ರಾಜ್ಯದಲ್ಲಿ ನಾಯಕತ್ವ ಬದಲಾವಣೆಯದ್ದೇ ಬಿಸಿಬಿಸಿ ಚರ್ಚೆ. ಅದರಲ್ಲೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ರವರು ನಿನ್ನೆ ಇಲ್ಲಿಗೆ ಆಗಮಿಸಿದ ಮೇಲಂತೂ ಬಿಜೆಪಿ ರಾಜಕೀಯ ವಲಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಶುರುವಾಗಿದೆ. ಇವತ್ತಂತೂ ಅನೇಕ ಶಾಸಕರು ಅರುಣ್ ಸಿಂಗ್ರನ್ನು ಭೇಟಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಇಂದಿನ ಸಭೆಯನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ವರ್ಗಾಯಿಸಿದ್ದಾರೆ. ಇಂದು ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಸಭೆ ನಡೆಯುವುದಿತ್ತು. ಆದರೆ ಕೊನೇ ಕ್ಷಣದಲ್ಲಿ ಅರುಣ್ ಸಿಂಗ್ ಅದನ್ನು ಬಿಜೆಪಿ ಕಚೇರಿಗೆ ಸ್ಥಳಾಂತರಿಸಿದ್ದಾರೆ.
ನನ್ನನ್ನು ಭೇಟಿ ಮಾಡಲು ಬರುವವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಸಿಗಲಿ. ಬಿಜೆಪಿ ಕಚೇರಿಯಲ್ಲಿ ಸಭೆ ಮಾಡಿದರೆ ನಮ್ಮಿಬ್ಬರನ್ನೂ ಭೇಟಿಯಾಗಬಹುದಾಗಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ ಎನ್ನಲಾಗಿದೆ. ಇಂದು ಬಿಜೆಪಿಯ ಸಂಸದರು, ಶಾಸಕರು, ಪರಿಷತ್ ಸದಸ್ಯರ ಜತೆ ಅರುಣ್ ಸಿಂಗ್ ಸಭೆ ನಡೆಸಲಿದ್ದಾರೆ.
ಈ ಮಧ್ಯೆ ಅರುಣ್ ಸಿಂಗ್ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ. ಇನ್ನು ಕೊವಿಡ್ ಸೆಂಟರ್ನಲ್ಲಿದ್ದ ರೇಣುಕಾಚಾರ್ಯ ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಅರುಣ್ ಸಿಂಗ್ ಭೇಟಿಗೆ ಕಾಯುತ್ತಿದ್ದಾರೆ. ಇನ್ನು ಪಕ್ಷದ ವಿರುದ್ಧ ಈಗಾಗಲೇ ಅಸಮಾಧಾನಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ವಿರುದ್ಧ ಅರುಣ್ ಸಿಂಗ್ಗೆ ದೂರು ನೀಡಲೂ ಕೆಲವು ಶಾಸಕರು ಕಾಯುತ್ತಿದ್ದಾರೆಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ
ಹತ್ತು ದಿನಗಳಿಂದ ಅರಬಗಟ್ಟ ಕೊವಿಡ್ ಕೇರ್ ಸೆಂಟರ್ನಲ್ಲಿ ಇದ್ದ ರೇಣುಕಾಚಾರ್ಯ ಬೆಂಗಳೂರಿಗೆ ದೌಡು