾಗಬಹುದಾಗಿದೆ ಎಂದು ಅರುಣ್​ ಸಿಂಗ್ ಹೇಳಿದ್ದಾರೆ ಎನ್ನಲಾಗಿದೆ. ಇಂದು ಬಿಜೆಪಿಯ ಸಂಸದರು, ಶಾಸಕರು, ಪರಿಷತ್​ ಸದಸ್ಯರ ಜತೆ ಅರುಣ್​ ಸಿಂಗ್​ ಸಭೆ ನಡೆಸಲಿದ್ದಾರೆ.

ಈ ಮಧ್ಯೆ ಅರುಣ್ ಸಿಂಗ್​ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್​ ನಿರಾಣಿ, ಉಮೇಶ್​ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್​, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ. ಇನ್ನು ಕೊವಿಡ್​ ಸೆಂಟರ್​​ನಲ್ಲಿದ್ದ ರೇಣುಕಾಚಾರ್ಯ ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಅರುಣ್​ ಸಿಂಗ್​ ಭೇಟಿಗೆ ಕಾಯುತ್ತಿದ್ದಾರೆ. ಇನ್ನು ಪಕ್ಷದ ವಿರುದ್ಧ ಈಗಾಗಲೇ ಅಸಮಾಧಾನಗೊಂಡಿರುವ ಬಸನಗೌಡ ಪಾಟೀಲ್​ ಯತ್ನಾಳ್​, ಅರವಿಂದ್ ಬೆಲ್ಲದ್​ ವಿರುದ್ಧ ಅರುಣ್​ ಸಿಂಗ್​ಗೆ ದೂರು ನೀಡಲೂ ಕೆಲವು ಶಾಸಕರು ಕಾಯುತ್ತಿದ್ದಾರೆಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

ಹತ್ತು ದಿನಗಳಿಂದ ಅರಬಗಟ್ಟ ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದ ರೇಣುಕಾಚಾರ್ಯ ಬೆಂಗಳೂರಿಗೆ ದೌಡು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ